Shimoga Airport Video : ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ

ಶಿವಮೊಗ್ಗದ ಸೋಗಾನೆ ಸಮೀಪ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಫೆಬ್ರವರಿ 27ರಂದು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ.

ಶಿವಮೊಗ್ಗ, ಫೆಬ್ರವರಿ 19; ಶಿವಮೊಗ್ಗ ನಗರದ ಹೊರವಲಯದ ಸೋಗಾನೆ ಸಮೀಪ ವಿಮಾನ ನಿಲ್ದಾಣ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27ರಂದು ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ.

ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಭಾನುವಾರ ವಿಡಿಯೋವೊಂದನ್ನು ಟ್ವೀಟ್ ಮಾಡಿದ್ದಾರೆ. ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿದ್ದು, ಉದ್ಘಾಟನೆಗೆ ಸಜ್ಜಾಗಿರುವ ನಿಲ್ದಾಣದ ಸುಂದರ ದೃಶ್ಯಗಳನ್ನು ಕಾಣಬಹುದಾಗಿದೆ.

ತಮ್ಮ ಟ್ವೀಟ್‌ನಲ್ಲಿ ಬಿ. ವೈ. ರಾಘವೇಂದ್ರ ಅವರು, 'ಅಭಿವೃದ್ಧಿಯ ಕನಸಿಗೆ ಹೊಸ ರೆಕ್ಕೆ. ಉದ್ಘಾಟನೆಗೆ ಸಜ್ಜುಗೊಂಡು ನಿಂತಿರುವ ಸುಸಜ್ಜಿತವಾದ ಶಿವಮೊಗ್ಗದ ವಿಮಾನ ನಿಲ್ದಾಣ ಎಂದು ಬರೆದಿದ್ದಾರೆ. ಮತ್ತೊಂದು ಸಾಲಿನಲ್ಲಿ ಇದೇ 27 ರಂದು ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ವಿಮಾನ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ಬಿ. ವೈ. ರಾಘವೇಂದ್ರ ಮಾಹಿತಿ ನೀಡಿದ್ದಾರೆ.

BY Raghavendra Tweets Video Shimoga Airport Work Completed

ಎರಡು ದಿನಗಳ ಹಿಂದೆ ಬಿ. ವೈ. ರಾಘವೇಂದ್ರ ತಮ್ಮ ಫೇಸ್‌ಬುಕ್ ಫೋಸ್ಟ್‌ನಲ್ಲಿ, 'ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಶಿವಮೊಗ್ಗ ವಿಮಾನ ನಿಲ್ದಾಣದ ಉದ್ಘಾಟನೆ. ಪ್ರಧಾನಮಂತ್ರಿ ಅವರೇ ಫೆ.27ರಂದು ದೆಹಲಿಯಿಂದ ಸೋಗಾನೆ ವಿಮಾನ ನಿಲ್ದಾಣಕ್ಕೆ ವಿಮಾನದಲ್ಲಿ ಬಂದು ಇಳಿಯುವ ಮೂಲಕ ನೂತನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಲಿದ್ದಾರೆ. ಸಹ್ಯಾದ್ರಿ ನೆಲದ ಈ ವಿಮಾನ ನಿಲ್ದಾಣ ಈ ಭಾಗದ ಅಭಿವೃದ್ಧಿಗೆ ಹೊಸ ವೇಗ ನೀಡಲಿದೆ!. ಬನ್ನಿ, ಈ ಐತಿಹಾಸಿಕ ಘಳಿಗೆಗೆ ನಾವೆಲ್ಲರೂ ಸಾಕ್ಷಿಗಳಾಗೋಣ' ಎಂದು ಕರೆ ಕೊಟ್ಟಿದ್ದರು.

2019ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ. ಎಸ್. ಯಡಿಯೂರಪ್ಪ ಶಿವಮೊಗ್ಗ ವಿಮಾನ ನಿಲ್ದಾಣ ಯೋಜನೆಗೆ ಚುರುಕುಗೊಳಿಸಿದ್ದರು. 2022ರ ಜನವರಿ ಅಥವಾ ಫೆಬ್ರವರಿ ತಿಂಗಳಿನಿಂದ ವಿಮಾನ ಹಾರಾಟ ಆರಂಭವಾಗುವ ನಿರೀಕ್ಷೆ ಹೊಂದಲಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 2023ರ ಫೆಬ್ರವರಿ 27ರಂದು ವಿಮಾನ ನಿಲ್ದಾಣ ಉದ್ಘಾಟನೆಗೊಳ್ಳುತ್ತಿದೆ.

ಮೊದಲು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ 2050 ಮೀಟರ್ ರನ್ ವೇ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿತ್ತು. ಆದರೆ ಏರ್ ಬಸ್ ಸೇರಿದಂತೆ ದೊಡ್ಡ ವಿಮಾನಗಳು ಇಳಿಯಲು ಅನುಕೂಲವಾಗುವಂತೆ ರನ್ ವೇ ಉದ್ದವನ್ನು 3200 ಮೀಟರ್‌ಗೆ ಹೆಚ್ಚಿಸಲು ಬಳಿಕ ಅನುಮೋದನೆ ನೀಡಲಾಗಿತ್ತು. ಇದರಿಂದಾಗಿ ಯೋಜನೆಗೆ ಹೆಚ್ಚುವರಿಯಾಗಿ 75 ಕೋಟಿ ರೂಪಾಯಿ ವೆಚ್ಚವಾಗಿತ್ತು.

ಶಿವಮೊಗ್ಗ ತಾಲೂಕಿನ ಸೋಗಾನೆ ಗ್ರಾಮದಲ್ಲಿ 220 ಕೋಟಿ ರೂ. ವೆಚ್ಚದಲ್ಲಿ 662.38 ಎಕರೆ ಪ್ರದೇಶದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ರಾಜ್ಯದಲ್ಲಿ ಬೆಂಗಳೂರು ಬಿಟ್ಟರೆ ಶಿವಮೊಗ್ಗದಲ್ಲಿಯೇ ಅತಿ ಉದ್ದದ ರನ್‌ ವೇ ನಿರ್ಮಾಣ ಮಾಡಲಾಗಿದೆ.

ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರಿಡಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಿದೆ. ಉಡಾನ್ ಯೋಜನೆಯಡಿ ದೇಶದ ವಿವಿಧ ನಗರಗಳಿಗೆ ಶಿವಮೊಗ್ಗದಿಂದ ವಿಮಾನ ಸೇವೆ ಒದಗಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+