ಸಾಗರದಲ್ಲಿ ಪ್ರತಿಭಟನೆ ಕೈಬಿಟ್ಟ ಹಿಂದೂಪರ ಸಂಘಟನೆಗಳು
Recommended Video

ಸಾಗರದಲ್ಲಿನ ಹಿಂದೂಪರ ಸಂಘಟನೆಗಳ ಪ್ರತಿಭಟನೆ ಕೊನೆಗೂ ಮುಕ್ತಾಯ | Oneindia Kannada
ಸಾಗರ, ಡಿಸೆಂಬರ್ 14 : ಪರೇಶ್ ಮೇಸ್ತ ಮೇಸ್ತ ಅನುಮಾನಾಸ್ಪದ ಸಾವು ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಬಿಐಗೆ ವಹಿಸಿರುವುದರಿಂದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಹಿಂದೂಪರ ಸಂಘಟನೆಗಳು ಪ್ರತಿಭಟನೆ ಕೈಬಿಟ್ಟಿವೆ.
ಪರೇಶ್ ಮೇಸ್ತ ಮೇಸ್ತ ಆತ್ಮಕ್ಕೆ ಶಾಂತಿ ಕೋರಿ ಸಾಗರದ ಅಶೋಕ ರಸ್ತೆಯಲ್ಲಿರುವ ಸತ್ಯನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಹಮ್ಮಿಕೊಂಡಿದ್ದಾರೆ. ಪೂಜೆಯಲ್ಲಿ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಹಾಗೂ ಅ.ಪು ನಾರಾಯಣಪ್ಪ ಪಾಲ್ಗೊಂಡಿದ್ದರು.

ಎಸ್ಪಿ ಅಭಿನವ್ ಖರೆ ಹಾಗೂ ಹೆಚ್ಚುವರಿ ಎಸ್ಪಿ ಮುತ್ತುರಾಜ್ ಭದ್ರತೆ ಉಸ್ತುವಾರಿ ವಹಿಸಿಕೊಂಡಿದ್ದಾರೆ. ನಗರದಲ್ಲಿ ಸರ್ಕಾರಿ ಶಾಲಾ ಕಾಲೇಜುಗಳು ನಡೆಯುತ್ತಿದೆ. ವಾರದ ಸಂತೆಯನ್ನು ಮುಂದೂಡಲಾಗಿದೆ. ಒಟ್ಟಾರೆ ನಗರದಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ನಗರದ ಒಳಗೆ ಬರುವ ಪ್ರತಿಯೊಂದು ವಾಹನದ ತಪಾಸಣೆ ನಡೆಸಲಾಗುತ್ತಿದೆ.













Click it and Unblock the Notifications