• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನ. 29ರಂದು ಯಡಿಯೂರಪ್ಪ ಶಿವಮೊಗ್ಗ ಪ್ರವಾಸ, ಕಾರ್ಯಕ್ರಮಗಳು

|

ಶಿವಮೊಗ್ಗ, ನವೆಂಬರ್ 27 : ಶಿಕಾರಿಪುರ ಕ್ಷೇತ್ರದ ಬಿಜೆಪಿ ಶಾಸಕ,ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನವೆಂಬರ್ 29ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ನವೆಂಬರ್‌ 29ರ ಭಾನುವಾರ ಯಡಿಯೂರಪ್ಪ ಅವರು ಬೆಳಗ್ಗೆ 9.30ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ಹೊರಡಲಿದ್ದಾರೆ. 10.45ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಸಂಪುಟಕ್ಕೆ ಹೈಕಮಾಂಡ್ 'ಗ್ರೀನ್‌ ಸಿಗ್ನಲ್': ಯಡಿಯೂರಪ್ಪ 'ಯೂಟರ್ನ್'!

ಭಾನುವಾರ ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ಸಹ್ಯಾದ್ರಿ ಕಾಲೇಜಿನ ಆವರಣದಲ್ಲಿ ಕುವೆಂಪು ವಿಶ್ವವಿದ್ಯಾಲಯ, ಸಹ್ಯಾದ್ರಿ ಕಲಾ/ವಾಣಿಜ್ಯ & ನಿರ್ವಹಣೆ/ವಿಜ್ಞಾನ ಕಾಲೇಜು ಇವರ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ.

ಶಿವಮೊಗ್ಗ; ಗ್ರಂಥಾಲಯಗಳಿಗೆ ಮೇಲ್ವಿಚಾರಕ ಹುದ್ದೆ ಖಾಲಿ ಇದೆ

ಸಹ್ಯಾದ್ರಿ ವಿಜ್ಞಾನ ಕಾಲೇಜಿನ ವಿಸ್ತರಣಾ ಕಟ್ಟಡ, ಸಹ್ಯಾದ್ರಿ ಕಲಾ ಕಾಲೇಜಿನ ದ್ವಾರ ಮತ್ತು ಪುರುಷ ವಿದ್ಯಾರ್ಥಿ ನಿಲಯದ ವಿಸ್ತರಣಾ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಯಡಿಯೂರಪ್ಪ ಭಾಗವಹಿಸುವರು.

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಈಶ್ವರಪ್ಪ

ಮಧ್ಯಾಹ್ನ 12.30ಕ್ಕೆ ಶಿವಮೊಗ್ಗದ ಪಿ.ಇ.ಎಸ್.ವಿದ್ಯಾಸಂಸ್ಥೆಗಳ ಹಿಂಭಾಗದಲ್ಲಿ ಕಿಮ್ಮನೆ ಗಾಲ್ಫ್ ರೆಸಾರ್ಟ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಸಂಜೆ 4 ಗಂಟೆಗೆ ಶಿವಮೊಗ್ಗ ನಗರದಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ಕಾರ್ಯಕ್ರಮಗಳ ವಿವರಗಳನ್ನು ನೀಡಿದ್ದಾರೆ.

English summary
Karnataka chief minister B. S. Yediyurappa Shivamogga tour on November 29, 2020. Here are the schedule.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X