ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ; ಸ್ಫೋಟ ನಡೆದ ಪ್ರದೇಶದಲ್ಲಿವೆ ಸುಮಾರು 50 ಕ್ರಷರ್

|
Google Oneindia Kannada News

ಶಿವಮೊಗ್ಗ, ಜನವರಿ 22: "ಈ ಪ್ರದೇಶದಲ್ಲಿ ಸುಮಾರು 40-50 ಕ್ರಷರ್‌ಗಳು ಕಾರ್ಯ ನಿರ್ವಹಣೆ ಮಾಡುತ್ತಿವೆ. ಜಿಲ್ಲಾಡಳಿತದಿಂದ ಅವರು ಲೈಸೆನ್ಸ್ ಪಡೆದಿದ್ದಾರೆ. ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ" ಎಂದು ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಹೇಳಿದರು.

ಶುಕ್ರವಾರ ಬೆಳಗ್ಗೆ ಬಿ. ವೈ. ರಾಘವೇಂದ್ರ ಶಿವಮೊಗ್ಗ ಸಮೀಪದ ಕಲ್ಲು ಕ್ರಷರ್‌ನಲ್ಲಿ ಭಾರೀ ಸ್ಫೋಟ ಸಂಭವಿಸಿದ ಪ್ರದೇಶಕ್ಕೆ ಭೇಟಿ ನೀಡಿದರು. "ಬೆಂಗಳೂರು ಮತ್ತು ಮಂಗಳೂರಿನಿಂದ ಬಾಂಬ್ ನಿಷ್ಕ್ರಿಯದಳ ಸ್ಥಳಕ್ಕೆ ಆಗಮಿಸುತ್ತಿದೆ" ಎಂದರು.

ದುರಂತ ನಡೆದ ಸ್ಥಳದಲ್ಲಿ ಕಗ್ಗತ್ತಲೆ, ಕೆಟ್ಟ ವಾಸನೆದುರಂತ ನಡೆದ ಸ್ಥಳದಲ್ಲಿ ಕಗ್ಗತ್ತಲೆ, ಕೆಟ್ಟ ವಾಸನೆ

"ಭಾರೀ ಶಬ್ದದ ಜೊತೆ ಹುಣಸೋಡು ಗ್ರಾಮದಲ್ಲಿ ಕಂಪನ ದಾಖಲಾಗಿದೆ. ಡೈನಾಮೆಟ್ ಅಥವ ಸ್ಫೋಟಕಗಳಿಂದಾಗಿ ಈ ಘಟನೆ ಸಂಭವಿಸಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ" ಎಂದು ಸಂಸದ ರಾಘವೇಂದ್ರ ಹೇಳಿದರು.

ಶಿವಮೊಗ್ಗದಲ್ಲಿ ಸ್ಫೋಟ; ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ ಶಿವಮೊಗ್ಗದಲ್ಲಿ ಸ್ಫೋಟ; ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ

Shivamogga Blast : MP BY Raghavendra Reaction to Stone Quarry Blast Near Hunasodu Village

"ಈ ಪ್ರದೇಶದಲ್ಲಿ 40-50 ಕ್ರಷರ್‌ಗಳಿವೆ. ಜಿಲ್ಲಾಡಳಿತದಿಂದ ಅವರು ಲೈಸೆನ್ಸ್ ಪಡೆದಿದ್ದಾರೆ. ಜಲ್ಲಿಗಳನ್ನು ರೈಲ್ವೆಗೆ ಮಾತ್ರ ಪೂರೈಕೆ ಮಾಡುವುದಿಲ್ಲ. ಮನೆ ನಿರ್ಮಾಣ, ಸಾರ್ವಜನಿಕ ಕೆಲಸಗಳಿಗೂ ಪೂರೈಕೆ ಮಾಡಲಾಗುತ್ತದೆ" ಎಂದು ಸಂಸದರು ಸ್ಪಷ್ಟಪಡಿಸಿದರು.

ಶಿವಮೊಗ್ಗ ಸ್ಫೋಟ; ಸಿಗರೇಟು ಸೇದುತ್ತಿದ್ದ ಕಾರ್ಮಿಕರು! ಶಿವಮೊಗ್ಗ ಸ್ಫೋಟ; ಸಿಗರೇಟು ಸೇದುತ್ತಿದ್ದ ಕಾರ್ಮಿಕರು!

ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದ ಬಳಿಯ ಕ್ರಷರ್‌ಗೆ ಜಿಲೆಟಿನ್ ಕಡ್ಡಿಗಳನ್ನು ವಾಹನದಲ್ಲಿ ಸಾಗಣೆ ಮಾಡುವಾಗ ಅದು ಸ್ಫೋಟಗೊಂಡಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಗುರುವಾರ ರಾತ್ರಿ 10.30ರ ಸುಮಾರಿಗೆ ನಡೆದ ಸ್ಫೋಟದ ತೀವ್ರತೆಗೆ ಭಾರೀ ಶಬ್ದವೂ ಕೇಳಿ ಬಂದಿದೆ.

ಸಿದ್ದರಾಮಯ್ಯ ಟ್ವೀಟ್; ಶಿವಮೊಗ್ಗದಲ್ಲಿ ನಡೆದ ಸ್ಫೋಟದ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. "ಶಿವಮೊಗ್ಗ ನಗರ ಸಮೀಪ ಜಿಲೆಟಿನ್ ಸ್ಪೋಟಗೊಂಡು ಹಲವು ಮಂದಿ ಕಾರ್ಮಿಕರು ಸಾವಿಗೀಡಾದ ಸುದ್ದಿ ಕೇಳಿ ಸಂಕಟವಾಯಿತು. @CMofKarnataka ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮೃತ ಕಾರ್ಮಿಕರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಮೃತರ ಶೋಕತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು" ಎಂದು ಹೇಳಿದ್ದಾರೆ.

"ನಿರ್ಲಕ್ಷ್ಯ ತೋರುವ ಮೂಲಕ ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು @CMofKarnataka ಅವರನ್ನು ಒತ್ತಾಯಿಸುತ್ತೇನೆ. ರಾಜ್ಯದ ಹಲವೆಡೆ ಅಕ್ರಮ ಗಣಿಗಾರಿಕೆ ನಿರಾತಂಕವಾಗಿ ನಡೆಯುತ್ತಿರುವ ಆರೋಪ ಕೇಳಿಬರುತ್ತಿದ್ದು, ಅವುಗಳ ಮೇಲೆ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಿದೆ" ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

English summary
Gelatin sticks blast took place at a railway crusher site in Shivamogga. MP B. Y. Raghavendra visited the spot and said that 40-50 crushers are operational in this area. They had taken license from district administrator.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X