ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗಕ್ಕೆ ಮತ್ತಷ್ಟು ಅನುದಾನ ನೀಡಿದ ಸಿಎಂ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಆಗಸ್ಟ್ 14: ಮಂಗಳವಾರ ಶಿವಮೊಗ್ಗದಲ್ಲಿ ಪ್ರವಾಹದಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪನವರು ಜಿಲ್ಲೆಗೆ ಇನ್ನೂ ಕೆಲವು ಅನುದಾನವನ್ನು ನೀಡಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಹದಿಂದ ಆಗಿರುವ ಹಾನಿಯ ಬಗ್ಗೆ ಒಂದು ವಾರದಲ್ಲಿ ವಿವರವಾದ ವರದಿ ಸಲ್ಲಿಸಬೇಕು ಎಂದು ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜೊತೆಜೊತೆಗೇ ಜಿಲ್ಲೆಗೆ ಕೆಲವು ಅನುದಾನಗಳನ್ನೂ ಘೋಷಿಸಿದ್ದಾರೆ.

 ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ: ಯಡಿಯೂರಪ್ಪ ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ: ಯಡಿಯೂರಪ್ಪ

ಮೊದಲಿಗೆ, ಪ್ರವಾಹದಿಂದ ಹಾನಿ ಸಂಭವಿಸಿದ ಐದು ಸಾವಿರ ಕುಟುಂಬಗಳಿಗೆ ತಲಾ ಹತ್ತು ಸಾವಿರ ಪರಿಹಾರ, ಮನೆ ದುರಸ್ತಿಗೆ ಒಂದು ಲಕ್ಷ, ಮನೆ ನಿರ್ಮಾಣಕ್ಕೆ ಐದು ಲಕ್ಷ ನೀಡಲಾಗುವುದು ಎಂದು ತಿಳಿಸಿದರು. ರಸ್ತೆ, ಸೇತುವೆಗಳ ನಿರ್ಮಾಣಕ್ಕೆ ತುರ್ತಾಗಿ 50 ಕೋಟಿ ರೂಪಾಯಿ ಬಿಡುಗಡೆ ಮಾಡುವುದಾಗಿ ಹೇಳಿದರು.

CM Yeddyurappa Announced More Grants For Shivamogga

ಬಿಎಸ್ವೈ ಆದೇಶ: ಜಿಲ್ಲಾಧಿಕಾರಿಗಳಿಗೆ ಬಯಸದೇ ಬಂದ ಸೌಭಾಗ್ಯಬಿಎಸ್ವೈ ಆದೇಶ: ಜಿಲ್ಲಾಧಿಕಾರಿಗಳಿಗೆ ಬಯಸದೇ ಬಂದ ಸೌಭಾಗ್ಯ

ಸೊರಬ ತಾಲೂಕಿನ ಮೂಗೂರು ಏತ ನೀರಾವರಿಗೆ 105 ಕೋಟಿ, ಮೂಡಿ ಏತ ನೀರಾಚರಿಗೆ 275 ಕೋಟಿ ನೀಡಲಾಗುವುದು. ಶಿಕಾರಿಪುರ, ಸೊರಬ ತಾಲ್ಲೂಕಿನ ನೀರಾವರಿ ಯೋಜನೆಗಳಿಗೆ ಈಗಾಗಲೇ 1,300 ಕೋಟಿ ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭಗೊಳ್ಳುವುದು ಎಂದರು. ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ಕಾಮಗಾರಿ ಆರಂಭಕ್ಕೆ 50 ಕೋಟಿ ನೀಡಲಾಗುವುದು ಎಂದೂ ತಿಳಿಸಿದ್ದಾರೆ. ಜಿಲ್ಲೆಯ ಅತಿವೃಷ್ಟಿ ಹಾನಿಯ ವರದಿ ಸಿದ್ಧಪಡಿಸಿದ ನಂತರ ಪರಿಹಾರದ ಪ್ಯಾಕೇಜ್ ನೀಡಲಾಗುವುದು ಎಂದು ಹೇಳಿದರು.

English summary
Chief Minister Yeddyurappa, who visited the flood-affected areas in Shimoga on Tuesday, has given some more grants to the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X