ಈಶ್ವರಪ್ಪ ಮನೆಯಲ್ಲಿ ಊಟ, ಉಪಚಾರ, ಸಂಧಾನದ ಉಪ್ಪಿನಕಾಯಿ!

ಶಿವಮೊಗ್ಗ, ಮಾರ್ಚ್ 27 : ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ನಡುವಿನ ಅಸಮಾಧಾನಕ್ಕೆ ತೆರೆ ಬಿದ್ದಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಇಬ್ಬರು ನಾಯಕರನ್ನು ಒಂದುಗೂಡಿಸಿದ್ದಾರೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಕರ್ನಾಟಕ ಪ್ರವಾಸದಲ್ಲಿರುವ ಅಮಿತ್ ಶಾ ಸೋಮವಾರ ರಾತ್ರಿ ಶಿವಮೊಗ್ಗದಲ್ಲಿ ರೋಡ್ ಶೋ ನಡೆಸಿದರು. ಬಳಿಕ ಗುಂಡಪ್ಪ ಶೆಡ್‌ನಲ್ಲಿರುವ ಈಶ್ವರಪ್ಪ ನಿವಾಸದಲ್ಲಿ ಭೋಜನ ಸವಿದರು.

ಬಿ.ಎಸ್.ಯಡಿಯೂರಪ್ಪ, ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಷ್, ಕಾರ್ಯದರ್ಶಿ ರವಿ ಕುಮಾರ್, ಆರ್‌ಎಸ್‌ಎಸ್‌ನ ಪ್ರಮುಖರು ಈ ಭೋಜನ ಕೂಟದಲ್ಲಿ ಪಾಲ್ಗೊಂಡಿದ್ದರು.

BS Yeddyurappa and KS Eshwarappa join hands

ಊಟದ ಬಳಿಕ ಸುಮಾರು ಒಂದು ಗಂಟೆ ಎಲ್ಲಾ ನಾಯಕರ ಜೊತೆ ಅಮಿತ್ ಶಾ ಸಭೆ ನಡೆಸಿದರು. ಈಶ್ವರಪ್ಪ ಮತ್ತು ಯಡಿಯೂರಪ್ಪ ನಡುವಿನ ಅಸಮಾಧಾನದ ಬಗ್ಗೆಯೂ ಚರ್ಚೆ ನಡೆಯಿತು. ಬಳಿಕ ಅಮಿತ್ ಶಾ ಪತ್ರಿಕಾಗೋಷ್ಠಿ ನಡೆಸಿದರು.

ಮಾಧ್ಯಮಗಳ ಜೊತೆ ಮಾತನಾಡಿದ ಅಮಿತ್ ಶಾ, 'ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಜನರಲ್ಲಿ ತೀವ್ರ ಆಕ್ರೋಶವಿದೆ. ರೈತರು, ಮಹಿಳೆಯರು, ಯುವಕರು ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದಾರೆ' ಎಂದರು.

BS Yeddyurappa and KS Eshwarappa join hands

'ರಾಜ್ಯ ಸರ್ಕಾರ ತನ್ನ ಜವಾಬ್ದಾರಿಗಳನ್ನು ಮರೆತಿದೆ. ಭ್ರಷ್ಟಾಚಾರದ ಕುರಿತು ಮಾತನಾಡುತ್ತಿಲ್ಲ. ಅದನ್ನು ಬಿಟ್ಟು, ಕೇಂದ್ರ ಸರ್ಕಾರದ ಕಾರ್ಯಕ್ರಮಗಳ ಕುರಿತು ಟೀಕೆ ಮಾಡುತ್ತಿದೆ' ಎಂದು ಅಮಿತ್ ಶಾ ಹೇಳಿದರು.

'ಯಡಿಯೂರಪ್ಪ ನೇತೃತ್ವದಲ್ಲಿಯೇ ಚುನಾವಣೆ ಎದುರಿಸುತ್ತೇವೆ' ಎಂದು ಹೇಳಿದ ಅಮಿತ್ ಶಾ. ಈಶ್ವರಪ್ಪ ಮತ್ತು ಯಡಿಯೂರಪ್ಪ ಕೈ ಎತ್ತಿ ಹಿಡಿದು ಒಗ್ಗಟ್ಟು ಪ್ರದರ್ಶಿಸಿದರು.

ಶಿವಮೊಗ್ಗ ನಗರ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಯಡಿಯೂರಪ್ಪ ಮತ್ತು ಕೆ.ಎಸ್.ಈಶ್ವರಪ್ಪ ನಡುವೆ ಜಟಾಪಟಿ ನಡೆಯುತ್ತಿತ್ತು. ಇದಕ್ಕೆ ಅಂತ್ಯ ಹಾಡಲಾಗಿದೆಯೇ?, ಕೆ.ಎಸ್.ಈಶ್ವರಪ್ಪಗೆ ಟಿಕೆಟ್ ಸಿಗಲಿದೆಯೇ? ಎಂದು ಕಾದು ನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+