ಶಿವಮೊಗ್ಗ-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ?

ಶಿವಮೊಗ್ಗ, ಮೇ 23; ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಸಂಚಾರ ನಡೆಸುವ ಜನರಿಗೆ ಸಿಹಿಸುದ್ದಿ. ಉಭಯ ನಗರಗಳ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ಬೇಡಿಕೆ ಇಡಲಾಗಿದೆ. ಈಗಾಗಲೇ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದ್ದು, ಬೆಂಗಳೂರು ಸೇರಿ ವಿವಿಧ ನಗರಕ್ಕೆ ವಿಮಾನ ಸಂಚಾರ ಆರಂಭವಾಗಬೇಕಿದೆ.

ಶಿವಮೊಗ್ಗದ ಸಂಸದ ಬಿ. ವೈ. ರಾಘವೇಂದ್ರ ಹುಬ್ಬಳ್ಳಿಯಲ್ಲಿ ನೈರುತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಸೇರಿದಂತೆ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಅನೇಕ ರೈಲ್ವೆ ಯೋಜನೆಗಳ ಕುರಿತಂತೆ ಪ್ರಗತಿ ಪರಿಶೀಲನಾ ಸಭೆಯನ್ನು ಸಹ ನಡೆಸಿದರು.

Vande Bharat Express train

ಇದೇ ಸಭೆಯಲ್ಲಿ ಸಂಸದರು ಬೆಂಗಳೂರು ಹಾಗೂ ಶಿವಮೊಗ್ಗ ನಗರಗಳ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಆರಂಭಿಸಲು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು. ಈ ಕುರಿತಂತೆ ರೈಲ್ವೆ ಮಂಡಳಿಯ ಅನುಮೋದನೆ ಪಡೆಯಲು ಕ್ರಮಕೈಗೊಳ್ಳುವುದಾಗಿ ರೈಲ್ವೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಒಂದೇ ರೈಲು ಇರುವುದು; ವಂದೇ ಭಾರತ್ ಎಕ್ಸ್‌ಪ್ರೆಸ್ ಭಾರತೀಯ ರೈಲ್ವೆಯ ಮೊದಲ ಸೆಮಿ-ಹೈಸ್ಪೀಡ್ ರೈಲು. ಸದ್ಯ ಕರ್ನಾಟಕದಲ್ಲಿ ಓಡುತ್ತಿರುವುದು ಒಂದೇ ಒಂದು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು. ಬೆಂಗಳೂರು-ಧಾರವಾಡ ರೈಲು ಘೋಷಣೆಯಾಗಿದೆ. ಆದರೆ ಅದರ ಸಂಚಾರ ಇನ್ನೂ ಆರಂಭವಾಗಿಲ್ಲ.

Vande Bharat Express train

ಪ್ರಧಾನಿ ನರೇಂದ್ರ ಮೋದಿ 2022ರ ನವೆಂಬರ್‌ನಲ್ಲಿ ಮೈಸೂರು ಮತ್ತು ಪುರುಚ್ಚಿ ತಲೈವರ್ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಬೆಂಗಳೂರಿನ ಕೆ. ಎಸ್. ಆರ್ ಬೆಂಗಳೂರು ರೈಲು ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿಸಿದ್ದರು. ಮೈಸೂರಿನಿಂದ ಹೊರಡುವ ರೈಲು ಬೆಂಗಳೂರು ಮೂಲಕ ಚೆನ್ನೈಗೆ ಸಾಗುತ್ತಿದೆ. ರಾಜ್ಯದಲ್ಲಿ ಸಂಚಾರ ನಡೆಸುತ್ತಿರುವ ಒಂದೇ ಒಂದು ವಂದೇ ಭಾರತ್ ರೈಲು ಇದಾಗಿದೆ.

ವಂದೇ ಭಾರತ್ ರೈಲನ್ನು ಜನ ಶತಾಬ್ದಿ ರೈಲುಗಳಿಗೆ ಪರ್ಯಾಯ ಎಂದು ಬಣ್ಣಿಸಲಾಗುತ್ತಿದೆ. ಬೆಂಗಳೂರಿನ ಯಶವಂತಪುರ ಮತ್ತು ಶಿವಮೊಗ್ಗ ನಡುವೆ ಶತಾಬ್ದಿ ರೈಲುಗಳು ಸಂಚಾರ ನಡೆಸುತ್ತದೆ. ಉಭಯ ನಗರಗಳ ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾದರೆ ಕರ್ನಾಟಕದ ರಾಜಧಾನಿ ಮತ್ತು ಮಲೆನಾಡು ಭಾಗದ ಸಂಪರ್ಕಕ್ಕೆ ಸಹಕಾರಿಯಾಗಲಿದೆ.

ರೈಲ್ವೆ ಅಧಿಕಾರಿಗಳ ಜೊತೆಗಿನ ಸಭೆಯಲ್ಲಿ ಸಂಸದ ಬಿ. ವೈ. ರಾಘವೇಂದ್ರ ಇಟ್ಟ ಪ್ರಮುಖ ಬೇಡಿಕೆಗಳು

* ತಾಳಗುಪ್ಪ-ತಡಸ-ಹೊನ್ನಾವರ-ಶಿರಸಿ-ಹುಬ್ಬಳ್ಳಿ ನೂತನ ರೈಲ್ವೆ ಮಾರ್ಗ ಯೋಜನೆಯ ಸರ್ವೆ ಕಾಮಗಾರಿಯು ಪೂರ್ಣಗೊಂಡಿದ್ದು, ನೈರುತ್ಯ ರೈಲ್ವೆಯು ವರದಿಯನ್ನು ರೈಲ್ವೆ ಮಂಡಳಿಗೆ ಸಲ್ಲಿಸಿರುತ್ತದೆ. ಈ ಯೋಜನೆಯನ್ನು ಮಂಜೂರು ಮಾಡಲು ರೈಲ್ವೆ ಸಚಿವರಾದ ಅಶ್ವಿನ್ ವೈಷ್ಣವ್ ಅವರನ್ನು ಈಗಾಗಲೇ ಸಂಸದರು ಕೋರಿದ್ದು ನೈರುತ್ಯ ರೈಲ್ವೆಯಿಂದಲು ಸಹ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲು ಮನವಿ ಮಾಡಲಾಗಿದೆ.

* ಅರಸಾಳು ಮತ್ತು ಹಾರನಹಳ್ಳಿಯಲ್ಲಿ ಮೈಸೂರು-ತಾಳಗುಪ್ಪ-ಮೈಸೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆಯನ್ನು ಮಾಡಲು ಒತ್ತಾಯಿಸಿದರು. ಈ ಕುರಿತಂತೆ ಅಗತ್ಯ ಕ್ರಮಕೈಗೊಳ್ಳುವುದಾಗಿ ನೈರುತ್ಯ ರೈಲ್ವೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.

* ಶಿವಮೊಗ್ಗ-ಬೆಂಗಳೂರು ಹಾಗೂ ಮೈಸೂರು ನಡುವೆ ಸಂಚರಿಸುತ್ತಿರುವ ರೈಲುಗಳ ವೇಳಾಪಟ್ಟಿಯಲ್ಲಿ ಕೆಲವು ಸಣ್ಣಪುಟ್ಟ ಬದಲಾವಣೆಯನ್ನು ಅಳವಡಿಸಿಕೊಳ್ಳುವ ಮೂಲಕ ಈ ರೈಲುಗಳ ಸೇವೆಯನ್ನು ಮತ್ತಷ್ಟು ಜನಸ್ನೇಹಿಯಾಗಿಸುವಂತೆ ಮಾಡಲು ಸಂಸದರು ಮನವಿ ಮಾಡಿದರು. ನೈರುತ್ಯ ರೈಲ್ವೆಯು ಈ ಪ್ರಸ್ತಾವನೆಯನ್ನು ಪರಿಶೀಲಿಸಿ ಸಾಧ್ಯವಿರುವಲ್ಲಿ ಸೂಕ್ತ ಬದಲಾವಣೆಗಳನ್ನು ಮಾಡುವುದಾಗಿ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಈಗಾಗಲೇ ಉದ್ಘಾಟನೆಗೊಂಡಿದೆ. ಜೂನ್‌ ವೇಳೆಗೆ ಬೆಂಗಳೂರು ಸೇರಿ ವಿವಿಧ ನಗರಕ್ಕೆ ವಿಮಾನ ಸಂಚಾರ ಆರಂಭವಾಗುವ ನಿರೀಕ್ಷೆ ಇದೆ. ಶಿವಮೊಗ್ಗ-ತುಮಕೂರು ನಡುವೆ ಚತುಷ್ಪಥ ಹೆದ್ದಾರಿ ನಿರ್ಮಾಣ ಕಾರ್ಯ ಸಾಗಿದ್ದು, 2025ಕ್ಕೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ. ಈಗ ಶಿವಮೊಗ್ಗ-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭವಾದರೆ ಮಲೆನಾಡು ಭಾಗದ ಜನರಿಗೆ ಅನುಕೂಲವಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+