ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿಕಾರಿಪುರ: ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಅಕ್ಟೋಬರ್ 18: ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ನೂರಕ್ಕೆ ನೂರರಷ್ಟು ಗೆಲ್ಲಲಿದ್ದಾರೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾವು ಪ್ರತಿನಿಧಿಸುವ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಎರಡೂ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ದೊಡ್ಡ ಅಂತರದಿಂದ ಗೆಲ್ಲುವ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಮೂರು ದಿನದಿಂದ ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ಅವರು ಶಿರಾದಲ್ಲೇ ವಾಸ್ತವ್ಯ ಹೂಡಿದ್ದಾರೆ ಎಂದರು.

ಸಿಎಂ ಯಡಿಯೂರಪ್ಪನವರ ಶಿವಮೊಗ್ಗ ಜಿಲ್ಲಾ ಪ್ರವಾಸದ ಮಾಹಿತಿ ಇಲ್ಲಿದೆಸಿಎಂ ಯಡಿಯೂರಪ್ಪನವರ ಶಿವಮೊಗ್ಗ ಜಿಲ್ಲಾ ಪ್ರವಾಸದ ಮಾಹಿತಿ ಇಲ್ಲಿದೆ

ಬಿ.ವೈ ವಿಜಯೇಂದ್ರ ಮುಂದಾಳತ್ವದ ಚುನಾವಣಾ ಪ್ರಚಾರ ಶಿರಾದಲ್ಲಿ ನಡೆಯುತ್ತಿದೆ, ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ಠೇವಣಿ ಪಡೆಯುವುದಿಲ್ಲ ಎಂದುಕೊಂಡಿದ್ದೆವು. ಇಂದಿನ ಸ್ಥಿತಿಯನ್ನು ನೋಡಿದರೆ ಶಿರಾದಲ್ಲಿಯೂ ನಾವು ಗೆಲ್ಲುತ್ತೇವೆ ಎಂದು ಶಿಕಾರಿಪುರದಲ್ಲಿ ಹೇಳಿದರು.

Shivamogga: BJP Candidates Will Win In Sira And RR Nagara By-Election: CM Yediyurappa

ಮಲೆನಾಡು ಭಾಗದಲ್ಲಿ ಸಕಾಲದಲ್ಲಿ ಉತ್ತಮ‌ ಮಳೆಯಾಗಿದ್ದು, ಜನ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದಾರೆ. ಆದರೆ ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶವಾಗಿ ಜನ ಸಂಕಷ್ಟಕ್ಕೊಳಗಾಗಿದ್ದಾರೆ ಎಂದರು.

ಉತ್ತರ ಕರ್ನಾಟಕದಲ್ಲಿ ದೇವರ ದಯೆಯಿಂದ ಇನ್ನಾದರೂ ಮಳೆ ನಿಂತು ಜನರಿಗೆ ಉತ್ತಮ ಬೆಳೆ ಸಿಗುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ. ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಕೆಲಸ ಈಗಾಗಲೇ ಆರಂಭಿಸಲಾಗಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ‌ ಮೋದಿ ಅವರು ಹೆಚ್ಚಿನ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಸಂತ್ರಸ್ತರ ನೆರವಿಗೆ ಶಕ್ತಿ ಮೀರಿ ಪ್ರಯತ್ನಿಸುತ್ತೇವೆ ಎಂದ ಸಿಎಂ ಯಡಿಯೂರಪ್ಪ, ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಸದ ಬಿ.ವೈ‌ ರಾಘವೇಂದ್ರ ಏನು ಕೆಲಸ ಮಾಡಬೇಕೋ ಅದನ್ನು ಮಾಡಿದ್ದಾರೆ ಎಂದರು.

Shivamogga: BJP Candidates Will Win In Sira And RR Nagara By-Election: CM Yediyurappa

ಶಿಕಾರಿಪುರ ತಾಲೂಕಿಗೆ ಇನ್ನು ಏನೂ ಅಭಿವೃದ್ಧಿ ಕಾಮಗಾರಿಗಳ ಅಗತ್ಯವಿಲ್ಲ. ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣವಾದರೆ ಶಿವಮೊಗ್ಗ ಜಿಲ್ಲೆಗೆ ಕೈಗಾರಿಕೆಗಳು ಬರಲು ಅನುಕೂಲವಾಗಲಿದೆ ಎಂದು ಇದೇ ವೇಳೆ ತಿಳಿಸಿದರು.

ಶಿಕಾರಿಪುರಕ್ಕೆ ಆಗಮಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಕೆ.ಎಸ್ ಗುರುಮೂರ್ತಿ ಅವರು ಸ್ವಾಗತಿಸಿದರು.

English summary
CM BS Yediyurappa said that, BJP candidates will win in the Sira and Rajarajeshwari Nagar by-elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X