ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಗಿಗುಡ್ಡದಲ್ಲಿ ಜೈವಿಕ ವನ ಅಭಿವೃದ್ಧಿ: ಸಚಿವ ಕೆ.ಎಸ್.ಈಶ್ವರಪ್ಪ

|
Google Oneindia Kannada News

ಶಿವಮೊಗ್ಗ, ಆ.12: ಶಿವಮೊಗ್ಗ ನಗರದಲ್ಲಿರುವ ರಾಗಿಗುಡ್ಡದಲ್ಲಿ ಲಭ್ಯವಿರುವ ಸುಮಾರು 20 ಎಕರೆ ಕಂದಾಯ ಜಮೀನಿನಲ್ಲಿ ಜೈವಿಕ ವನ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಅಧಿಕಾರಿಗಳಿಗೆ ಬುಧವಾರದಂದು ಸೂಚನೆ ನೀಡಿದರು.

ಜೈವಿಕ ವನ ಅಭಿವೃದ್ಧಿ ಕುರಿತು ಜಿಲ್ಲಾಡಳಿತ ಸಭಾಂಗಣದಲ್ಲಿ ವಿವಿಧ ಇಲಾಖಾ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಸ್ಮಾರ್ಟ್ ಸಿಟಿ ಮುಖ್ಯ ಇಂಜಿನಿಯರ್ ಶಿವಕುಮಾರ್ ಕೆ.ಪಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರ್ ಮತ್ತಿತರರು ಉಪಸ್ಥಿತರಿದ್ದರು

ಶಿವಮೊಗ್ಗ ಜಿಲ್ಲೆಯಲ್ಲಿ ಸತತ ಮಳೆ, ಅಣೆಕಟ್ಟಿನ ನೀರಿನ ಮಟ್ಟ ಎಷ್ಟು?ಶಿವಮೊಗ್ಗ ಜಿಲ್ಲೆಯಲ್ಲಿ ಸತತ ಮಳೆ, ಅಣೆಕಟ್ಟಿನ ನೀರಿನ ಮಟ್ಟ ಎಷ್ಟು?

ಸ್ಮಾರ್ಟ್ ಸಿಟಿ ಯೋಜನೆಯಡಿ ಶಿವಮೊಗ್ಗ ನಗರದ ಹಸಿರೀಕರಣಕ್ಕಾಗಿ 3.86ಕೋಟಿ ರೂ. ಮೀಸಲಿರಿಸಲಾಗಿದ್ದು, ಇದನ್ನು ಬಳಸಿಕೊಂಡು ಜೈವಿಕ ವನ ಅಭಿವೃದ್ಧಿಪಡಿಲು ಉದ್ದೇಶಿಸಲಾಗಿದೆ. ಮಲೆನಾಡಿನಲ್ಲಿ ಸ್ಥಳೀಯವಾಗಿ ಲಭ್ಯವಿರುವ ಉತ್ತಮ ಸಸಿಗಳನ್ನು ಬಳಸಿಕೊಂಡು ವನ ಅಭಿವೃದ್ಧಿಪಡಿಸಲು ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು. ಇದರಲ್ಲಿ ಮುಂದಿನ ಐದು ವರ್ಷಗಳ ನಿರ್ವಹಣೆಯೂ ಸೇರಿರಬೇಕು. ಒಟ್ಟು 7ಸಾವಿರ ಸಸಿಗಳನ್ನು ನೆಡುವ ಗುರಿಯನ್ನು ಹೊಂದಲಾಗಿದೆ ಎಂದು ಸಚಿವರು ತಿಳಿಸಿದರು.

Biologocal Park will be built Ragigudda, Shivamogga

ರಾಗಿಗುಡ್ಡದ 112 ಸರ್ವೆ ನಂಬರಿನಲ್ಲಿ ಒಟ್ಟು 69ಎಕ್ರೆ ಜಮೀನು ಇದ್ದು, ಇದರಲ್ಲಿ ವಿವಿಧ ಉದ್ದೇಶಗಳಿಗಾಗಿ ಒಟ್ಟು 43ಎಕ್ರೆ ಈಗಾಗಲೇ ಮಂಜೂರು ಮಾಡಲಾಗಿದೆ. ಇದರಲ್ಲಿ 5ಎಕ್ರೆ ಇಎಸ್‍ಐ ಆಸ್ಪತ್ರೆ, 8ಎಕ್ರೆ ಪ್ರಾದೇಶೀಕ ವಿಜ್ಞಾನ ಕೇಂದ್ರ, 5ಎಕ್ರೆ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಸೇರಿದೆ. ಇನ್ನೂ ಕೆಲವು ಪ್ರಸ್ತಾವನೆಗಳನ್ನು ಅನುಮೋದನೆಗಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಮತಾಂಧರ ಗಲಭೆಯನ್ನು ಸಜ್ಜನ ಮುಸಲ್ಮಾನರು ಖಂಡಿಸಬೇಕು: ಈಶ್ವರಪ್ಪಮತಾಂಧರ ಗಲಭೆಯನ್ನು ಸಜ್ಜನ ಮುಸಲ್ಮಾನರು ಖಂಡಿಸಬೇಕು: ಈಶ್ವರಪ್ಪ

ಇಲ್ಲಿ 18ಎಕ್ರೆ ಲಭ್ಯವಿದ್ದು, ಜೈವಿಕ ಉದ್ಯಾನಕ್ಕೆ ಬಳಸಿಕೊಳ್ಳಬಹುದಾಗಿದೆ. ಇನ್ನೂ 2ಎಕ್ರೆ ಲಭ್ಯವಿದೆ. ಇದೇ ರೀತಿ ಉದ್ದೇಶಿತ ವಾಜಪೇಯಿ ಬಡಾವಣೆಯಲ್ಲಿ 10ಎಕ್ರೆ ಮೀಸಲು ಅರಣ್ಯವಿದ್ದು ಇಲ್ಲಿಯೂ ಸಸಿಗಳನ್ನು ನೆಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.

Biologocal Park will be built Ragigudda, Shivamogga

ರಾಗಿಗುಡ್ಡದಲ್ಲಿ ಸುಮಾರು 20ಗುಂಟೆ ಜಮೀನು ಒತ್ತುವರಿ ಮಾಡಿ 22ಮನೆಗಳನ್ನು ನಿರ್ಮಿಸಲಾಗಿದ್ದು, ಇದನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಈ ಸಂದರ್ಭದಲ್ಲಿ ತಿಳಿಸಿದರು. (ಮಾಹಿತಿ ಕೃಪೆ: ವಾರ್ತಾ ಇಲಾಖೆ)

English summary
Biologocal Park will be built in 20 Acres of Ragigudda area, Shivamogga said district in charge K.S Eshwarappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X