ಶಿವಮೊಗ್ಗ; ಫೆಬ್ರವರಿ 23, 24ರಂದು ಬಸ್ ಸಂಚಾರದಲ್ಲಿ ವ್ಯತ್ಯಯ

ಶಿವಮೊಗ್ಗ, ಫೆಬ್ರವರಿ 23; ಶಿವಮೊಗ್ಗ ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಫೆಬ್ರವರಿ 23, 24ರಂದು ಸರ್ಕಾರಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. 100 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿರುವ ಕಾರಣ ಜನರು ಸಹಕಾರ ನೀಡಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಶಿವಮೊಗ್ಗ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ನಲ್ಲಿ ಫೆಬ್ರವರಿ 24ರಂದು ಸರ್ಕಾರದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶ ನಡೆಯಲಿದೆ. ಇದಕ್ಕೆ ಫಲಾನುಭವಿಗಳು ಆಗಮಿಸುವ ಸಲುವಾಗಿ ಶಿವಮೊಗ್ಗ ವಿಭಾಗವು 100 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಿದೆ.

Bus Services To Be Hit On February 23

ಆದ್ದರಿಂದ ಫೆಬ್ರವರಿ 23ರ ಮಧ್ಯಾಹ್ನದಿಂದ 24ರವರೆಗೆ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂರ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಪ್ರಯಾಣಿಕರು ಹಾಗೂ ಶಾಲಾ/ ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ಹೇಳಿಕೆ: ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸಮಾವೇಶದ ಕುರಿತು ಮಾತನಾಡಿದ್ದು, "ಫೆಬ್ರವರಿ 24ರಂದು ಜಿಲ್ಲಾಡಳಿತದಿಂದ ಆಯೋಜಿಸಲಾಗಿರುವ ಜಿಲ್ಲಾ ಮಟ್ಟದ ಗ್ಯಾರಂಟಿ ಫಲಾನುಭವಿಗಳ ಸಮಾವೇಶಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಕಾರ್ಯಕ್ರಮದ ಯಶಸ್ವಿ ಅನುಷ್ಟಾನ ಹಾಗೂ ಉಸ್ತುವಾರಿಗಾಗಿ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ತಂಡವನ್ನು ನಿಯೋಜಿಸಲಾಗಿದೆ" ಎಂದು ಹೇಳಿದ್ದಾರೆ.

"ವೇದಿಕೆಯ ಮುಂಭಾಗದಲ್ಲಿ ಫಲ-ಪುಷ್ಟ ಹಾಗೂ ಸಿರಿಧಾನ್ಯಗಳಿಂದ ಅಲಂಕರಿಸಲಾಗುವುದು. ಕಾರ್ಯಕ್ರಮಕ್ಕೆ ಬರುವ ಫಲಾನುಭವಿಗಳಿಗಾಗಿ ಅವಶ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ" ಎಂದು ತಿಳಿಸಿದ್ದಾರೆ.

ಈ ಸಮಾವೇಶಕ್ಕೆ ಸುಮಾರು 50 ಸಾವಿರಕ್ಕೂ ಹೆಚ್ಚಿನ ಜನ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಆಗಮಿಸುವ ನಿರೀಕ್ಷೆಯಿದ್ದು, ಅವರ ಅನುಕೂಲಕ್ಕಾಗಿ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳು, ಶೌಚಾಲಯ, ಕುಡಿಯುವ ನೀರು, ಮಧ್ಯಾಹ್ನದ ಉಪಹಾರ ಮತ್ತಿತರ ಎಲ್ಲ ರೀತಿಯ ಸೌಲಭ್ಯಗಳನ್ನು ಒದಗಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಆಯೋಜನೆಗೊಳ್ಳುತ್ತಿರುವ ಈ ಕಾರ್ಯಕ್ರಮದಲ್ಲಿ ರಾಜ್ಯದ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಆಗಮಿಸಿ, ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕೆಲವು ಸಚಿವರು ಹಾಗೂ ನಿಗಮ ಮಂಡಳಿಗಳ ಅಧ್ಯಕ್ಷರುಗಳು ಆಗಮಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲಾಗುತ್ತದೆ. ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಹೊಸ ಬಸ್‍ಗಳನ್ನು ಲೋಕಾರ್ಪಣೆಗೊಳಿಸಲಾಗುತ್ತದೆ. ಪ್ರಸ್ತುತ ಜಿಲ್ಲೆಯ ಜನರ ಪ್ರಯಾಣಕ್ಕೆ ಅನುಕೂಲವಾಗುವಂತೆ ನೂರು ಬಸ್‍ಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಬೇಡಿಕೆ ಸಲ್ಲಿಸಲಾಗಿದ್ದು, ಹಂತಹಂತವಾಗಿ ಬಸ್ಸುಗಳನ್ನು ಸಂಚಾರಕ್ಕೆ ಮುಕ್ತಗೊಳಿಸಲಾಗುತ್ತದೆ.

ಈವರೆಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆಯದಿರುವ ವಂಚಿತರ ಅನುಕೂಲಕ್ಕಾಗಿ ಕಾರ್ಯಕ್ರಮದ ವೇದಿಕೆಯ ಪಕ್ಕದಲ್ಲಿಯೇ ದೂರು ಸ್ವೀಕಾರ ಹಾಗೂ ಸಮಸ್ಯೆ ನಿವಾರಣೆಗೆ ಸಲಹಾ ಕೊಠಡಿಗಳನ್ನು ಸ್ಥಾಪಿಸಲಾಗುತ್ತದೆ. ಅರ್ಹರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಮಾತನಾಡಿ, "ಸರ್ಕಾರದ ಐದು ಮಹತ್ವಕಾಂಕ್ಷಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಯೋಜನೆಗಳ ಸಮರ್ಪಕ ಅನುಷ್ಟಾನದಿಂದ ರಾಜ್ಯದ ಜನಸಾಮಾನ್ಯರು ನೆಮ್ಮದಿಯ ಜೀವನ ನಡೆಸುವಂತಾಗಿದೆ" ಎಂದು ಹೇಳಿದ್ದಾರೆ.

"ಮಹಿಳೆಯರು ತಮ್ಮ ಕೌಟುಂಬಿಕ ನಿರ್ವಹಣೆಯ ಅನೇಕ ಸಂದಿಗ್ಧ ಸಂದರ್ಭಗಳಲ್ಲಿ ಸರ್ಕಾರ ಆರ್ಥಿಕ ನೆರವಿನ ಹಸ್ತ ನೀಡಿ ಸಹಕರಿಸುತ್ತಿದೆ. ಚುನಾವಣಾ ಪೂರ್ವದಲ್ಲಿ ಗ್ಯಾರೆಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಉಪಾಧ್ಯಕ್ಷನಾಗಿದ್ದೆ ಎಂಬ ಸಂತಸದ ಸಂಗತಿ ನನ್ನದಾಗಿದೆ. ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಯಂತೆ ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲಾಗುತ್ತಿದೆ" ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+