• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಮೊಗ್ಗದ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಚಿನ್ನದ ಪದಕ

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ನವೆಂಬರ್ 21: ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಾಲ್ವರು ಪೊಲೀಸ್ ಸಿಬ್ಬಂದಿ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಪಾತ್ರರಾಗಿದ್ದಾರೆ.

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಡಾ. ಶೇಖರ್ ಎಚ್. ಟಿ, ಸಿಇಎನ್ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಕೆ.ಟಿ ಗುರುರಾಜ್, ದೊಡ್ಡಪೇಟೆ ಪೊಲೀಸ್ ಠಾಣೆಯ ಎಎಸ್ ಐ ಅಂಥೋನಿ, ಜಿಲ್ಲಾ ಪೊಲೀಸ್ ಕಚೇರಿ ಸಿಡಿಆರ್ ವಿಭಾಗದ ಸಿಎಚ್.ಸಿ- 1968 ಇಂದ್ರೇಶ ಅವರು ಚಿನ್ನದ ಪದಕಕ್ಕೆ ಪಾತ್ರರಾಗಿದ್ದಾರೆ.

ಗುಂಡ್ಲುಪೇಟೆ: 70 ಜನರ ಪ್ರಾಣ ಉಳಿಸಿದ ಬಸ್ ಚಾಲಕನಿಗೆ ಬಂಗಾರದ ಪದಕ

ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿರುವ ಪ್ರಶಂಸನೀಯ ಸೇವೆಗಾಗಿ 2017ನೇ ಹಾಗೂ 2018ನೇ ಸಾಲಿನ ಮಾನ್ಯ ಮಂತ್ರಿಗಳ ಚಿನ್ನದ ಪದಕಕ್ಕೆ ಇವರು ಪಾತ್ರರಾಗಿದ್ದಾರೆ.

ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಕೆ.ಎಂ. ಶಾಂತರಾಜು ಅವರು ಸಿಬ್ಬಂದಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಪೊಲೀಸರ ಕಾರ್ಯವೈಖರಿಗೆ ಗೌರವ ಸೂಚಿಸಿ, ಜಿಲ್ಲೆಯ ಪೊಲೀಸ್ ಇಲಾಖೆಗೆ ಇದು ಹೆಮ್ಮೆಯ ವಿಷಯ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

English summary
Four police officers in shivamogga district honored with Chief minister Gold medal
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X