ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದಲ್ಲಿ ಶಾಂತಿ ಕಾಪಾಡುವಂತೆ ಸಚಿವ ಆರಗ ಜ್ಞಾನೇಂದ್ರ ಮನವಿ

|
Google Oneindia Kannada News

ಶಿವಮೊಗ್ಗ, ಆಗಸ್ಟ್‌ 16: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಶಿವಮೊಗ್ಗದ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಹಾಕಿದ್ದ ವೀರ್ ಸಾವರ್ಕರ್‌ ಫ್ಲೆಕ್ಸ್ ತೆಗೆದಿದ್ದರಿಂದ ನಗರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗಿದೆ. ಸದ್ಯ ನಗರದಲ್ಲಿ ಕರ್ಫ್ಯೂ ಜಾರಿಯಲ್ಲಿದ್ದು, ಜನರು ಶಾಂತಿ ಕಾಪಾಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

ಶಿವಮೊಗ್ಗ ನಗರದಲ್ಲಿ ಎರಡು ಗುಂಪುಗಳ ಮಧ್ಯೆ ವೀರ್ ಸಾವರ್ಕರ್‌ ಫ್ಲೆಕ್ಸ್, ಬ್ಯಾನರ್‌ ಕಟ್ಟುವ ವಿಚಾರ ಸಂಬಂಧ ಭಿನ್ನಾಭಿಪ್ರಾಯ ಉಂಟಾಗಿ ಜಗಳ ನಡೆದು ವ್ಯಕ್ತಿಗೆ ಚಾಕು ಇರಿತ ಉಂಟಾಗಿತ್ತು. ಕಾನೂನು ಸುವ್ಯವಸ್ಥೆ ಹದಗೆಟ್ಟ ಹಿನ್ನೆಲೆಯಲ್ಲಿ ಶಾಂತಿ ಹದಗೆಟ್ಟಿತ್ತು. ಹೀಗಾಗಿ ಶಿವಮೊಗ್ಗ ಹಾಗೂ ಭದ್ರಾವತಿಯಲ್ಲಿ ನಿಷೇಧಾಜ್ಞೆ ಹೊರಡಿಸಿ ಶಾಲೆ ಕಾಲೇಜಿಗೆ ರಜೆ ನೀಡಲಾಗಿದೆ.

Breaking; ಶಿವಮೊಗ್ಗದಲ್ಲಿ ಚಾಕು ಇರಿತ, ಪ್ರಮುಖ ಆರೋಪಿಗೆ ಗುಂಡೇಟುBreaking; ಶಿವಮೊಗ್ಗದಲ್ಲಿ ಚಾಕು ಇರಿತ, ಪ್ರಮುಖ ಆರೋಪಿಗೆ ಗುಂಡೇಟು

ಘಟನೆಯಲ್ಲಿ ಚೂರಿ ಇರಿತಕ್ಕೊಳಗಾದ ಇಬ್ಬರಲ್ಲಿ ಒಬ್ಬರನ್ನು ಭೇಟಿಯಾದ ಬಳಿಕ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ''ನಾವು ಕಳೆದ ಮೂರು ದಿನಗಳಿಂದ ಭಾರತ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದ್ದೇವೆ. ಇಂತಹ ಸಂತಸದ ಸಂದರ್ಭದಲ್ಲಿ ಇಂತಹ ಅಹಿತಕರ ಘಟನೆ ನಡೆದಿರುವುದು ದುರಾದೃಷ್ಟಕರ. ಇಲ್ಲಿ ಪೊಲೀಸರು ಎಲ್ಲಾ ಅಪರಾಧಿಗಳನ್ನು ಬಂಧಿಸಿ ನ್ಯಾಯಾಲಯದ ಮುಂದೆ ನಿಲ್ಲುತ್ತಾರೆ'' ಎಂದು ಹೇಳಿದರು.

ಚೂರಿ ಇರಿತ ಘಟನೆಯ ಹಿಂದಿರುವ ಕೋಮುವಾದಿ ಶಕ್ತಿಗಳನ್ನು ಬಯಲಿಗೆಳೆಯುವ ಅಗತ್ಯವಿದೆ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಶೀಘ್ರದಲ್ಲೇ ನಗರಕ್ಕೆ ಭೇಟಿ ನೀಡಲಿದ್ದಾರೆ ಎಂದು ಅವರು ಹೇಳಿದರು. ಮಾಧ್ಯಮಗೋಷ್ಠಿಯಲ್ಲಿ ಪೂರ್ವ ವಲಯದ ಪೊಲೀಸ್ ಮಹಾನಿರೀಕ್ಷಕ ತ್ಯಾಗರಾಜನ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀ ಪ್ರಸಾದ್ ಉಪಸ್ಥಿತರಿದ್ದರು.

