ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತೀರ್ಥಹಳ್ಳಿ; ಸುಟ್ಟ ಕಾರು, ಮೃತ ದೇಹ ಪತ್ತೆ ಕೇಸ್‌ಗೆ ಸ್ಫೋಟಕ ತಿರುವು!

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಅಕ್ಟೋಬರ್ 01; ತೀರ್ಥಹಳ್ಳಿಯ ಕಾಡಿನ ಮಧ್ಯೆ ಸುಟ್ಟ ಕಾರು, ಅಸ್ಥಿ ಪಂಜರ ಪತ್ತೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಕಾರಿನಲ್ಲಿ ಇದ್ದ ಅಸ್ಥಿ ಪಂಜರ ವಿನೋದ್ ಎಂಬುವವರದ್ದಾಗಿದೆ. ಮನೆಯಲ್ಲೇ ಇದ್ದ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ.

ಸೆಪ್ಟೆಂಬರ್ 28ರಂದು ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರು ಮತ್ತು ಅಸ್ಥಿ ಪಂಜರ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಈಗ ಸ್ಫೋಟಕ ತಿರುವು ಸಿಕ್ಕಿದ್ದು, ಇದೊಂದು ಕೊಲೆ ಪ್ರಕರಣವಾಗಿದೆ.

ತೀರ್ಥಹಳ್ಳಿ; ಕಾಡಿನಲ್ಲಿ ಸುಟ್ಟ ಕಾರು, ಮೃತದೇಹ ಪತ್ತೆ! ತೀರ್ಥಹಳ್ಳಿ; ಕಾಡಿನಲ್ಲಿ ಸುಟ್ಟ ಕಾರು, ಮೃತದೇಹ ಪತ್ತೆ!

Body Found In Burned Out Car At Thirthahalli Forest Big Twist To Case

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಒಟ್ಟು ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹತ್ಯೆಯಾದವರನ್ನು ಸಾಗರ ತಾಲೂಕಿನ ಆಚಾಪುರ ಗ್ರಾಮದ ಮುಸ್ಲಿಂಪೇಟೆಯ ನಿವಾಸಿ ವಿನೋದ್ (45) ಎಂದು ಗುರುತಿಸಲಾಗಿದೆ. ವಿನೋದ್ ಕೊಲೆಗೈದು ಕಾಡಿನಲ್ಲಿ ಕಾರು ನಿಲ್ಲಿಸಿ ಬೆಂಕಿ ಹಚ್ಚಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ.

Body Found In Burned Out Car At Thirthahalli Forest Big Twist To Case

ಮನೆಯಲ್ಲೇ ಇದ್ದ ಹಂತಕರು; ಸುಟ್ಟ ಕಾರು, ಅಸ್ಥಿ ಪಂಜರ ಪತ್ತೆಯಾಗಿರುವ ಸಂಬಂಧ ಜೇಡಿಕುಣಿ ಗ್ರಾಮ ಪಂಚಾಯಿತಿ ಸದಸ್ಯರು ದೂರು ನೀಡಿದ್ದರು. ತನಿಖೆ ನಡೆಸಿದ ತೀರ್ಥಹಳ್ಳಿ ಪೊಲೀಸರಿಗೆ ಮೃತ ವಿನೋದ್‌ನ ಹೆಂಡತಿ, ಇಬ್ಬರು ಗಂಡು ಮಕ್ಕಳು, ಹೆಂಡತಿಯ ಅಕ್ಕನ ಮಗ ಮತ್ತು ಮೃತನ ತಮ್ಮನ ಕೈವಾಡ ಇರುವುದು ತಿಳಿದು ಬಂದಿತ್ತು.

ಶಿವಮೊಗ್ಗ ಡಿಸಿ ಕಚೇರಿ ಉದ್ಯೋಗಿ ನಾಪತ್ತೆ ಪ್ರಕರಣಕ್ಕೆ ತಿರುವು! ಶಿವಮೊಗ್ಗ ಡಿಸಿ ಕಚೇರಿ ಉದ್ಯೋಗಿ ನಾಪತ್ತೆ ಪ್ರಕರಣಕ್ಕೆ ತಿರುವು!

ಕೌಟುಂಬಿಕ ಕಲಹ; ಕೌಟುಂಬಿಕ ಕಲಹದ ಹಿನ್ನೆಲೆ ವಿನೋದ್ ಹತ್ಯೆಯಾಗಿದೆ ಎಂದು ತಿಳಿದು ಬಂದಿದೆ. ಇದೆ ಆಧಾರದಲ್ಲಿ ತನಿಖೆ ನಡೆಸಿದಾಗ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಸೆಪ್ಟೆಂಬರ್ 25ರಂದು ಐವರು ಆರೋಪಿಗಳು ವಿನೋದ್ ಕೊಲೆಗೆ ಸಂಚು ರೂಪಿಸಿದ್ದಾರೆ. ಸೆಪ್ಟೆಂಬರ್ 26ರಂದು ಬೆಳಗ್ಗೆ ಆನಂದಪುರದ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ಖರೀದಿಸಿಟ್ಟುಕೊಂಡಿದ್ದರು.

ಸೆಪ್ಟೆಂಬರ್ 26ರಂದು ರಾತ್ರಿ 8.30ರ ಹೊತ್ತಿಗೆ ಮನೆಯಲ್ಲೇ ತಂತಿ ಬಿಗಿಯುವ ರಾಡ್, ಸುತ್ತಿಗೆ, ಕಬ್ಬಿಣದ ಪೈಪ್ ರಾಡ್‌ನಿಂದ ಹೊಡೆದು ವಿನೋದ್ ಕೊಲೆ ಮಾಡಲಾಗಿದೆ. ವಿನೋದ್ ಬಳಸುತ್ತಿದ್ದ ಕಾರಿನಲ್ಲೇ ಮೃತದೇಹವನ್ನು ಸಾಗಿಸಲಾಗಿದೆ.

ತೀರ್ಥಹಳ್ಳಿ ವಿಶೇಷ; ಸಿಎಂ, ಸ್ಪೀಕರ್‌ ಎಲ್ಲಾ ಹುದ್ದೆ ಸಿಕ್ಕಿದೆ ಕ್ಷೇತ್ರದ ಶಾಸಕರಿಗೆ ತೀರ್ಥಹಳ್ಳಿ ವಿಶೇಷ; ಸಿಎಂ, ಸ್ಪೀಕರ್‌ ಎಲ್ಲಾ ಹುದ್ದೆ ಸಿಕ್ಕಿದೆ ಕ್ಷೇತ್ರದ ಶಾಸಕರಿಗೆ

ತನಿಖೆ ವೇಳೆ ಪೊಲೀಸರಿಗೆ ಅನುಮಾನ ಬಾರದಿರಲಿ ಎಂದು ಆರೋಪಿಗಳು ತಮ್ಮ ಮೊಬೈಲನ್ನು ಸ್ವಿಚ್ ಆಫ್ ಮಾಡಿದ್ದರು. ಮನೆಯಲ್ಲೇ ಮೊಬೈಲ್‌ಗಳನ್ನು ಇಟ್ಟು ಹೋಗಿದ್ದರು. ಕಾರಿನಲ್ಲಿ ಯಡೇಹಳ್ಳಿ, ರಿಪ್ಪನ್ ಪೇಟೆ, ಹುಂಚದಕಟ್ಟೆ, ಶಂಕ್ರಳ್ಳಿ, ಮಲ್ಲೇಸರ ಮಾರ್ಗವಾಗಿ ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಗ್ರಾಮದ ಹುಣಸೆಕೊಪ್ಪ ಅರಣ್ಯ ಪ್ರದೇಶಕ್ಕೆ ಮೃತದೇಹ ತಂದಿದ್ದಾರೆ.

