ಕನ್ನಡ ವಿಶ್ವವಿದ್ಯಾಲಯದ ಉಪ ಕುಲಪತಿ ಮಲ್ಲಿಕಾ ಘಂಟಿ ವಿರುದ್ಧ ವಾರೆಂಟ್
ಭದ್ರಾವತಿ, ಅಕ್ಟೋಬರ್ 09 : ತಮ್ಮ ಹತ್ಯೆಗೆ ಕುವೆಂಪು ವಿವಿ ಸಿಬ್ಬಂದಿ ಸಂಚು ರೂಪಿಸಿದ್ದಾರೆಂದು ದೂರು ನೀಡಿ ವಿಚಾರಣೆಗೆ ಗೈರುಹಾಜರಾದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಮಲ್ಲಿಕಾ ಘಂಟಿ ವಿರುದ್ಧ ಭದ್ರಾವತಿ ಹೆಚ್ಚುವರಿ ಸಿವಿಲ್ ನ್ಯಾಯಾಲಯ ಜಾಮೀನು ಸಹಿತ ವಾರೆಂಟ್ ಜಾರಿ ಮಾಡಿದೆ.
ಕುವೆಂಪು ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದಾಗ ಕೆಲವು ಸಿಬ್ಬಂದಿ ತಮ್ಮ ಕೊಲೆಗೆ ಸಂಚು ರೂಪಿಸುತ್ತಿದ್ದಾರೆ ಎಂದು ಆರೋಪಿಸಿ ಮಲ್ಲಿಕಾ ಘಂಟಿ ಇಲ್ಲಿನ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದೇ ಪ್ರಕರಣದ ವಿಚಾರಣೆಗೆ ಡಾ. ಮಲ್ಲಿಕಾ ಘಂಟಿ ಗೈರಾಗಿದ್ದರಿಂದ ಕೋರ್ಟ್ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ.

ಇದರ ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್ ಜಾರಿ ಮಾಡಲಾಗಿತ್ತು. ಇದೇ ಪ್ರಕರಣದ ಆರೋಪಿಯಾಗಿದ್ದ ಅಂದಿನ ಪರೀಕ್ಷಾಂಗ ಕುಲಸಚಿವ ಪ್ರೊ. ಬೋಜಾ ನಾಯ್ಕ ಅವರ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ, ಉಳಿದ ಮೂವರ ವಿರುದ್ಧ ವಿಚಾರಣೆ ಇನ್ನು ನಡೆಯುತ್ತಿದೆ.
ಮಲ್ಲಿಕಾ ಘಂಟಿ ಅವರು, ಇತ್ತೀಚೆಗೆ ಸಮಾರಂಭವೊಂದರಲ್ಲಿ ಭಾಷಣ ಮಾಡುವಾಗ ''ಸರ್ಕಾರದಲ್ಲಿ ಸೂಟ್ ಕೇಸ್ ನೀಡದೆ ಯಾವ ಕೆಲಸವೂ ನಡೆಯುವುದಿಲ್ಲ. ಎಲ್ಲಿ ಎಲ್ಲವೂ ಹಣದ ಮೇಲೆಯೇ ನಿಂತಿರುತ್ತೆ'' ಎಂದು ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು.
ಘಂಟಿ ಹೇಳಿಕೆಗೆ ಸರಕಾರದ ಕಡೆಯಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿಯೂ ಘಂಟಿ ಹೇಳಿಕೆಗೆ ಅಸಮಧಾನ ವ್ಯಕ್ತಪಿಡಿಸಿ ಹೇಳಿಕೆ ನಿಜವಾಗಿದ್ದರೆ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದರು.
ಬಳಿಕ ಮಲ್ಲಿಕಾ ಘಂಟಿ ತಾವು ಹಾಗೆ ಹೇಳಿಯೇ ಇಲ್ಲ. ನನ್ನ ಹೇಳಿಕೆಯನ್ನು ಸುದ್ದಿ ಮಾಧ್ಯಮಗಳು ತಿರುಚಿ ಪ್ರಸಾರ ಮಾಡಿವೆ ಎಂದು ಸ್ಪಷ್ಟನೆ ನೀಡಿ ಕೈತೊಳೆದುಕೊಂಡಿದ್ದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications