ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆಗೆ ಯಡಿಯೂರಪ್ಪ ಗೈರು!

|
Google Oneindia Kannada News

ಶಿವಮೊಗ್ಗ, ಮಾರ್ಚ್ 28 : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಅವರು ಗುರುವಾರ ನಾಮಪತ್ರ ಸಲ್ಲಿಸಿದರು. ಆದರೆ, ಬಿ.ಎಸ್.ಯಡಿಯೂರಪ್ಪ ಅವರು ನಾಮಪತ್ರ ಸಲ್ಲಿಕೆಗೆ ಗೈರಾಗಿದ್ದರು.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಗುರುವಾರ ಬಿ.ವೈ.ರಾಘವೇಂದ್ರ ಅವರು ಪತ್ನಿ ತೇಜಸ್ವಿನಿ, ಶಾಸಕರಾದ ಕೆ.ಎಸ್.ಈಶ್ವರಪ್ಪ, ಹರತಾಳು ಹಾಲಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ ಅವರ ಜೊತೆ ಲೋಕಸಭಾ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸಿದರು.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪರಿಚಯ ಓದಿ

BY Raghavendra

ಏಪ್ರಿಲ್ 23ರಂದು ಶಿವಮೊಗ್ಗ ಲೋಕಸಭಾ ಚುನಾವಣೆ ನಡೆಯಲಿದ್ದು, ಇಂದು ಅಧಿಸೂಚನೆ ಪ್ರಕಟವಾಗಿದೆ. ಅಧಿಸೂಚನೆ ಪ್ರಕಟವಾದ ದಿನದಂದೇ ರಾಘವೇಂದ್ರ ಅವರು ನಾಮಪತ್ರ ಸಲ್ಲಿಸಿದರು. ಮಧು ಬಂಗಾರಪ್ಪ ಅವರು ಕ್ಷೇತ್ರದ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿ.

ಶಿವಮೊಗ್ಗದಲ್ಲಿ ಅಪಾರ ಬೆಂಬಲಿಗರೊಂದಿಗೆ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆಶಿವಮೊಗ್ಗದಲ್ಲಿ ಅಪಾರ ಬೆಂಬಲಿಗರೊಂದಿಗೆ ಬಿ.ವೈ.ರಾಘವೇಂದ್ರ ನಾಮಪತ್ರ ಸಲ್ಲಿಕೆ

ಯಡಿಯೂರಪ್ಪ ಗೈರು : ನಾಮಪತ್ರ ಸಲ್ಲಿಕೆ ವೇಳೆ ಯಡಿಯೂರಪ್ಪ ಅವರು ಗೈರು ಹಾಜರಾಗಿದ್ದರು. ಬೆಂಗಳೂರಿನಲ್ಲಿದ್ದ ಯಡಿಯೂರಪ್ಪ ಅವರು ನಾಮಪತ್ರ ಸಲ್ಲಿಕೆಗೆ ಆಗಮಿಸಬೇಕಾಗಿತ್ತು.

ಎಸ್.ಎಂ.ಕೃಷ್ಣ ಮತ್ತು ಯಡಿಯೂರಪ್ಪ ಅವರು ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಆದರೆ, ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಉಂಟಾದ ಕಾರಣ ಅವರು ಶಿವಮೊಗ್ಗಕ್ಕೆ ಪ್ರಯಾಣ ಬೆಳೆಸಲು ಸಾಧ್ಯವಾಗಲಿಲ್ಲ.

English summary
Karnataka BJP president B.S.Yeddyurappa son B.Y.Raghavendra filed nomination from Shivamogga lok sabha seat on March 28, 2019. But, B.S.Yeddyurappa not attend the event.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X