ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ: ಫೋನ್ ಪೇ ಮಾಡಿಸಿಕೊಂಡು ಹಣ ರಾಬರಿ!

|
Google Oneindia Kannada News

ಶಿವಮೊಗ್ಗ, ಮೇ 28: ರಾತ್ರಿ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನನ್ನು ಅಡ್ಡಗಟ್ಟಿ ಹಣವನ್ನು ಫೋನ್ ಪೇ ಮಾಡಿಸಿಕೊಂಡು ದರೋಡೆ ಮಾಡಲಾಗಿದೆ.

ಶಿವಮೊಗ್ಗದ ರೈಲ್ವೆ ನಿಲ್ದಾಣ ಸಮೀಪ ಘಟನೆ ಸಂಭವಿಸಿದೆ. ತಾಲೂಕಿನ ಹೊಯ್ಸನಹಳ್ಳಿ ವಿಜಯ ಕುಮಾರ್ (24) ಎಂಬುವವರನ್ನು ಅಡ್ಡಗಟ್ಟಿ ದರೋಡೆ ಮಾಡಲಾಗಿದೆ. ಸವಳಂಗ ರಸ್ತೆಯಲ್ಲಿರುವ ಪರ್ಫೆಕ್ಟ್ ಅಲಾಯ್ಸ್ ಕಂಪನಿಯಲ್ಲಿ ವಿಜಯ ಕುಮಾರ್ ಕೆಲಸ ಮಾಡುತ್ತಿದ್ದಾರೆ. ರಾತ್ರಿಪಾಳಿ ಇದ್ದಿದ್ದರಿಂದ ವಿಜಯ್ ಕುಮಾರ್ ಅವರು ಮನೆಯಿಂದ ರೈಲ್ವೆ ನಿಲ್ದಾಣ ಮಾರ್ಗವಾಗಿ ಸವಳಂಗ ರಸ್ತೆ ಕಡೆ ತೆರಳುತ್ತಿದ್ದರು.

ಇಲ್ಲಿನ ಅಮೀರ್ ಅಹಮದ್ ಕಾಲೋನಿ ಬಳಿ ವಿಜಯ್ ಕುಮಾರ್ ಬೈಕನ್ನು ನಾಲ್ವರು ಅಡ್ಡಗಟ್ಟಿದ್ದಾರೆ. ಪರ್ಸ್ ಕಿತ್ತುಕೊಂಡು ಹಣ ಮತ್ತು ಕೊರಳಲ್ಲಿದ್ದ ಚಿನ್ನದ ಸರವನ್ನು ಕಸಿದುಕೊಂಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದೆ ಹಣವನ್ನು ಫೋನ್ ಪೇ ಮಾಡುವಂತೆ ಬೆದರಿಕೆ ಒಡ್ಡಿದ್ದು, ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿಸಿ, ಹಣ ವರ್ಗಾಯಿಸಿಕೊಂಡಿದ್ದಾರೆ. ವಿಜಯ್ ಕುಮಾರ್ ಅವರು ಜಯನಗರ ಠಾಣೆಗೆ ದೂರು ನೀಡಿದ್ದಾರೆ. ರಾಬರಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Shivamogga: bike robbery gang near railway station

ಮಚ್ಚಿನಿಂದ ಮಾರಣಾಂತಿಕ ಹಲ್ಲೆ: ಮೂವರಿಗೆ ಜೈಲು ಶಿಕ್ಷೆ
ಹಳೆ ದ್ವೇಷದ ಹಿನ್ನೆಲೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಮೂವರು ಆರೋಪಿಗಳಿಗೆ ಜೈಲು ಶಿಕ್ಷೆಯಾಗಿದೆ. ವಿಚಾರಣೆ ನಡೆಸಿದ ಶಿವಮೊಗ್ಗ ನ್ಯಾಯಾಲಯದ ನ್ಯಾಯಾಧೀಶರು, ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ಪ್ರಕಟಿಸಿದ್ದಾರೆ.

