ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದಲ್ಲಿ ವಿಧಿಸಿದ್ದ ಕ್ಲಸ್ಟರ್ ಕಂಟೈನ್ಮೆಂಟ್ ಆದೇಶ ವಾಪಸ್

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜುಲೈ 24: ನಗರದ ಕೆಲವು ವಾರ್ಡ್ ಗಳಲ್ಲಿ ಜಾರಿಗೊಳಿಸಲಾಗಿದ್ದ ಒಂದು ವಾರಗಳ ಕ್ಲಸ್ಟರ್ ಕಂಟೈನ್ಮೆಂಟ್ ಝೋನ್ ಆದೇಶವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು.

Recommended Video

China launches Mars probe during Pandemic | Oneindia Kannada

ಗುರುವಾರ ರಾತ್ರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, "ರಾಜ್ಯದ ಎಲ್ಲೆಡೆ ಲಾಕ್‌ಡೌನ್ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಹಾಗೂ ಸ್ಥಳೀಯರು ತಾವೇ ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಸೀಲ್ ‌ಡೌನ್ ತೆರವುಗೊಳಿಸಲು ನಿರ್ಧರಿಸಲಾಗಿದೆ" ಎಂದು ಹೇಳಿದರು.

ಶಿವಮೊಗ್ಗ; ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ರದ್ದುಶಿವಮೊಗ್ಗ; ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ ರದ್ದು

ಇನ್ನು ಮುಂದೆ ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬರುವ ಮನೆಗಳನ್ನು ಮಾತ್ರ ಸೀಲ್ ‌ಡೌನ್ ಮಾಡಲು ನಿರ್ಧರಿಸಲಾಗಿದೆ. ಶಿವಮೊಗ್ಗ ನಗರದಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಜವಾಬ್ದಾರಿ ಹೆಚ್ಚಾಗಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಟ್ಟುನಿಟ್ಟಿನಿಂದ ಪಾಲಿಸುವುದು, ಗುಂಪು ಸೇರದಿರುವುದು, ಅಗತ್ಯ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಬರುವುದು ಮುಂತಾದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಹೇಳಿದರು.

Cluster Containment Zone Order Cancelled In Shivamogga

ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಎಸ್ಪಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತೇಶ್ ಉಪಸ್ಥಿತರಿದ್ದರು.

English summary
One week cluster containment zone order, which was implemented in some wards in Shivamogga city has been cancelled said minister KS Eshwarappa,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X