ತುಂಬಿದ ಅಂಜನಾಪುರ ಜಲಾಶಯ; ಬಾಗಿನ ಅರ್ಪಿಸಿದ ಬಿ.ವೈ.ರಾಘವೇಂದ್ರ

ಶಿವಮೊಗ್ಗ, ಜುಲೈ 21: ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಜೀವಜಲ ಅಂಜನಾಪುರ ಜಲಾಶಯ ಭರ್ತಿಯಾಗಿದ್ದು, ಇಂದು ಸಂಸದ ಬಿ.ವೈ. ರಾಘವೇಂದ್ರ ಅವರು ಕುಟುಂಬ ಸಮೇತ ಜಲಾಶಯದ ಗಂಗೆಗೆ ವಿಷೇಶ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಈ ಸಂದರ್ಭ ಮಾತನಾಡಿದ ಅವರು, "ಅಂಜನಾಪುರ ಜಲಾಶಯ ನಮ್ಮ ತಾಲೂಕಿನ ರೈತರ ಪಾಲಿನ ಜೀವನಾಡಿ. ಸಾಧಾರಣ ಮಳೆಯಿಂದಲೇ ಈ ಜಲಾಶಯ ಭರ್ತಿಯಾಗಿದ್ದು, ಸಾಂಕೇತಿಕವಾಗಿ ಸರಳ ರೀತಿಯಲ್ಲಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದೇವೆ. ಪ್ರತಿವರ್ಷ ಅಂಜನಾಪುರ ಜಲಾಶಯ ಭರ್ತಿಯಾದಾಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಆಗಮಿಸಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸುತ್ತಿದ್ದರು. ಈ ವರ್ಷ ಕೊರೊನಾ ಸಂಕಷ್ಟ ಇರುವುದರಿಂದ ಸಾಧ್ಯವಾಗಿಲ್ಲ" ಎಂದು ತಿಳಿಸಿದರು.

ತಾಲೂಕಿನಲ್ಲಿ ನೀರಾವರಿ ಯೋಜನೆ‌ ಕಾರ್ಯಗಳು ಆರಂಭವಾಗಿವೆ. ಶಾಶ್ವತ ನೀರಾವರಿ ಯೋಜನೆಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು. ಈ ವೇಳೆ ಅಂಜನಾಪುರ ಜಲಾಶಯದ ಮೇಲ್ದಂಡೆ ಮೇಲೆ ನಿರ್ಮಿಸಿರುವ ಉದ್ಯಾನವನ್ನು ವೀಕ್ಷಿಸಿದರು ಹಾಗೂ ಕಾರ್ಯಕರ್ತರೊಂದಿಗೆ ಪಾರ್ಕ್ ನಲ್ಲಿ ಸ್ವಲ್ಪ ಕಾಲ ವಿಶ್ರಾಂತಿಸಿದರು.

BY Raghavendra Offer Bagina For Shivamogga Anjanapura Reservoir

ಈ ಸಂದರ್ಭದಲ್ಲಿ ಮಲೆನಾಡು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಕೆ.ಎಸ್ ಗುರುಮೂರ್ತಿ, ರಾಜ್ಯ ಅರಣ್ಯ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕೆ.ರೇವಣ್ಣಪ್ಪ, ಚುನಾಯಿತ ಪ್ರತಿನಿಧಿಗಳು, ಪಕ್ಷದ ಮುಖಂಡರು, ಅಧಿಕಾರಿಗಳು ಭಾಗಿಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+