ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Shivamogga Airport Video : ಹೇಗಿದೆ ನೋಡಿ ಶಿವಮೊಗ್ಗ ವಿಮಾನ ನಿಲ್ದಾಣ

ಫೆಬ್ರವರಿ 27ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ. ವಿಮಾನ ನಿಲ್ದಾಣದ ವಿಡಿಯೋವನ್ನು ಸಂಸದ ಬಿ. ವೈ. ರಾಘವೇಂದ್ರ ಟ್ವೀಟ್ ಮಾಡಿದ್ದಾರೆ.

|
Google Oneindia Kannada News

ಶಿವಮೊಗ್ಗ, ಫೆಬ್ರವರಿ 02; ಶಿವಮೊಗ್ಗ ಜಿಲ್ಲೆಯ ಜನರ ಬಹು ವರ್ಷಗಳ ಕನಸು ನನಸಾಗಿದೆ. ನಗರದ ಹೊರವಲಯದ ಸೋಗಾನೆಯಲ್ಲಿ ವಿಮಾನ ನಿಲ್ದಾಣದ ಕಾಮಗಾರಿ ಅಂತಿಮ ಹಂತ ತಲುಪಿದೆ. ಫೆಬ್ರವರಿ 27ರಂದು ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ.

ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ವಿಮಾನ ನಿಲ್ದಾಣದ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. 'ಶಿವಮೊಗ್ಗ ಜಿಲ್ಲೆಯ ಜನರ ಬಹುನಿರೀಕ್ಷೆಯ ವಿಮಾನ ನಿಲ್ದಾಣದ ಕನಸು ಇದೀಗ ಸಾಕಾರಗೊಂಡು ಉದ್ಘಾಟನೆಯ ಹೊಸ್ತಿಲಲ್ಲಿದೆ' ಎಂದು ಹೇಳಿದ್ದಾರೆ.

ಕಲಮದ ಹೂವಿನ ಮಾದರಿಯಲ್ಲಿ ವಿಮಾನ ನಿಲ್ದಾಣದ ಕಟ್ಟಡವನ್ನು ವಿನ್ಯಾಸಗೊಳಿಸಲಾಗಿದೆ. ಸುತ್ತಲಿನ ಮೂಲ ಸೌಕರ್ಯಗಳು ಸಹ ಗಮನ ಸೆಳೆಯುತ್ತಿವೆ. ಸಂಸದರು ಹಂಚಿಕೊಂಡಿರುವ ವಿಡಿಯೋದಲ್ಲಿ ವಿಮಾನ ನಿಲ್ದಾಣದ ಸೌಂದರ್ಯವನ್ನು ಕಣ್ತುಂಬಿಕೊಳ್ಳಬಹುದಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣ ವೀಕ್ಷಣೆ ಮಾಡಿದ ಕೆಎಸ್‍ಐಐಡಿಸಿ ಅಧ್ಯಕ್ಷರು ಶಿವಮೊಗ್ಗ ವಿಮಾನ ನಿಲ್ದಾಣ ವೀಕ್ಷಣೆ ಮಾಡಿದ ಕೆಎಸ್‍ಐಐಡಿಸಿ ಅಧ್ಯಕ್ಷರು

BY Raghavendra Tweets Shimoga Airport Video

ಬಿ. ವೈ. ರಾಘವೇಂದ್ರ ಟ್ವೀಟ್‌ನಲ್ಲಿ, 'ಇದೇ ಫೆಬ್ರವರಿ 27ರಂದು ನಮ್ಮ ಹೆಮ್ಮೆಯ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಯವರು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ' ಎಂದು ಹೇಳಿದ್ದಾರೆ.

Shimoga airport; ಸಿವಿಲ್ ಏವಿಯೇಷನ್ ಕಾರ್ಯದರ್ಶಿಗಳ ಭೇಟಿ Shimoga airport; ಸಿವಿಲ್ ಏವಿಯೇಷನ್ ಕಾರ್ಯದರ್ಶಿಗಳ ಭೇಟಿ

'662.38 ಎಕರೆ ಪ್ರದೇಶದಲ್ಲಿ 449 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ಅತ್ಯಂತ ಸುಸಜ್ಜಿತ ವಿಮಾನನಿಲ್ದಾಣದಿಂದಾಗಿ ಶಿವಮೊಗ್ಗ ಜಿಲ್ಲೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆರ್ಥಿಕ ಉತ್ತೇಜನ ದೊರೆತು ಅಭಿವೃದ್ಧಿಯ ಹೊಸ ಭಾಷ್ಯವನ್ನು ಬರೆಯಲಿದೆ' ಎಂದು ಸಂಸದರು ವಿವರಿಸಿದ್ದಾರೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜನರ ಪ್ರವೇಶ ನಿರ್ಬಂಧಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಜನರ ಪ್ರವೇಶ ನಿರ್ಬಂಧ

'ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿ ಪರ್ವಕ್ಕೆ ವಿಮಾನ ನಿಲ್ದಾಣವು ವಿಶಿಷ್ಟ ಕೊಡುಗೆಯನ್ನು ನೀಡಲಿದೆ' ಎಂದು ಬಿ. ವೈ. ರಾಘವೇಂದ್ರ ತಿಳಿಸಿದ್ದಾರೆ.

ಯಡಿಯೂರಪ್ಪ ಕನಸು; ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂಬುದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಕನಸು. ಅವರು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ವಿಮಾನ ನಿಲ್ದಾಣದ ಯೋಜನೆ ರೂಪಿಸಿದ್ದರು.

2008ರ ಏಪ್ರಿಲ್‌ನಲ್ಲಿ ಯೋಜನೆ ಸಿದ್ಧವಾಯಿತು. ನಿರೀಕ್ಷೆಯಂತೆ 2010ರಲ್ಲಿ ವಿಮಾನ ನಿಲ್ದಾಣ ಉದ್ಘಾಟನೆಯಾಗಬೇಕಿತ್ತು. ಆದರೆ ಗುತ್ತಿಗೆ ಪಡೆದ ಎರಡು ಕಂಪನಿಗಳು ಕೆಲಸಗಳನ್ನು ಅರ್ಧ ಮಾಡಿ ಸ್ಥಗಿತಗೊಳಿಸಿದವು.

ಬಳಿಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ವಿಮಾನ ನಿಲ್ದಾಣ ಯೋಜನೆಗೆ ಅಗತ್ಯ ಅನುದಾನ ನೀಡಲಿಲ್ಲ. 2019ರಲ್ಲಿ ಮತ್ತೆ ಮುಖ್ಯಮಂತ್ರಿಯಾದ ಯಡಿಯೂರಪ್ಪ ಯೋಜನೆಗೆ ಚುರುಕು ನೀಡಿದರು. ಅಗತ್ಯ ಅನುದಾನವನ್ನು ಕೊಟ್ಟರು. ಈಗ ವಿಮಾನ ನಿಲ್ದಾಣ ಉದ್ಘಾಟನೆಗೆ ಸಜ್ಜಾಗಿದೆ.

English summary
Shivamogga BJP MP B. Y. Raghavendra tweeted Shimoga airport video. Airport all set to inauguration on Febuary 27.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X