ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೈಯಕ್ತಿಕ ಸೌಲಭ್ಯಗಳನ್ನು ತಲುಪಿಸಲು ಆದ್ಯತೆ ನೀಡಿ: ಬಿ.ವೈ.ರಾಘವೇಂದ್ರ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ನವೆಂಬರ್ 12: ಕೋವಿಡ್ ಹಿನ್ನೆಲೆಯಲ್ಲಿ ಜನರಿಗೆ ನೇರವಾಗಿ ಸೌಲಭ್ಯಗಳನ್ನು ಒದಗಿಸುವ ಸಾಮಾಜಿಕ ಭದ್ರತಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಿಶಾ ಸವಿ ಫಲಾನುಭವಿಗಳ ಆಯ್ಕೆ ಸೇರಿದಂತೆ ಯೋಜನೆಗಳ ಅನುಷ್ಠಾನ ಸಂದರ್ಭದಲ್ಲಿ ಮಾತನಾಡಿದ ಅವರು, "ಸ್ಥಳೀಯವಾಗಿ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಯಾವುದೇ ಯೋಜನೆ ಅನುಷ್ಠಾನದಲ್ಲಿ ಸಮಸ್ಯೆಗಳು ಉಂಟಾದರೆ ತಕ್ಷಣ ಗಮನಕ್ಕೆ ತಂದು ಅದನ್ನು ಸರಿಪಡಿಸಿಕೊಳ್ಳಬೇಕು" ಎಂದರು.

ಶಿವಮೊಗ್ಗ ಜಿಲ್ಲೆಯ ಚಿತ್ರಣ ಕೆಲವೇ ದಿನಗಳಲ್ಲಿ ಬದಲಾಗಲಿದೆ: ಸಿಎಂ ಯಡಿಯೂರಪ್ಪಶಿವಮೊಗ್ಗ ಜಿಲ್ಲೆಯ ಚಿತ್ರಣ ಕೆಲವೇ ದಿನಗಳಲ್ಲಿ ಬದಲಾಗಲಿದೆ: ಸಿಎಂ ಯಡಿಯೂರಪ್ಪ

ದೀನ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆಯಡಿ ಗ್ರಾಮೀಣ ವಿದ್ಯುದೀಕರಣ, ಫೀಡರ್ ಬೇರ್ಪಡಿಸುವಿಕೆ ಮತ್ತು ಹೊಸ ಮೀಟರ್ ಅಳವಡಿಸುವ ಕಾರ್ಯ ನಡೆಯುತ್ತಿದೆ. ಕೇಂದ್ರ ಸರ್ಕಾರದ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಮೀಟರ್ ಅಳವಡಿಸಲು ಹಣಕ್ಕೆ ಬೇಡಿಕೆ ಇಡುವಂತಹ ದೂರುಗಳು ಬರಬಾರದು. ಯೋಜನೆ ಅನುಷ್ಠಾನ ಪರಿಶೀಲಿಸಲು ಸಮಿತಿಯ ಸದಸ್ಯರು ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.

Shivamogga: BY Raghavendra Instructed Officials To Adequately Implement Social Security Schemes

ಪ್ರಧಾನಮಂತ್ರಿ ಗ್ರಾಮೀಣ ಸಡಕ್ ಯೋಜನೆಯಡಿ ನಿರ್ಮಿಸಿರುವ ರಸ್ತೆಗಳ ನಿರ್ವಹಣೆಯನ್ನು 5 ವರ್ಷಗಳ ಕಾಲ ಗುತ್ತಿಗೆದಾರರು ನಿರ್ವಹಿಸಬೇಕಾಗಿದೆ. ಮರು ಡಾಂಬರೀಕರಣ ಸೇರಿದಂತೆ ನಿರ್ವಹಣೆಯನ್ನು ಸಮರ್ಪಕವಾಗಿ ನಡೆಸುವಂತೆ ಸೂಚಿಸಬೇಕು ಎಂದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನಗರ ಭಾಗದಲ್ಲಿ 5085 ಮನೆಗಳ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, 4624 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಗ್ರಾಮೀಣ ಭಾಗದಲ್ಲಿ 1612 ಮನೆಗಳಿಗೆ ಅನುಮೋದನೆ ದೊರೆತಿದ್ದು 658 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಗ್ರಾಮೀಣ ಭಾಗದಲ್ಲಿ ಮನೆಗಳ ನಿರ್ಮಾಣಕ್ಕಾಗಿ 2.48 ಕೋಟಿ ರೂ. ಬಿಡುಗಡೆಯಾಗಿದೆ. ಮನೆಗಳ ನಿರ್ಮಾಣ ಕಾರ್ಯ ಸಮರ್ಪಕವಾಗಿ ಅನುಷ್ಠಾನಗೊಳ್ಳುವಂತೆ ಖಾತ್ರಿಪಡಿಸಬೇಕು ಎಂದು ತಿಳಿಸಿದರು.

English summary
Loka Sabha member BY Raghavendra has instructed officials to adequately implement social security schemes to provide direct facilities to people in the wake of coronavirus
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X