• search
 • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಜ್ಯ ಸರ್ಕಾರದ ಕುರಿತು ಭವಿಷ್ಯ ಹೇಳಲು ಸಿದ್ಧವಿಲ್ಲ ಎಂದ ಬಿಎಸ್ ವೈ

By ಶಿವಮೊಗ್ಗ ಪ್ರತಿನಿಧಿ
|
   ರಾಜ್ಯ ಸರ್ಕಾರದ ಮೇಲೆ ಹರಿಹಾಯ್ದ ಬಿ ಎಸ್ ಯಡಿಯೂರಪ್ಪ | Oneindia Kannada

   ಶಿವಮೊಗ್ಗ, ಜನವರಿ 04: ಕಾಂಗ್ರೆಸ್ - ಜೆಡಿಎಸ್ ನಲ್ಲಿ ಒಮ್ಮತ ಇಲ್ಲ. ಪ್ರತಿನಿತ್ಯ ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಅತೃಪ್ತ ಕಾಂಗ್ರೆಸ್ ಶಾಸಕರು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುತ್ತಿದ್ದಾರೆ. ಮುಂದೇನಾಗುತ್ತೇ ಎಂದು ನಾನು ಭವಿಷ್ಯ ಹೇಳಲು ಸಿದ್ಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.

   ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರ ಗೊಂದಲದ ಗೂಡಾಗಿದ್ದು, ಅಭಿವೃದ್ಧಿ ಕಾರ್ಯಗಳು ನಿಂತುಹೋಗಿವೆ. ರೈತನ ಸಾಲಮನ್ನಾ ಎಂದು ನಿರಂತರವಾಗಿ ಹೇಳುತ್ತಾ ಬರುತ್ತಿದ್ದಾರೆ. ಬೆರಳೆಣಿಕೆ ಜನರಿಗೆ ಮಾತ್ರ ರಾಷ್ಟ್ರೀಕೃತ ಬ್ಯಾಂಕ್ ನಿಂದ ಸಾಲ ನೀಡಲಾಗಿದೆ. ಬ್ಯಾಂಕ್ ನಿಂದ ನೋಟಿಸ್ ನೀಡಲಾಗುತ್ತಿದ್ದು, ರೈತರ ಆತ್ಮಹತ್ಯೆ ಮುಂದುವರೆದಿದೆ. ಸಿಎಂ ಹಾಗೂ ಸಚಿವರು ಇದರ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದರು.

   ಕುತೂಹಲ ಮೂಡಿಸಿದ ಯಡಿಯೂರಪ್ಪ, ಎಸ್.ಎಂ.ಕೃಷ್ಣ ಭೇಟಿ

   ಸಿನಿಮಾ ನಟ ಹಾಗೂ ನಿರ್ಮಾಪಕರುಗಳ ಮೇಲೆ ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬಿಎಸ್ ವೈ ದಾಳಿಯಾದರೇ ನಾನೇನು ಮಾಡಲಿ. ಐಟಿ ದಾಳಿ ಮಾಡುವುದು ಸರ್ವೇ ಸಾಮಾನ್ಯ. ಪ್ರಾಮಾಣಿಕವಾಗಿ ಲೆಕ್ಕ ಕೊಟ್ಟಿದ್ದರೆ ಯಾರಿಗೂ ತೊಂದರೆಯಾಗಲ್ಲ ಎಂದು ಮಾರ್ಮಿಕವಾಗಿ ನುಡಿದರು.

   English summary
   Former Chief Minister BS Yeddyurappa reacted about State government.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X