ರಾಜೀನಾಮೆ ಬಗ್ಗೆ ಆಯನೂರು ಮಂಜುನಾಥ್ ಅಧಿಕೃತ ಘೋಷಣೆ: ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ?
ಬೆಂಗಳೂರು, ಏಪ್ರೀಲ್ 03: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದೆ. ಈ ಭಾರಿ ಬಿಜೆಪಿಗೆ ಮತ್ತೊಬ್ಬ ನಾಯಕ ಶಾಕ್ ನೀಡಿದ್ದಾರೆ.
ಇತ್ತೀಚೆಗಷ್ಟೇ ಇಬ್ಬರು ವಿಧಾನಪರಿಷತ್ ಶಾಸಕರು ಮತ್ತು ಒಬ್ಬರ ಶಾಸಕರು ಕೇಸರಿ ಪಡೆ ಬಿಟ್ಟು ಬೇರೆ ಪಕ್ಷ ಸೇರಿದ್ದರು. ಇದೀಗ ಮತ್ತೊಬ್ಬರಾದ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್ ಅವರು ತಾವು ಬಿಜೆಪಿಯಲ್ಲಿನ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.

ಬಿಜೆಪಿಯ ಹಿರಿಯ ಮುಖಂಡರಾದ ಆಯನೂರು ಮಂಜುನಾಥ್ ಅವರಿಗೆ ಶಾಸಕರಾಗಿ, ಲೋಕಸಭೆ ಸದಸ್ಯರಾಗಿ (ಸಂಸದ) ಸೇವೆ ಮಾಡಿದ ಅನುಭವ ಹೊಂದಿದ್ದಾರೆ. ಇವರು ಶಿವಮೊಗ್ಗ ಕ್ಷೇತ್ರದಿಂದ ಕಣ್ಣಕ್ಕಿಯುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದರು. ಆದರೆ ಪಕ್ಷದ ನಾಯಕರಿಂದ ಟಿಕೆಟ್ ನೀಡುವ ಬಗ್ಗೆ ಯಾವುದೇ ಸ್ಪಂದನೆ ದೊರತಿಲ್ಲ. ಹೀಗಾಗಿ ಅವರು ತಮ್ಮ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ಆಯನೂರು ಮಂಜುನಾಥ್ ಅವರ ಈ ನಿರ್ಧಾರದಿಂದ ಬಿಜೆಪಿ ಭದ್ರಕೋಟೆ ಎನ್ನಲಾಗುವ ಶಿವಮೊಗ್ಗದಲ್ಲಿ ಬಿಜೆಪಿಗೆ ಹಿನ್ನಡೆ ಆಗುವ ಇಲ್ಲವೇ ಚುನಾವಣೆ ಸಂದರ್ಭದಲ್ಲಿ ಒಂದಷ್ಟು ಕೆಟ್ಟ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗುತ್ತಿದೆ. ಆದರೆ ಇದ್ಯಾವುದನ್ನು ತಲೆ ಕೆಡಿಸಿಕೊಳ್ಳದ ಬಿಜೆಪಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು 2023ರ ಚುನಾವಣೆಯಲ್ಲಿ ಕಣಕ್ಕಿಳಿಸುವ ಬಗ್ಗೆ ನಿರ್ಧರಿಸಿದೆ. ಅಭ್ಯರ್ಥಿಗಳ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಇನ್ನೇನು ಬಿಡುಗಡೆಯಾಗಬೇಕಿದೆ.

ಯಾವ ಪಕ್ಷಕ್ಕೆ ಸೇರುತ್ತಾರೆ ಮಂಜುನಾಥ್?
