• search
 • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬಿಜೆಪಿ ಶಾಸಕ ಶೇಖರ್ ಆತ್ಮಾಹುತಿಗೆ ಯತ್ನ, ಯಡಿಯೂರಪ್ಪ ಹೇಳಿದ್ದೇನು?

|
Google Oneindia Kannada News
   ಆತ್ಮಾಹುತಿಗೆ ಪ್ರಯತ್ನಪಟ್ಟ ಶಾಸಕನ ಬಗ್ಗೆ ಯಡಿಯೂರಪ್ಪ ಮಾತು | Oneindia Kannada

   ಶಿವಮೊಗ್ಗ, ಜನವರಿ 7: ಅದೃಷ್ಟ ಚೆನ್ನಾಗಿತ್ತು ಗೂಳಿಹಟ್ಟಿ ಶೇಖರ್ ಅಪಾಯದಿಂದ ಪಾರಾಗಿದ್ದಾರೆ, ಶಾಸಕರಿಗೆ ಹೀಗಾದರೆ ಸಾಮಾನ್ಯರ ಗತಿ ಏನು ಎಂದು ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‌ ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

   ಸೋಮವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ಮರಳು ದಂಧೆಯನ್ನು ತಡೆಯಲು ಹೋದ ಗೂಳಿ ಹಟ್ಟಿ ಶೇಖರ್‌ಗೆ ಈ ರೀತಿ ತೊಂದರೆಯಾಗಿದೆ. ವೈದ್ಯರು ಶಾಸಕರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

   ಪೆಟ್ರೋಲ್ ಸುರಿದುಕೊಂಡು ಶಾಸಕ ಗೂಳಿಹಟ್ಟಿ ಶೇಖರ್ ಆತ್ಮಾಹುತಿಗೆ ಯತ್ನ ಪೆಟ್ರೋಲ್ ಸುರಿದುಕೊಂಡು ಶಾಸಕ ಗೂಳಿಹಟ್ಟಿ ಶೇಖರ್ ಆತ್ಮಾಹುತಿಗೆ ಯತ್ನ

   ಪೆಟ್ರೋಲ್ ಕಣ್ಣಿನ ಭಾಗಕ್ಕೆ ತಾಗಿದ್ದರಿಂದ ಸ್ವಲ್ಪ ತೊಂದರೆಯಾಗಿದೆ ಆದರೆ ಅದೃಷ್ಟ ಚೆನ್ನಾಗಿತ್ತು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಿದ್ದಾರೆ.

   ಅಕ್ರಮ ಮರಳು ಸಾಗಣೆ ಹೆಸರಲ್ಲಿ ಪೊಲೀಸರು ಅಮಾಯಕರನ್ನು ಬಂಧಿಸುತ್ತಿದ್ದಾರೆ ಎಂದು ಆರೋಪಿಸಿ ಶಾಸಕ ಗೂಳಿಹಟ್ಟಿ ಶೇಖರ್ ಪೆಟ್ರೋಲ್ ಸುರಿದುಕೊಂಡು ಆತ್ಮಾಹುತಿಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ.

   ಹೊಸದುರ್ಗ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಪೊಲೀಸ್ ಠಾಣೆ ಮುಂಭಾಗವೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ, ತಕ್ಷಣವೇ ಸ್ಥಳದಲ್ಲಿದ್ದವರು ಬೆಂಕಿ ನಂದಿಸಿದ್ದು, ಗೂಳಿಹಟ್ಟಿಯವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪ್ರಾಣಾಪಾಯದಿಂದ ಪಾರಾಗಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಚಿಕಿತ್ಸೆ ಮುಂದುವರೆದಿದೆ.

   English summary
   Former chief minister BS Yeddyurappa meets MLA Goolihatti Shekhar and enquire his health, He accused the state government for sand mining Mafia.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X