ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದಲ್ಲಿ ಆಯುಷ್ ಫಾರ್ಮ, ವೆಲ್ ನೆಸ್ ಕ್ಲಸ್ಟರ್ ಸ್ಥಾಪನೆ: ಬಿಎಸ್ವೈ

|
Google Oneindia Kannada News

ಬೆಂಗಳೂರು ಸೆಪ್ಟೆಂಬರ್‌ 15: ಮಾನ್ಯ ಮುಖ್ಯಮಂತ್ರಿ ಗಳು‌ ಇಂದು ಕೈಗಾರಿಕಾ ಕ್ಲಸ್ಟರ್ ಅಭಿವೃದ್ಧಿ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಯುಷ್ ಫಾರ್ಮಾ, ಬಯೋ ಫಾರ್ಮಾ, ಆರೋಗ್ಯ ಸೇವೆಗಳ (ವೆಲ್ ನೆಸ್) ಕ್ಲಸ್ಟರ್ ಸ್ಥಾಪನೆಗೆ ಅವಕಾಶವಿದೆ ಎಂದು ವಿವರಿಸಿದರು. ಈ ಕುರಿತು ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತ ಅವರು ರಾಜ್ಯದಲ್ಲಿ ಸ್ಥಾಪಿಸಲಾಗುತ್ತಿರುವ 9 ಕೈಗಾರಿಕಾ ಕ್ಲಸ್ಟರ್ ಗಳ ಕುರಿತು ಮಾಹಿತಿ ನೀಡಿದರು.

ದೇಶದ ರಫ್ತಿನ ಶೇ.17.8 ರಷ್ಟು ಪಾಲನ್ನು ರಾಜ್ಯ ಹೊಂದಿದೆ: ಬಿಎಸ್ವೈ ದೇಶದ ರಫ್ತಿನ ಶೇ.17.8 ರಷ್ಟು ಪಾಲನ್ನು ರಾಜ್ಯ ಹೊಂದಿದೆ: ಬಿಎಸ್ವೈ

ಕೊಪ್ಪಳದಲ್ಲಿ ಆಟಿಕೆಗಳ ಕೈಗಾರಿಕೆ ಸ್ಥಾಪನೆ ಹಾಗೂ ಬಳ್ಳಾರಿಯಲ್ಲಿ ಜವಳಿ ಮತ್ತು ವಸ್ತ್ರೋದ್ಯಮ ಸ್ಥಾಪನೆಗೆ ಹಲವು ಕಂಪೆನಿಗಳು ಸಿದ್ಧತೆ ನಡೆಸಿದ್ದು, ವಸ್ತ್ರೋದ್ಯಮದಿಂದ ಮಹಿಳೆಯರಿಗೆ ಹೆಚ್ಚಿನ ಅವಕಾಶ ದೊರೆಯತ್ತದೆ ಎಂದು ವಿವರಿಸಿದರು.

BS Yediyurappa pushes for Ayush and Wellness Cluster in Shivamogga

ಚಿಕ್ಕಬಳ್ಳಾಪುರದಲ್ಲಿ, ಮೊಬೈಲ್ ಫೋನ್ ಮತ್ತು ಇತರ ಇಲೆಕ್ಟ್ರಾನಿಕ್ ಉತ್ಪನ್ನಗಳು, ಚಿತ್ರದುರ್ಗದಲ್ಲಿ ಎಲ್ ಇ ಡಿ ಉಪಕರಣಗಳ ಕ್ಲಸ್ಟರ್, ಹಾಸನದಲ್ಲಿ ಟೈಲ್ಸ್ ಮತ್ತು ಸ್ಯಾನಿಟರಿ ವೇರ್, ತುಮಕೂರಿನಲ್ಲಿ ಕ್ರೀಡೆ ಮತ್ತು ವ್ಯಾಯಾಮ ಸಲಕರಣೆಗಳ ತಯಾರಿಕೆಯ ಉದ್ಯಮ ಸ್ಥಾಪನೆಗೆ ಹಲವು ಕಂಪೆನಿಗಳು ಉತ್ಸುಕತೆ ತೋರಿವೆ. ಮಾತುಕತೆ ವಿವಿಧ ಹಂತದಲ್ಲಿದೆ ಎಂದು ತಿಳಿಸಿದರು.

 ಶಿವಮೊಗ್ಗಕ್ಕೆ ಭರ್ಜರಿ ಉಡುಗೊರೆ ಕೊಟ್ಟ ಸಿಎಂ ಯಡಿಯೂರಪ್ಪ ಶಿವಮೊಗ್ಗಕ್ಕೆ ಭರ್ಜರಿ ಉಡುಗೊರೆ ಕೊಟ್ಟ ಸಿಎಂ ಯಡಿಯೂರಪ್ಪ

ರಾಜ್ಯದಲ್ಲಿ ಯುವಜನರಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೈಗಾರಿಕಾ ಕ್ಲಸ್ಟರುಗಳ ಸ್ಥಾಪನೆಯನ್ನು ಆದ್ಯತೆಯ ಮೇರೆಗೆ ಮಾಡುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದರು. ಈಸಭೆಯಲ್ಲಿ ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್‌ ಕೃಷ್ಣ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.

English summary
Karnataka CM BS Yediyurappa pushes for Ayush, Bio and Wellness Cluster in Shivamogga during the Industrial cluster meeting.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X