ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಭದ್ರಾವತಿಯ ಮಹಾತಾಯಿ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಮೇ 23: ಶಿವಮೊಗ್ಗದಲ್ಲಿ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸರ್ಜಿ ಆಸ್ಪತ್ರೆಯಲ್ಲಿ ಇವತ್ತು ಬೆಳಗ್ಗೆ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ. ಸದ್ಯ ನಾಲ್ಕು ಮಕ್ಕಳು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಭದ್ರಾವತಿ ತಾಲೂಕು ತಡಸಾ ಗ್ರಾಮದ ಆರೀಫ್ ಅವರ ಪತ್ನಿ ಅಲ್ಮಾಜ್ ಬಾನು (22) ಅವರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಅಲ್ಮಾಜ್ ಬಾನು ಅವರು ಸರ್ಜಿ ಆಸ್ಪತ್ರೆಗೆ ದಾಖಲಾಗಿದ್ದು, ಇವತ್ತು ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದರು. ಅಲ್ಮಾಜ್ ಬಾನು ಅವರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ನಾಲ್ಕು ಮಕ್ಕಳ ಪೈಕಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿವೆ.

ಕುಮಟಾದ ಡಾ. ಜಾನು ಆಸ್ಪತ್ರೆಯಲ್ಲಿ ಗೋಕರ್ಣ ಮಹಿಳೆಗೆ ತ್ರಿವಳಿ ಜನನಕುಮಟಾದ ಡಾ. ಜಾನು ಆಸ್ಪತ್ರೆಯಲ್ಲಿ ಗೋಕರ್ಣ ಮಹಿಳೆಗೆ ತ್ರಿವಳಿ ಜನನ

ನಾಲ್ವರು ಮಕ್ಕಳು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ಸರ್ಜಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ನಾಲ್ವರು ಮಕ್ಕಳ ಪೈಕಿ ಒಂದೊಂದು ಮಗು 1.1 ಕೆ.ಜಿ, 1.2 ಕೆ.ಜಿ, 1.3 ಕೆಜಿ, 1.8 ಕೆ.ಜಿ ಇದ್ದಾವೆ. ಆದರೆ ನಾಲ್ಕು ಮಕ್ಕಳಿಗೂ ಸ್ವಲ್ಪ ಪ್ರಮಾಣದ ಉಸಿರಾಟದ ಸಮಸ್ಯೆ ಇದೆ. ಹಾಗಾಗಿ 2 ಮಕ್ಕಳಿಗೆ ಸಿ ಪ್ಯಾಪ್ ಅಳವಡಿಸಲಾಗಿದೆ. ಇನ್ನು ಎರಡು ಮಕ್ಕಳಿಗೆ ಕೃತಕ ಆಕ್ಸಿಜನ್ ವ್ಯವಸ್ಥೆ ಮಾಡಲಾಗಿದೆ ಎಂದು ಸರ್ಜಿ ಆಸ್ಪತ್ರೆ ತಿಳಿಸಿದೆ.

ಒಂದೊಂದು ಮಗುವಿಗೆ ಒಬ್ಬರು ಮಹಿಳೆ ನಿಯೋಜನೆ

ಒಂದೊಂದು ಮಗುವಿಗೆ ಒಬ್ಬರು ಮಹಿಳೆ ನಿಯೋಜನೆ

ಎಲ್ಲಾ ಮಕ್ಕಳಿಗು ತಾಯಿ ಎದೆ ಹಾಲು ಕುಡಿಸಲು ಪ್ರಯತ್ನಿಸಲಾಗುತ್ತಿದೆ. ಅಲ್ಲದೆ ಕಾಂಗರೂ ಮದರ್ ಕೇರ್ ಮಾಡಲು ಕೂಡ ಆಸ್ಪತ್ರೆ ವ್ಯವಸ್ಥೆ ಮಾಡಿಕೊಂಡಿದೆ. ‘ಸಂಬಂಧಿಗಳಲ್ಲಿ ನಾಲ್ವರು ಮಹಿಳೆಯರಿಗೆ ತರಬೇತಿ ನೀಡಲಾಗುತ್ತದೆ. ಒಂದೊಂದು ಮಗುವಿಗೆ ಒಬ್ಬರು ಮಹಿಳೆಯನ್ನು ನಿಯೋಜನೆ ಮಾಡಲಾಗುತ್ತದೆ. ಆ ಮಗುವಿನ ಪಾಲನೆಯನ್ನು ಅವರು ಮಾಡಬೇಕು. ಇದರ ಜೊತೆಗೆ ಕಾಂಗರೂ ಮದರ್ ಕೇರ್ ಮಾಡಲಾಗುತ್ತದೆ.' ಎಂದು ಆಸ್ಪತ್ರೆ ನಿರ್ದೇಶಕ ಡಾ.ಧನಂಜಯ ಸರ್ಜಿ ತಿಳಿಸಿದರು.

ಹೆರಿಗೆ ಸಂದರ್ಭ ಅಧಿಕ ರಕ್ತಸ್ರಾವ ಸಾಧ್ಯತೆ

ಹೆರಿಗೆ ಸಂದರ್ಭ ಅಧಿಕ ರಕ್ತಸ್ರಾವ ಸಾಧ್ಯತೆ

ಇಂತಹ ಹೆರಿಗೆ ಮಾಡಿಸುವುದು ವೈದ್ಯರಿಗೆ ಅತ್ಯಂತ ಸವಾಲಿನ ಕೆಲಸ. ಈ ಪ್ರಕರಣಗಳಲ್ಲಿ ಅಧಿಕ ರಕ್ತಸ್ರಾವ ಉಂಟಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಅರವಳಿಕೆ ತಜ್ಞರನ್ನು ಇರಿಸಿಕೊಂಡು ಶಸ್ತ್ರಚಿಕಿತ್ಸೆ ನೆರವೇರಿಸಲಾಗುತ್ತದೆ. ಇವತ್ತಿನ ಶಸ್ತ್ರಚಿಕಿತ್ಸೆ ಸಂದರ್ಭ ಅರವಳಿಕೆ ತಜ್ಞ ಡಾ. ಮೂರ್ಕಣ್ಣಪ್ಪ ಅವರು ಭಾಗವಹಿಸಿದ್ದರು.

ಎಲ್ಲ ಮಕ್ಕಳಿಗೂ ಹಾಲು ಶುರು

ಎಲ್ಲ ಮಕ್ಕಳಿಗೂ ಹಾಲು ಶುರು

‘ಐದು ಲಕ್ಷ ಜನರಲ್ಲಿ ಒಬ್ಬರು ಮಾತ್ರ ನಾಲ್ಕು ಮಕ್ಕಳಿಗೆ ಜನ್ಮ ನೀಡುತ್ತಾರೆ. ತಾಯಿಗೆ 32 ವಾರ 5 ದಿನಗಳಾಗಿದ್ದು, ಇದು ಅವಧಿ ಪೂರ್ವ ಹೆರಿಗೆ. ತಾಯಿಗೆ ಅರವಳಿಕೆ ಕೊಡುಬೇಕಿರುವುದು ಮತ್ತು ಅಧಿಕ ರಕ್ತಸ್ರಾವ ಉಂಟಾಗುವ ಸಂಭವವಿರುತ್ತದೆ. ಇವುಗಳ ನಮಗೆ ತುಂಬಾ ಸವಾಲಾಗಿದ್ದವು. ಎಲ್ಲ ಮಕ್ಕಳಿಗೆ ಹಾಲು ಶುರು ಮಾಡಲಾಗಿದೆ. ಅವಧಿ ಪೂರ್ವವಾಗಿದ್ದರೂ ಮಕ್ಕಳ ತೂಕ ಈ ಹಂತದಲ್ಲಿ ಸರಿಯಾಗಿದೆ. ತಾಯಿಯ ಆರೋಗ್ಯವು ಚನ್ನಾಗಿದೆ' ಎಂದು ಸರ್ಜಿ ಆಸ್ಪತ್ರೆಯ ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞೆ ಡಾ. ಚೇತನಾ ತಿಳಿಸಿದ್ದಾರೆ.

ತೀವ್ರ ನಿಗಾ ಘಟಕದಲ್ಲಿ ಮಕ್ಕಳು

ತೀವ್ರ ನಿಗಾ ಘಟಕದಲ್ಲಿ ಮಕ್ಕಳು

ನಾಲ್ಕು ಮಕ್ಕಳಿಗೆ ಜನ್ಮ ನೀಡಲಾಗಿದೆ. ಸದ್ಯ ನಾಲ್ಕು ಮಕ್ಕಳನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಶಿಶುಗಳ ಮತ್ತು ಮಕ್ಕಳ ತಜ್ಞರಾದ ಡಾ. ಅನಿಲ್ ಬಿ.ಕಲ್ಲೇಶ್ ಅವರು ತಿಳಿಸಿದರು. ನಾಲ್ಕು ಮಕ್ಕಳನ್ನು ನೋಡಿಕೊಳ್ಳುವುದು ಸುಲಭದ ಕೆಲಸವಲ್ಲ. ನಾಲ್ಕು ಮಕ್ಕಳಿಗೆ ತಾಯಿಯ ಹಾಲು ಕೊಡುವುದು, ಅವುಗಳ ಆರೈಕೆ ಮಾಡುವುದು ಸುಲಭವಲ್ಲ. ತಾಯಿ ಮತ್ತು ಮಕ್ಕಳನ್ನು ಕುಟುಂಬದವರು ಸೂಕ್ಷ್ಮವಾಗಿ ಆರೈಕೆ ಮಾಡಬೇಕಾಗುತ್ತದೆ ಎಂದು ಸ್ತ್ರೀ ಮತ್ತು ಪ್ರಸೂತಿ ರೋಗ ತಜ್ಞೆ ಡಾ. ಚೇತನಾ ತಿಳಿಸಿದ್ದಾರೆ.

‘ನಾಲ್ಕು ಮಕ್ಕಳು ಇರುವ ಸಂದರ್ಭ ಶಸ್ತ್ರಚಿಕಿತ್ಸೆ ವೈದ್ಯರಿಗೆ ದೊಡ್ಡ ಸವಾಲಿನ ಕೆಲಸ. ಈಗ ಅವುಗಳನ್ನು ನೊಡಿಕೊಳ್ಳುವುದು ಕುಟುಂಬದವರಿಗೆ ಅಷ್ಟೆ ಸವಾಲಿನ ಕೆಲಸವಾಗಿದೆ. ಈ ಮಕ್ಕಳು ಮೂರು ವಾರ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ. ಅವರಿಗೆ ಆರ್ಥಿಕವಾಗಿ ಹೊರೆ ಆಗಲಿದೆ. ಆದರೆ ಈ ನಾಲ್ವರು ಮಕ್ಕಳಿಗೆ ಅತಿ ಕಡಿಮೆ ದರದಲ್ಲಿ ಚಿಕಿತ್ಸೆ ನೀಡಲಿದ್ದೇವೆ' ಎಂದು ಡಾ.ಧನಂಜಯ ಸರ್ಜಿ ತಿಳಿಸಿದರು.

English summary
A woman gives birth to four children in Shivamogga. Maternity surgery was performed this morning at the Sarji Hospital. Four children and a mother are stable said Dr Chetana.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X