ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ: ಕಾರ್ಗಲ್ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿಗೆ ಅಧಿಕಾರ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ನವೆಂಬರ್ 4: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಾರ್ಗಲ್ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಅಧ್ಯಕ್ಷರಾಗಿ ವಸಂತಿ ರಮೇಶ್ ಉಪಾಧ್ಯಕ್ಷರಾಗಿ ಸಿ.ಮಂಜುನಾಥ್ ಆಯ್ಕೆಯಾಗಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಬಿಸಿಎಂ ಮಹಿಳೆಗೆ ಮೀಸಲಾದ ಕಾರಣ, ವಸಂತಿ ರಮೇಶ್ ಅವರಿಗೆ ಪೈಪೋಟಿಯೇ ಇರಲಿಲ್ಲ. ಇವರ ಆಯ್ಕೆ ಬಹುತೇಕ ಖಚಿತವಾಗಿತ್ತು. 11 ಜನರ ಪ.ಪಂ ಸದಸ್ಯರಲ್ಲಿ 9 ಜನ ಬಿಜೆಪಿ ಪರ ಇರುವುದರಿಂದ ಇವರ ಆಯ್ಕೆ ಬಹುತೇಕ ಖಚಿತವಾಗಿತ್ತು.

ಶಿವಮೊಗ್ಗದಲ್ಲಿ ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್: ಮೂವರ ಬಂಧನ ಶಿವಮೊಗ್ಗದಲ್ಲಿ ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್: ಮೂವರ ಬಂಧನ

ಪಕ್ಷೇತರ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ಸೇರಿ 11 ಜನರ ಸದಸ್ಯರ ಸಂಖ್ಯೆಯನ್ನು ಪಟ್ಟಣ ಪಂಚಾಯಿತಿ ಹೊಂದಿದೆ. ಆದರೆ ಕಾಂಗ್ರೆಸ್ ಅಭ್ಯರ್ಥಿ ರಾಜು ಅವರ ನಡೆ ಅಚ್ಚರಿ ಮೂಡಿಸಿತ್ತು.

Shivamogga: BJP To Powers In Kargal Town Panchayat

ಇಂದು ಬೆಳಿಗ್ಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈ ನಾಮಪತ್ರ ಸಲ್ಲಿಸುವ ವೇಳೆ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನ ರಾಜು ಅವರು ಸಹ ನಾಮಪತ್ರ ಸಲ್ಲಿಸಿ ಅಚ್ಚರಿ ಮೂಡಿಸಿದ್ದರು. ಆದರೆ ಆಯ್ಕೆ ಪ್ರಕ್ರಿಯೆ ವೇಳೆ ಸೂಚಕರು ಇಲ್ಲದ ಕಾರಣ ಅವರ ನಾಮ ಪತ್ರ ತಿರಸ್ಕೃತಗೊಂಡಿತು.

ಈ ಹಿನ್ನೆಲೆಯಲ್ಲಿ ಕಾರ್ಗಲ್ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾಗಿ ವಸಂತಿ ರಮೇಶ್ ಹಾಗೂ ಉಪಾಧ್ಯಕ್ಷರಾಗಿ ಸಿ.ಮಂಜುನಾಥ್ ಅವಿರೋಧವಾಗಿ ಆಯ್ಕೆಯಾಗಿದ್ದು, ಕಾರ್ಗಲ್ ಪಟ್ಟಣ ಪಂಚಾಯಿತಿಯಲ್ಲಿ ಬಿಜೆಪಿ ಪಕ್ಷ ಆಡಳಿತ ವಹಿಸಿಕೊಂಡಿದೆ.

English summary
The BJP came to power in the Kargal town panchayat of Sagara taluk in Shivamogga district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X