ಈ ಎಲ್ಲ ಕಾರಣಗಳಿಂದ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿರುವ ಆಯನೂರು ಮಂಜುನಾಥ್ ಅವರು ಯಾವ ಪಕ್ಷದೊಂದಿಗೆ ಕೈ ಜೋಡಿಸುತ್ತಾರೆ. ಇಲ್ಲ ಚುನಾವಣೆಯಲ್ಲಿ ತಾವು ಬಯಸಿದ ಶಿವಮೊಗ್ಗ ಕ್ಷೇತ್ರದಿಂದಲೇ ಪಕ್ಷೇತರವಾಗಿ ನಿಲ್ಲುತ್ತಾರಾ? ಎಂದು ಕಾದು ನೋಡಬೇಕಿದೆ. ಆದರೆ ತಾವು ಇಂತಹ ಪಕ್ಷ ಸೇರುತ್ತೇನೆ ಎಂಬುದರ ಬಗ್ಗೆ ಅವರು ಗೌಪ್ಯತೆ ಕಾಯ್ದುಕೊಂಡಿದ್ದಾರೆ. ಈ ಬಗ್ಗೆ ಸ್ಪಷ್ಟತೆ ಹೊರ ಬರಬೇಕಿದೆ.
ಶಿವಮೊಗ್ಗದಲ್ಲಿ ಮಂಗಳವಾರ ಸುದ್ದಿಗಾರ ಪ್ರಶ್ನೆಗಳಿಗೆ ಉತ್ತರಿಸಿದ ಮಾಜಿ ಶಾಸಕ ಆಯನೂರು ಮಂಜುನಾಥ್ ಅವರು, ಬಿಜೆಪಿಯ ಹಿರಿಯ ಮುಖಂಡ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಒಡೆದು ಆಳುವ ರಾಜಕಾರಣ ಮಾಡುತ್ತಿದ್ದಾರೆ. ನನ್ನ ಬಗ್ಗೆ ತುಂಬಾ ಕೇವಲವಾಗಿ ಅವರು ಮಾತನಾಡಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಅವರನ್ನೇ ನೇರವಾಗಿ ಗುರಿಯಾಗಿಸಿಕೊಂಡಿದ್ದೇನೆ. ಶೀಘ್ರದಲ್ಲೇ ನನ್ನ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಈಶ್ವರಪ್ಪ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿರುವುದಾಗಿ ಮಂಜುನಾಥ್ ತಿಳಿಸಿದರು.
ಶಿವಮೊಗ್ಗದಲ್ಲಿ ಪಕ್ಷೇತರವಾಗಿ ಅಖಾಡಕ್ಕೆ ಮಂಜುನಾಥ್
ಮಂಜುನಾಥ್ ಅವರು ಬಿಜೆಪಿಯಿಂದ ಟಿಕೆಟ್ ಕೇಳಿದ್ದರು ಆದರೆ ಪಕ್ಷದಿಂದ ಅವರು ಕನಿಷ್ಠ ಭರವಸೆಯು ಸಿಗಲಿಲ್ಲ. ಈಶ್ವರಪ್ಪ ಎಷ್ಟು ಜನಪ್ರಿಯ ನಾಯಕರೆಂದರೆ ಶಿವಮೊಗ್ಗ ಹೊರತುಪಡಿಸಿ ಬೇರೆಲ್ಲೂ ಚುನಾವಣೆಯಲ್ಲಿ ಸ್ಪರ್ಧಿಸಿದರೂ ಅವರು ಗೆಲ್ಲಲು ಸಾಧ್ಯವಿಲ್ಲ. ಸ್ವಲ್ಪ ದಿನಗಳ ಹಿಂದೆ ಈಶ್ವರಪ್ಪ ಬೆಂಬಲಿಗರು ಮತದಾರರಿಗೆ ಹಂಚಲು ಇಟ್ಟುಕೊಂಡಿದ್ದರು ಎನ್ನಲಾದ ಸುಮಾರು 1.5 ಕೋಟಿ ಮೌಲ್ಯದ ಸೀರೆಯೊಂದಿಗೆ ಸಿಕ್ಕಿ ಬಿದ್ದಿದ್ದರು. ಮುಸ್ಲಿಮರು, ಹಿಂದೂಗಳು ಮತ್ತು ಶಿವಮೊಗ್ಗ ಪೊಲೀಸರಿಗೆ ಎಚ್ಚರಿಕೆ ನೀಡುತ್ತಿದ್ದೇನೆ. ಚುನಾವಣೆಗೂ ಮುನ್ನ ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯಬಹುದು ಎಂದು ಮಂಜುನಾಥ್ ಮಾಹಿತಿ ನೀಡಿದರು.
-
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications