ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಪಿಎಲ್ ಕಾರ್ಡ್; ಡಿಸಿಗಳಿಗೆ ಹೊಸ ಸೂಚನೆ ಕೊಟ್ಟ ಯಡಿಯೂರಪ್ಪ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಫೆಬ್ರವರಿ 16; ಬಿಪಿಎಲ್ ಕಾರ್ಡ್ ಕುರಿತು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ನೀಡಿದ ಹೇಳಿಕೆಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಬಿಪಿಎಲ್ ಕಾರ್ಡ್ ಹೊಂದಿರುವ ಶ್ರೀಮಂತರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಬಿ. ಎಸ್. ಯಡಿಯೂರಪ್ಪ, "ಬಿಪಿಎಲ್ ಕಾರ್ಡ್ ಕುರಿತು ಹೆಚ್ಚು ಚರ್ಚೆಯ ಅಗತ್ಯವಿಲ್ಲ. 2017ರಲ್ಲಿ ಕೊಟ್ಟ ಸೂಚನೆಗಳೇ ಮುಂದುವರೆಯುತ್ತದೆ" ಎಂದರು.

ಬಿಪಿಎಲ್ ಕಾರ್ಡ್‌ ವಾಪಸ್ ವಿಚಾರ; ಸಚಿವ ಉಮೇಶ್ ಕತ್ತಿ ಗರಂ! ಬಿಪಿಎಲ್ ಕಾರ್ಡ್‌ ವಾಪಸ್ ವಿಚಾರ; ಸಚಿವ ಉಮೇಶ್ ಕತ್ತಿ ಗರಂ!

"ಶ್ರೀಮಂತರಿಗೆ ಅನಗತ್ಯವಾಗಿ ಬಿಪಿಎಲ್ ಕಾರ್ಡ್ ಸಿಗುವುದು ತಪ್ಪಬೇಕು. ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಕಾನೂನು ಬಾಹಿರವಾಗಿ ಬಿಪಿಎಲ್ ಕಾರ್ಡ್ ಹೊಂದಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು" ಎಂದರು.

ಬಿಪಿಎಲ್ ಕಾರ್ಡುದಾರರಿಗೆ ಆಘಾತ ನೀಡಿದ ರಾಜ್ಯ ಸರ್ಕಾರಬಿಪಿಎಲ್ ಕಾರ್ಡುದಾರರಿಗೆ ಆಘಾತ ನೀಡಿದ ರಾಜ್ಯ ಸರ್ಕಾರ

BPL Card Yediyurappa Direction To Deputy Commissioners

"ಬಿಪಿಎಲ್ ಕಾರ್ಡ್‌ನಿಂದ ಏನೆಲ್ಲ ಸವಲತ್ತು ಪಡೆದಿದ್ದಾರೋ ಅದರ ಹಣ ವಸೂಲಿಗೆ ಸೂಚನೆ ನಿಡಲಾಗಿದೆ. ಬಿಪಿಎಲ್ ಕಾರ್ಡ್ ಹೊಂದಿರುವ ಶ್ರೀಮಂತರು ತಾವೇ ಕಾರ್ಡ್ ಹಿಂತಿರುಗಿಸಬೇಕು" ಎಂದು ಮುಖ್ಯಮಂತ್ರಿಗಳು ಹೇಳಿದರು.

ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಸೂಚನೆ ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಸೂಚನೆ

"ಬೈಕು, ಟಿವಿ, ಫ್ರಿಡ್ಜ್ ಸೇರಿದಂತೆ ಹಲವು ವಸ್ತುಗಳನ್ನು ಹೊಂದಿರುವವರು ಬಿಪಿಎಲ್ ಕಾರ್ಡ್ ಹೊಂದಲು ಅರ್ಹರಲ್ಲ" ಎಂದು ಸಚಿವ ಉಮೇಶ್ ಕತ್ತಿ ಹೇಳಿಕೆ ನೀಡಿದ್ದರು.

ಈ ಹೇಳಿಕೆಗೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಸ್ವತಃ ಬಿಜೆಪಿಯ ಶಾಸಕರು, ಮುಖಂಡರು ಕೂಡ ಆಕ್ರೋಶಗೊಂಡಿದ್ದರು. ಪ್ರತಿಪಕ್ಷಗಳು ಸಹ ಸಚಿವರ ಹೇಳಿಕೆಯನ್ನು ಖಂಡಿಸಿದ್ದವು.

English summary
Karnataka chief minister B. S. Yediyurappa direction to all deputy commissioners regarding BPL cards.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X