ಹರೀಶ್ (24) ಎಂಬಾತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಈ ಸಂಬಂಧ ಮಂಜುನಾಥ ಅಲಿಯಾಸ್ ಕಟ್ಟಿಂಗ್ ಶಾಪ್ ಮಂಜ, ಅನಿಲ, ಪ್ರಶಾಂತ್ ಅಲಿಯಾಸ್ ಕೊಡ್ಲಿ ಪ್ರಶಾಂತ್ ಎಂಬುವವರಿಗೆ ಜೈಲು ಶಿಕ್ಷೆಯಾಗಿದೆ. ಶಿವಮೊಗ್ಗದ ಹೊಸಮನೆ ಬಡಾವಣೆಯ ಚಾನಲ್ ಏರಿಯಾದಲ್ಲಿ ನಡೆದು ಹೋಗುತ್ತಿದ್ದ ಹರೀಶ್ ಮೇಲೆ ಮಚ್ಚಿನಿಂದ ದಾಳಿ ನಡೆಸಲಾಗಿತ್ತು. ಹಳೆ ದ್ವೇಷದ ಹಿನ್ನೆಲೆ ಮಾರಣಾಂತಿಕವಾಗಿ ದಾಳಿ ಮಾಡಲಾಗಿತ್ತು. 2016ರ ಜೂನ್ 17ರಂದು ಘಟನೆ ಸಂಭವಿಸಿತ್ತು. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Shivamogga: bike robbery gang near railway station

ಆಗ ದೊಡ್ಡಪೇಟೆ ಠಾಣೆ ಪಿಎಸ್ಐ ಆಗಿದ್ದ ಅಭಯ ಪ್ರಕಾಶ್ ಸೋಮನಾಳ್ ಅವರು ತನಿಖೆ ನಡೆಸಿದರು. 2017ರಲ್ಲಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮನು ಅವರು ವಿಚಾರಣೆ ನಡೆಸಿದರು. ಆರೋಪ ಸಾಭೀತಾದ ಹಿನ್ನೆಲೆ ಮೂವರು ಅಪರಾಧಿಗಳಿಗೆ ಶಿಕ್ಷೆ ವಿಧಿಸಿದ್ದಾರೆ.

ಕೊಲೆ ಯತ್ನ (ಐಪಿಸಿ ಸೆಕ್ಷನ್ 307) ಆರೋಪ ಸಾಬೀತಾದ ಹಿನ್ನೆಲೆ 7 ವರ್ಷ ಕಠಿಣ ಜೈಲು ಶಿಕ್ಷೆ, 40 ಸಾವಿರ ರೂ. ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದರೆ 4 ತಿಂಗಳು ಹೆಚ್ಚುವರಿಯಾಗಿ ಸಾದ ಜೈಲು ಶಿಕ್ಷೆ. ಇನ್ನು, ಶಸ್ತ್ರಾಸ್ತ್ರಗಳಿಂದ ಉದ್ದೇಶಪೂರ್ವಕಾಗಿ ಹಲ್ಲೆ (ಐಪಿಸಿ ಸೆಕ್ಷನ್ 324) ಆರೋಪ ಸಾಬೀತಾದ ಹಿನ್ನೆಲೆ 2 ವರ್ಷ ಕಠಿಣ ಜೈಲು ಶಿಕ್ಷೆ, 10 ಸಾವಿರ ದಂಡ ವಿಧಿಸಲಾಗಿದೆ. ದಂಡ ಕಟ್ಟಲು ವಿಫಲವಾದರೆ 1 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸಲಾಗಿದೆ. ರತ್ನಮ್ಮ ಅವರು ಸರ್ಕಾರಿ ಅಭಿಯೋಜಕರಾಗಿ ವಾದ ಮಂಡಿಸಿದ್ದರು.

English summary
A young man riding a bike at night has been robbed by making a pay phone.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X