Get Updates
Get notified of breaking news, exclusive insights, and must-see stories!

ಮತ್ತೆ ಆರಂಭವಾಗಲಿದೆ ಶತಮಾನದ ಇತಿಹಾಸವುಳ್ಳ ಭದ್ರಾವತಿ ಉಕ್ಕಿನ ಕಾರ್ಖಾನೆ

1918ರಲ್ಲಿ ಮೊದಲ ವಿಶ್ವಯುದ್ಧದ ಅಂತ್ಯದ ವೇಳೆಗೆ ಶಿವಮೊಗ್ಗದ ಭದ್ರಾವತಿಯಲ್ಲಿ ಮೈಸೂರು ರಾಜಮನೆತನದಿಂದ ಆರಂಭಗೊಂಡ ಐತಿಹಾಸಿಕ ಉಕ್ಕಿನ ಕಾರ್ಖಾನೆಯು ದೇಶಕ್ಕೆ ಉತ್ತಮವಾದ ಉಕ್ಕನ್ನು ಪೂರೈಸಿದೆ. ಮುಚ್ಚಿಹೋಗಿದ್ದ ಕಾರ್ಖಾನೆ ಮತ್ತೆ ಕಾರ್ಯ ನಿರ್ವಹಿಸಲು ತಯಾರಾಗಿದೆ.

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ಈ ಬಗ್ಗೆ ಅಧಿಕೃತ ಆದೇಶ ನೀಡಿದ್ದು, ಈ ಐತಿಹಾಸಿಕ ಸ್ಥಾವರದಲ್ಲಿ ಆಗಸ್ಟ್ 10 ರಿಂದ ಎರಡು ಪಾಳಿಗಳಲ್ಲಿ ಸರದಿ ಆಧಾರದ ಮೇಲೆ ಉತ್ಪಾದನೆಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದೆ. ಎಲ್ಲಾ ನಿರ್ವಹಣೆ ಮತ್ತು ಸೇವಾ ಇಲಾಖೆಗಳು ಕಾರ್ಯಾಚರಣೆಯನ್ನು ಪುನರಾರಂಭಿಸಲು ಅಗತ್ಯ ವ್ಯವಸ್ಥೆಗಳನ್ನು ಮಾಡಲು ಪ್ರಾರಂಭಿಸಬೇಕಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Bhadravathis Historic Steel Factory Scheduled for Reopening on August 10

ಆಗಸ್ಟ್ 7 ರಂದು ಪೂರ್ವಭಾವಿಯಾಗಿ ಕಾಯಿಸುವ ಮೊದಲು ಎಲ್ಲಾ ಟ್ರಯಲ್ ಕಾರ್ಯಾಚರಣೆಗಳನ್ನು ಪೂರ್ಣಗೊಳಿಸಬೇಕು ಎಂದು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರದ ಆದೇಶದಲ್ಲಿ ತಿಳಿಸಲಾಗಿದೆ.

ಹಣಕಾಸು ಕೊರತೆ, ನಷ್ಟದ ಕಾರಣದಿಂದ ಭದ್ರಾವತಿ ಉಕ್ಕಿನ ಕಾರ್ಖಾನೆಯನ್ನು ಮುಚ್ಚಲಾಗಿದೆ ಎಂದು ಪರಿಗಣಿಸಿರುವ ಕಾರಣ ಕಾರ್ಮಿಕರು ಮತ್ತು ವಿಐಎಸ್ಎಲ್ ಭಾಗವಾಗಿದ್ದವರು, ಕಾರ್ಖಾನೆ ಪುನರಾರಂಭದ ಬಗ್ಗೆ ಹೆಚ್ಚಿನ ಉತ್ಸಾಹವನ್ನು ತೋರಿಲ್ಲ ಎಂದು ಮೂಲಗಳು ತಿಳಿಸಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮುಚ್ಚಲು ಕಾರಣವೇನು?

2023ರ ಫೆಬ್ರವರಿಯಲ್ಲಿ ಸಂಸತ್ತಿನಲ್ಲಿ ಉಕ್ಕಿನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಅಧಿಕೃತ ಹೇಳಿಕೆ ನೀಡಿದ್ದು, "ಹೆಚ್ಚಿನ ಉತ್ಪಾದನಾ ವೆಚ್ಚ, ಕಡಿಮೆ ಪ್ರಮಾಣದ ಉತ್ಪಾದನೆ ಮತ್ತು ಕಾರ್ಯಾಚರಣೆಯ ಕ್ಯಾಪ್ಟಿವ್ ಕಬ್ಬಿಣದ ಅದಿರು ಗಣಿ ಕೊರತೆಯಿಂದಾಗಿ ಉಕ್ಕಿನ ಉತ್ಪಾದನೆಗೆ ಅಗತ್ಯವಾದ ಕಚ್ಚಾ ವಸ್ತುಗಳನ್ನು ಕೊರತೆಯಿಂದ ಉಕ್ಕಿನ ಕಾರ್ಖಾನೆಯನ್ನು ಮುಚ್ಚಲಾಗಿದೆ." ಎಂದು ಸ್ಪಷ್ಟವಾಗಿ ಹೇಳಿದ್ದರು.

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಮಾರ್ಗದರ್ಶನದಿಂದ ಭದ್ರಾವತಿಯ ವಿಐಎಸ್‌ಎಲ್ ಘಟಕದಲ್ಲಿ ಉತ್ಪಾದನೆಯನ್ನು ಪ್ರಾರಂಭಿಸುತ್ತಿರುವುದಾಗಿ ಘೋಷಿಸಲು ನನಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆ.

ವಿಐಎಸ್ಎಲ್ ಕಾರ್ಖಾನೆಯನ್ನು ಅವಲಂಬಿಸಿರುವವರಿಗೆ ಮತ್ತು ಒಟ್ಟಾರೆ ಭದ್ರಾವತಿಯ ಎಲ್ಲಾ ಜನರಿಗೆ ಇದು ಮಹತ್ವದ ನಿರ್ಧಾರವಾಗಿದೆ ಎಂದು ಅವರು ಹೇಳಿದರು. ಬಿವೈ ರಾಘವೇಂದ್ರ ನೇತೃತ್ವದಲ್ಲಿ ಅಧಿಕಾರಿಗಳು ಮತ್ತು ತಜ್ಞರೊಂದಿಗೆ ಹಲವು ತಿಂಗಳುಗಳ ನಿರಂತರ ಸಭೆಗಳನ್ನು ನಡೆಸಲಾಗಿದೆ.

2024ರಲ್ಲಿ ಲೋಕಸಭಾ ಚುನಾವಣೆ ನಡೆಯಲಿರುವ ಕಾರಣ ಈ ಉಕ್ಕಿನ ಕಾರ್ಖಾನೆ ಆರಂಭ ಬಿಜೆಪಿಗೆ ರಾಜಕೀಯವಾಗಿಯೂ ಲಾಭ ತಂದುಕೊಡಲಿದೆ ಎನ್ನುವ ಲೆಕ್ಕಾಚಾರಗಳೂ ಇವೆ ಎಂಬ ಅಭಿಪ್ರಾಯ ರಾಜಕೀಯ ವಲಯದಲ್ಲಿ ಕೇಳಿಬಂದಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+