ಚಾಲಕನ ಸೀಟಿನಲ್ಲಿ ಮೃತದೇವನ್ನು ಇರಿಸಿದ್ದಾರೆ. ಮೊದಲೆ ಖರೀದಿಸಿಟ್ಟಿದ್ದ ಪೆಟ್ರೋಲ್ ಸುರಿದು ಕಾರಿಗೆ ಬೆಂಕಿ ಹಚ್ಚಿದ್ದಾರೆ. ಕಾರಿನ ನಂಬರ್ ಪ್ಲೇಟ್ ಮತ್ತು ವಿನೋದ್ ಬಳಸುತ್ತಿದ್ದ ಮೊಬೈಲ್ ಫೋನನ್ನು ದಾರಿ ಮಧ್ಯೆ ಎಸೆದು ಆರೋಪಿಗಳು ಮನೆಗೆ ಮರಳಿದ್ದರು.

ಪೊಲೀಸರಿಗೆ ಅನುಮಾನ ಬಾರದಿರಲಿ ಎಂದು ಕೊಲೆ ಮಾಡಿದ್ದ ಜಾಗವನ್ನು ಫಿನಾಯಲ್ ಬಳಸಿ ಸ್ವಚ್ಛಗೊಳಿಸಿದ್ದರು. ಕೃತ್ಯದ ವೇಳೆ ಆರೋಪಿಗಳು ಬಳಸಿದ್ದ ಬಟ್ಟೆ, ಚಪ್ಪಲಿಗಳನ್ನು ಮನೆಯ ಹಿಂಭಾಗದಲ್ಲಿ ಸುಟ್ಟು ಹಾಕಿದ್ದರು.

ತನಿಖೆ ವೇಳೆ ಮನೆಯವರ ಮೇಲೆಯೇ ಅನುಮಾನಗೊಂಡ ಪೊಲೀಸರು, ವಿಚಾರಣೆ ತೀವ್ರಗೊಳಿಸಿದ್ದರು. ಈ ವೇಳೆ ವಿನೋದ್ ಕೊಲೆಯ ಸಂಪೂರ್ಣ ಮಾಹಿತಿ ಬಹಿರಂಗಗೊಂಡಿದೆ. ಪೊಲೀಸರು ಐವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಸುಟ್ಟ ಕಾರು, ಮೃತದೇಹ ಪತ್ತೆಯಾದಾಗ ಮೊದಲು ಆತ್ಮಹತ್ಯೆ ಪ್ರಕರಣವಿರಬಹುದು ಎಂದು ಶಂಕಿಸಲಾಗಿತ್ತು. ಕಾರಿನಲ್ಲಿದ್ದ ವ್ಯಕ್ತಿಯ ಗುರುತು ಪತ್ತೆಯಾದರೆ ಮುಂದಿನ ಮಾಹಿತಿ ತಿಳಿಯಲಿದೆ ಎಂಬುದು ತಿಳಿದಿತ್ತು. ಈಗ ಪ್ರರಕರಣಕ್ಕೆ ರೋಚಕ ತಿರುವು ಸಿಕ್ಕಿದೆ.

Recommended Video

ದಸರಾ ಉದ್ಘಾಟನೆಗೆ SM ಕೃಷ್ಣಾರನ್ನು ಆಯ್ಕೆ ಮಾಡಿ ಸಂಪ್ರದಾಯ ಮುರಿದ್ರಾ CM ಬೊಮ್ಮಾಯಿ? | Oneindia Kannada

ಕಾಡಿಗೆ ಕಟ್ಟಿಗೆ ತರಲು ಹೋಗಿದ್ದ ಜನರು ಮೊದಲು ಬೆಂಕಿಗಾಹುತಿಯಾದ ಕಾರು ಮತ್ತು ಸುಟ್ಟ ಶರೀರಿ ನೋಡಿದ್ದರು. ಪೊಲೀಸರಿಗೆ ವಿಚಾರ ತಿಳಿಸಿದ್ದರು. ಮೊದಲ ದಿನ ಕಾರಿನ ಮಾಹಿತಿ ಸಿಕ್ಕಿರಲಿಲ್ಲ. 2ನೇ ದಿನ ಕಾರು ಸಾಗರಕ್ಕೆ ಸೇರಿದ್ದು ಎಂಬುದು ಖಚಿತವಾಗಿತ್ತು.

English summary
Body was found in a burned out car at Thirthahalli taluk Salur grama panchayat limits forest area on September 28, 2021. Now big twist to case, police arrested accused.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X