ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಡಿಯೋ : ಭದ್ರಾವತಿ ಮಾಜಿ ಶಾಸಕ ಬಿ.ಕೆ.ಸಂಗಮೇಶ್ ಸಂದರ್ಶನ

|
Google Oneindia Kannada News

Recommended Video

ಭದ್ರಾವತಿ ಮಾಜಿ ಶಾಸಕ ಬಿ.ಕೆ.ಸಂಗಮೇಶ್ ಸಂದರ್ಶನ |

ಶಿವಮೊಗ್ಗ, ಏಪ್ರಿಲ್ 10 : 'ಕಳೆದ ಬಾರಿ ನಮ್ಮ ಪಕ್ಷದ ನಾಯಕರು ಮಾಡಿದ ಕೆಲವು ತಪ್ಪುಗಳಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧೆ ಮಾಡಬೇಕಾಯಿತು. ಈ ಬಾರಿ ನಾನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿಯೇ ಚುನಾವಣೆಗೆ ಸ್ಪರ್ಧಿಸುತ್ತೇನೆ' ಎಂದು ಬಿ.ಕೆ.ಸಂಗಮೇಶ್ ಹೇಳಿದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

ಕಾಂಗ್ರೆಸ್ ನಾಯಕ, ಭದ್ರಾವತಿ ಕ್ಷೇತ್ರದ ಮಾಜಿ ಶಾಸಕ ಬಿ.ಕೆ.ಸಂಗಮೇಶ್ 2018ರ ವಿಧಾನಸಭೆ ಚುನಾವಣೆ ಚುನಾವಣೆಗೆ ಸ್ಪರ್ಧಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. 2013ರ ಚುನಾವಣೆಯಲ್ಲಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು.

ಕ್ಷೇತ್ರ ಪರಿಚಯ : ಜೆಡಿಎಸ್, ಕಾಂಗ್ರೆಸ್ ಭದ್ರ ಕೋಟೆ ಭದ್ರಾವತಿ!ಕ್ಷೇತ್ರ ಪರಿಚಯ : ಜೆಡಿಎಸ್, ಕಾಂಗ್ರೆಸ್ ಭದ್ರ ಕೋಟೆ ಭದ್ರಾವತಿ!

'ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಪಕ್ಷದ ನಾಯಕರು ಟಿಕೆಟ್ ನೀಡುವ ಭರವಸೆ ಕೊಟ್ಟಿದ್ದಾರೆ. ಕ್ಷೇತ್ರದಲ್ಲಿ ಪ್ರಚಾರ ಕಾರ್ಯವನ್ನು ಆರಂಭಿಸಿದ್ದೇನೆ. ಭದ್ರಾವತಿ ಜನರು ಈ ಬಾರಿ ಆಶೀರ್ವಾದ ಮಾಡುತ್ತಾರೆ ಎಂಬ ನಂಬಿಕೆ ಇದೆ' ಎಂದರು.

Bhadravathi former MLA BK Sangamesh interview

ಒನ್ ಇಂಡಿಯಾ ಕನ್ನಡಕ್ಕೆ ನೀಡಿದ ಸಂದರ್ಶನದಲ್ಲಿ ಸಂಗಮೇಶ್ ಅವರು ಚುನಾವಣಾ ಸಿದ್ಧತೆ, ತಮ್ಮ ಎದುರಾಳಿ, ಕ್ಷೇತ್ರದ ಅಭಿವೃದ್ಧಿ ಬಗ್ಗೆ ಇರುವ ಚಿಂತನೆಗಳನ್ನು ಹೇಳಿದ್ದಾರೆ. ಸಂದರ್ಶನದ ವಿಡಿಯೋ ಇಲ್ಲಿದೆ ನೋಡಿ.

2004, 2008ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿ.ಕೆ.ಸಂಗಮೇಶ್ ಜಯಗಳಿಸಿದ್ದರು. 2013ರ ಚುನಾವಣೆಯಲ್ಲಿ ಸಿ.ಎಂ.ಇಬ್ರಾಹಿಂ ಅವರು ಭದ್ರಾವತಿಯಿಂದ ಸ್ಪರ್ಧಿಸಿದ ಕಾರಣ ಬಿ.ಕೆ.ಸಂಗಮೇಶ್ ಅವರಿಗೆ ಟಿಕೆಟ್ 'ಕೈ' ತಪ್ಪಿತ್ತು.

ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ 34,271 ಮತಗಳನ್ನು ಪಡೆದು ಜೆಡಿಎಸ್‌ನ ಎಂ.ಜೆ.ಅಪ್ಪಾಜಿ ಗೌಡ ವಿರುದ್ಧ ಸೋಲು ಕಂಡಿದ್ದರು. ಈ ಬಾರಿ ಕಾಂಗ್ರೆಸ್‌ ಟಿಕೆಟ್ ಸಿಗುವುದು ಖಚಿತವಾಗಿದ್ದು, ಪ್ರಚಾರ ಕಾರ್ಯವನ್ನು ಅವರು ಆರಂಭಿಸಿದ್ದಾರೆ.

English summary
B.K.Sangamesh interview : B.K.Sangamesh will contest for Karnataka assembly elections 2018 as Congress candidate from Bhadravathi assembly constituency, Shivamogga. In 2013 election he contested as interdependent candidate and lost the election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X