ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಶಿವಮೊಗ್ಗ ಮೇಯರ್, ಉಪ ಮೇಯರ್ ಚುನಾವಣೆ ಮುಂದೂಡಿಕೆ, ಕಾರಣವೇನು?

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಸೆಪ್ಟೆಂಬರ್ 6: ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್, ಉಪ ಮೇಯರ್ ಚುನಾವಣೆಗೆ ನಿಗದಿಯಾಗಿದ್ದ ದಿನಾಂಕವನ್ನು ಹೈಕೋರ್ಟ್ ಮಧ್ಯಂತರ ಅದೇಶದ ಮೇರೆಗೆ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಮುಂದೂಡಿದ್ದಾರೆ.

ಪೂರ್ವ ನಿಗದಿಯಂತೆ ಸೆಪ್ಟೆಂಬರ್ 13ರಂದು ಚುನಾವಣೆ ನಡೆಯಬೇಕಿತ್ತು. ಆದರೆ ಮೇಯರ್ ಸ್ಥಾನ ಎಸ್‌ಟಿಗೆ ಮೀಸಲಾಗದೆ ಹಲವು ವರ್ಷಗಳಾಗಿವೆ ಎಂದು ವ್ಯಕ್ತಿಯೊಬ್ಬರು ಕೋರ್ಟ್ ಮೆಟ್ಟಿಲೇರಿದ್ದರಿಂದ ಮಧ್ಯಂತರ ಆದೇಶ ನೀಡಿರುವ ಹೈಕೋರ್ಟ್ ಚುನಾವಣೆ ದಿನಾಂಕವನ್ನು ಮುಂದೂಡುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ. ಸೆಪ್ಟೆಂಬರ್ 6 ರಂದು ಪ್ರಕರಣದ ವಿಚಾರಣೆ ಮುಂದುವರಿಸುವುದಾಗಿ ತಿಳಿಸಿದೆ.

Breaking: ಮೈಸೂರು ಮೇಯರ್,ಉಪಮೇಯರ್ ಬಿಜೆಪಿಗೆ: ಜೆಡಿಎಸ್‌ಗೆ ಶಾಕ್!Breaking: ಮೈಸೂರು ಮೇಯರ್,ಉಪಮೇಯರ್ ಬಿಜೆಪಿಗೆ: ಜೆಡಿಎಸ್‌ಗೆ ಶಾಕ್!

ಮೇಯರ್ ಸುನೀತಾ ಅಣ್ಣಪ್ಪ ಅಧಿಕಾರ ಅವಧಿ ಮುಕ್ತಾಯಕ್ಕೂ ಮುನ್ನವೇ ವಾಲ್ಮೀಕಿ ಸಮುದಾಯದ ಕೆಲವರು ಕೋರ್ಟ್ ಮೆಟ್ಟಿಲೇರಿದ್ದರು. ಎಸ್‌ಟಿಗೆ ಮೀಸಲು ನಿಗದಿ ಮಾಡಬೇಕೆಂದು ಮನವಿ ಮಾಡಿದ್ದರು. ಈ ಸಂಬಂಧ ಆದೇಶ ನೀಡಿದ್ದ ಹೈಕೋರ್ಟ್, ಅರ್ಜಿದಾರರ ಮನವಿಯನ್ನು ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿತ್ತು. ಒಂದು ವೇಳೆ ಸರಕಾರ ನಿಮ್ಮ ಮನವಿ ಪುರಸ್ಕರಿಸದಿದ್ದರೆ ಮೇಯ‌ರ್ ಮೀಸಲಾತಿ ಘೋಷಣೆ ಬಳಿಕ ಮತ್ತೆ ಕೋರ್ಟ್‌ಗೆ ಬರಲು ಅವಕಾಶವಿದೆ ಎಂದು ಅರ್ಜಿದಾರರಿಗೆ ತಿಳಿಸಿತ್ತು.

City Corporation Of Shivamogga Mayor And Deputy Mayor Election Postponed

ಇದೀಗ ಬಿಸಿಎಂ-ಎ ಅಭ್ಯರ್ಥಿಗೆ ಮೀಸಲು ಘೋಷಣೆಯಾಗುತ್ತಿದ್ದಂತೆ ಮತ್ತೆ ಮೀಸಲಾತಿ ವಿಚಾರ ಕೋರ್ಟ್ ಮೆಟ್ಟಿಲೇರಿದೆ. ಸೆಪ್ಟೆಂಬರ್ 6ರಂದು ನ್ಯಾಯಾಲಯ ಯಾವ ಆದೇಶ ನೀಡುತ್ತದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ನ್ಯಾಯಾಂಗ ಪ್ರಕ್ರಿಯೆ ವಿಳಂಬವಾದಷ್ಟೂ ಹಾಲಿ ಮೇಯರ್ ಹಾಗೂ ಉಪಮೇಯರ್ ಅಧಿಕಾರಾವಧಿ ವಿಸ್ತರಣೆಯಾಗಲಿದೆ.

English summary
Regional commissioner Amlan Aditya Biswas has postponed the election of Mayor and Deputy Mayor of the Shivamogga city Corporation after interim order of the Karnataka high court.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X