ಪ್ರೇಮ್‌ ಸಿಂಗ್ ಎಂಬಾತನಿಗೆ ಚಾಕು ಇರಿತ

ಪ್ರೇಮ್‌ ಸಿಂಗ್ ಎಂಬಾತನಿಗೆ ಚಾಕು ಇರಿತ

ನಗರದ ಅಮೀರ್ ಅಹ್ಮದ್ ವೃತ್ತದಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವೀರ್ ಸಾವರ್ಕರ್ ಬ್ಯಾನರ್ ಹಾಕುವ ವಿಚಾರವಾಗಿ ನಡೆದ ವಾಗ್ವಾದದ ಹಿನ್ನೆಲೆಯಲ್ಲಿ ಪ್ರೇಮ್‌ ಸಿಂಗ್ ವ್ಯಕ್ತಿಗೆ ಚಾಕುವಿನಿಂದ ಇರಿದ ಘಟನೆ ನಡೆದಿತ್ತು. ಗುಂಪೊಂದು ಸಾವರ್ಕರ್ ಚಿತ್ರವನ್ನು ತೆಗೆದು, ಅವರು ಹಿಂದುತ್ವವಾದಿ, ಸ್ವಾತಂತ್ರ್ಯ ಹೋರಾಟಗಾರರಲ್ಲ ಎಂದು ಹೇಳಿ, ಬದಲಿಗೆ ಟಿಪ್ಪು ಸುಲ್ತಾನ್ ಚಿತ್ರವನ್ನು ಹಾಕಲು ಪ್ರಯತ್ನಿಸಿದ್ದರು. ನಂತರ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಗರದಾದ್ಯಂತ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಹಾಕಲಾಗಿದ್ದ ಎಲ್ಲಾ ರೀತಿಯ ಬ್ಯಾನರ್ ಮತ್ತು ಹೋರ್ಡಿಂಗ್‌ಗಳನ್ನು ತೆಗೆದುಹಾಕಲಾಯಿತು.

ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ- ಸಿಎಂಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ- ಸಿಎಂ

ಪೊಲೀಸರಿಂದ ಲಘು ಲಾಠಿ ಪ್ರಹಾರ

ಪೊಲೀಸರಿಂದ ಲಘು ಲಾಠಿ ಪ್ರಹಾರ

ಅಮೀರ್ ಅಹಮದ್ ಸರ್ಕಲ್‌ನಲ್ಲಿ ಸಾವರ್ಕರ್ ಅವರ ಫ್ಲೆಕ್ಸ್ ಇದ್ದ ಜಾಗದಲ್ಲಿ ಟಿಪ್ಪು ಸುಲ್ತಾನ್ ಅವರ ಫೋಟೊ ಕಟ್ಟಲು ಮುಸ್ಲಿಂ ಸಮುದಾಯದ ಯುವಕರು ಮುಂದಾಗಿದ್ದರು. ಆಗ ಪೊಲೀಸರು ಯುವಕರನ್ನು ತಡೆದಿದ್ದಾರೆ. ಈ ವೇಳೆ ಸರ್ಕಲ್‌ಗೆ ನುಗ್ಗಿದ ಕಿಡಿಗೇಡಿಗಳು ವಿ.ಡಿ.ಸಾವರ್ಕರ್ ಅವರ ಫ್ಲೆಕ್ಸ್ ತೆರವು ಮಾಡಿದ್ದಾರೆ. ಕೂಡಲೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿ, ಫ್ಲೆಕ್ಸ್ ಕಿತ್ತವರನ್ನು ವಶಕ್ಕೆ ಪಡೆದಿದ್ದರು.

ಭದ್ರಾವತಿ ನಗರದಲ್ಲೂ ನಿಷೇಧಾಜ್ಞೆ

ಭದ್ರಾವತಿ ನಗರದಲ್ಲೂ ನಿಷೇಧಾಜ್ಞೆ

ನಗರದಲ್ಲಿ ಪರಿಸ್ಥಿತಿ ತಿಳಿಗೊಳಿಸುವ ಸಲುವಾಗಿ ಪೊಲೀಸರು ಪ್ರಸ್ತುತ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಈ ಸಂಬಂಧ ತಹಶೀಲ್ದಾರ್ ಅವರು ಆದೇಶ ಹೊರಡಿಸಿದ್ದಾರೆ. ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸಾವರ್ಕರ್ ಫ್ಲೆಕ್ಸ್ ವಿವಾದದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾವರಣ ನಿರ್ಮಾಣದ ಬೆನ್ನಲ್ಲೇ ಮುಂಜಾಗ್ರತ ಕ್ರಮವಾಗಿ ಭದ್ರಾವತಿ ನಗರದಲ್ಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಲ್ಲೂ ಕೂಡ ಎರಡು ದಿನ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ.

ಶಿವಮೊಗ್ಗ ಹಾಗೂ ಭದ್ರಾವತಿಗೆ ಮಾತ್ರ ಅನ್ವಯ

ಶಿವಮೊಗ್ಗ ಹಾಗೂ ಭದ್ರಾವತಿಗೆ ಮಾತ್ರ ಅನ್ವಯ

ಸಿಆರ್‌ಪಿಸಿ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣದ ಶಾಲೆ, ಕಾಲೇಜುಗಳಿಗೆ ಈಗಾಗಲೇ ರಜೆ ಘೋಷಿಸಲಾಗಿದೆ. 144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ದಿನಾಂಕ ಆ.16 ರಂದು ರಜೆ ಘೋಷಿಸಲಾಗಿದೆ, ಕುವೆಂಪು ವಿಶ್ವವಿದ್ಯಾಲಯದ ಪರೀಕ್ಷೆಗಳು ರದ್ದುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ತಿಳಿಸಿದ್ದಾರೆ.

English summary
Clash over Savarkar Poster: Home Minister Araga Jnanendra appealed to the people of the Shivamogga city to maintain peace.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X