ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಲ್ಲೂರು-ಕೊಡಚಾದ್ರಿ ನಡುವೆ ಕೇಬಲ್ ಕಾರ್ ಸಂಪರ್ಕ..!

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜನವರಿ 21: ಮಲೆನಾಡಿನ ಪ್ರಸಿದ್ಧ ಪ್ರವಾಸಿ ತಾಣಗಳ ಅಭಿವೃದ್ಧಿಪಡಿಸುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿಶ್ವವಿಖ್ಯಾತ ಕೊಡಚಾದ್ರಿ ಬೆಟ್ಟದಿಂದ ಸುಕ್ಷೇತ್ರ ಕೊಲ್ಲೂರಿಗೆ ಕೇಬಲ್ ಕಾರು ಸಂಪರ್ಕ ವ್ಯವಸ್ಥೆ ಕಲ್ಪಿಸುವ ಯೋಜನೆ ರೂಪಿಸಲಾಗುವುದು ಎಂದು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಇತ್ತಿಚೀಗೆ ನಡೆದ ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲು ಕೈಗೊಳ್ಳಬಹುದಾದ ಯೋಜನೆಗಳು ಹಾಗೂ ಸಾಧ್ಯತೆ, ಸವಾಲುಗಳ ಬಗ್ಗೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ನಡೆದ ಸಮಾಲೋಚನೆ ಸಭೆಯಲ್ಲಿ ಸಂಸದ ರಾಘವೇಂದ್ರ ಕೇಬಲ್ ಕಾರ್ ಕುರಿತು ಮಾತನಾಡಿದರು.

ಹೇಗಿರಲಿದೆ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ?ಹೇಗಿರಲಿದೆ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗ?

ಕೊಲ್ಲೂರು ಮತ್ತು ಕೊಡಚಾದ್ರಿ ನಡುವೆ ರಸ್ತೆ ಮಾರ್ಗ 32 ಕಿ.ಮೀ ದೂರದ ಅಂತರವಿದ್ದು, 11ಕಿ.ಮೀ ಕೇಬಲ್ ಕಾರ್ ಸಂಪರ್ಕ ಅಳವಡಿಸುವುದರಿಂದ ಪ್ರಯಾಣದ ಅಂತರ ಕಡಿಮೆಯಾಗಲಿದೆ ಜತೆಗೆ ಸಮಯದ ಉಳಿತಾಯವಾಗಲಿದೆ ಎಂದು ತಿಳಿಸಿದರು.

Cable Car Connection Between Kollur And Kodachadri

ಮಲೆನಾಡಿನ ಪ್ರಾಕೃತಿಕ ಸೌಂದರ್ಯಕ್ಕೆ ಯಾವುದೇ ತೊಂದರೆ ಆಗದಂತೆ ಹಾಗೂ ಇರುವ ಪ್ರಕೃತಿ ಸೌಂದರ್ಯ ಉಳಿಸಿಕೊಂಡು ಅಭಿವೃದ್ಧಿ ಪಡಿಸಬಹುದಾದ ವಿಧಾನಗಳ ಕುರಿತು ಸಮೀಕ್ಷೆ ಮಾಡಿ ಪ್ರಸ್ತಾವನೆ ಸಲ್ಲಿಸಿದಲ್ಲಿ ಅದನ್ನು ಪರಿಶೀಲಿಸಿ ಪರಿಸರ ಅರಣ್ಯ ಇಲಾಖೆಗಳಿಂದ ನಿರಾಪೇಕ್ಷಣ ಪತ್ರ ಪಡೆಯಲು ಹಾಗೂ ಕೇಂದ್ರ ಸರಕಾರದಿಂದ ಅನುಮತಿ ಕೊಡಿಸುವ ಬಗ್ಗೆ ಆಲೋಚಿಸಲಾಗುವುದು ಎಂದರು.

Cable Car Connection Between Kollur And Kodachadri

ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದ ವಿಕಾಸಕ್ಕೆ ಸರಕಾರವು 20 ಕೋಟಿ ರೂ.ಗಳ ಅನುದಾನ ಮಂಜೂರು ಮಾಡಿದೆ. ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ ಇದೇ ಮಾದರಿಯಲ್ಲಿ ಜೋಗ ಅಭಿವೃದ್ಧಿಗೂ ಗಮನಹರಿಸುವ ಅಗತ್ಯತೆಗಳ ಬಗ್ಗೆ ಕ್ರಮ ವಹಿಸುವುದಾಗಿ ಬಿ.ವೈ. ತಿಳಿಸಿದರು.

Cable Car Connection Between Kollur And Kodachadri

ಇದೇ ಮಾದರಿಯಲ್ಲಿ ಮೈಸೂರು ಚಾಮುಂಡಿ ಬೆಟ್ಟಕ್ಕೆ ರೂಪ್ ವೇ ನಿರ್ಮಿಸಲು ಸಮ್ಮತಿ ಸೂಚಿಸಲಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಅನೇಕ ಪ್ರವಾಸಿ ತಾಣಗಳು ಇವೆ. ಅವುಗಳಿಗೆ ಪ್ರವಾಸಿಗರನ್ನು ಸೆಳೆಯಲು ಚಿಂತನೆ ನಡೆಸಲಾಗಿದೆ. ಆದರೆ ಪ್ರಾಕೃತಿಕ ಸೌಂದರ್ಯ ಹಾಳು ಮಾಡದಂತೆ ಮಾಡಲಿ ಎಂಬುದು ಪರಿಸರ ಪ್ರೇಮಿಗಳ ಆಶಯ.

English summary
Shivamogga MP BY Raghavendra said the cable car connection is Planning from Kodachadri hill to Kollur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X