ಶಿವಮೊಗ್ಗದಲ್ಲಿ ಗಣಪತಿ ಪ್ರತಿಷ್ಟಾಪನೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆ
ಶಿವಮೊಗ್ಗ ಸೆಪ್ಟೆಂಬರ್ 7: ಗಣಪತಿ ಪ್ರತಿಷ್ಠಾಪನೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಅರಬಿಳಚಿ ಕ್ಯಾಂಪ್‌ನಲ್ಲಿ ಗಣಪತಿ ಪ್ರತಿಷ್ಠಾಪನೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ.
ಅರ್ಜುನ್ ಎನ್ನುವ ಯುವಕನ ಮೇಲೆ ಹಲ್ಲೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಡಿಸಲು ಹೋದ ಪೋಲಿಸ್ ಪೇದೆಗಳಾದ ನಾಗರಾಜ್ ಮತ್ತು ವಿಶ್ವ ಎಂಬುವರ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಗಲಾಟೆ ಬಳಿಕ ಸ್ಥಳಕ್ಕೆ ಎಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 15 ರಿಂದ 20 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಗಣೇಶ ಮೂರ್ತಿ ತರುವಾಗ ಡೊಳ್ಳು ಬಾರಿಸುವವರ ವಿಚಾರದಲ್ಲಿ ಎರಡು ಗುಂಪುಗಳ ಮಧ್ಯ ಘರ್ಷಣೆ ನಡೆದಿದೆ ಎಂದು ಹೇಳಲಾಗುತ್ತಿದೆ. ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಸ್ಥಳದಲ್ಲೇ ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಪೊಲೀಸರು ಎರಡು ಗುಂಪನ್ನ ಚದುರಿಸಿ ಶಾಂತತೆ ಕಾಪಾಡಿದ್ದಾರೆ.
ಇದರಿಂದಾಗಿ ಊರಿನ ಎಲ್ಲಾ ಗಣಪತಿಗಳನ್ನು ಪೊಲೀಸರು ವಿಸರ್ಜನೆ ಮಾಡಿದ್ದಾರೆ. ಮುನ್ನೇಚ್ಚರಿಕಾ ಕ್ರಮವಾಗಿ ಪೊಲೀಸರ ಸಮ್ಮುಖದಲ್ಲೇ ಊರಿನ ಎಲ್ಲಾ ಗಣಪತಿ ವಿಸರ್ಜನೆ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.












Click it and Unblock the Notifications