ಅ.25 ರಂದು ಶಿವಮೊಗ್ಗಕ್ಕೆ ಆಗಮಿಸಲಿರುವ ಸಿಎಂ ಯಡಿಯೂರಪ್ಪ
ಶಿವಮೊಗ್ಗ, ಅಕ್ಟೋಬರ್ 25: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಅಕ್ಟೋಬರ್ 25 ರಿಂದ ಎರಡು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ವಿವಿಧ ಸಭೆ ಹಾಗೂ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಅ.25 ರಂದು ಬೆಳಿಗ್ಗೆ 9.30 ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 10.50ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಭಾನುವಾರ ಬೆಳಿಗ್ಗೆ 11.30ಕ್ಕೆ ಗೋಪಿಶೆಟ್ಟಿಹಳ್ಳಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಭವನವನ್ನು ಉದ್ಘಾಟಿಸಲಿದ್ದಾರೆ.
ಮಧ್ಯಾಹ್ನ 12ಕ್ಕೆ ಡಿ.ಸಿ ಕಾಂಪೌಂಡ್ ಪ್ರೆಸ್ ಟ್ರಸ್ಟ್ ನಲ್ಲಿ ಪತ್ರಿಕಾ ಭವನದ ಭೂಮಿ ಪೂಜೆ ಕಾರ್ಯಕ್ರಮ, ಮಧ್ಯಾಹ್ನ 12.15ಕ್ಕೆ ಸರ್ಕಾರಿ ನೌಕರರ ಭವನದ ಮೀಟಿಂಗ್ ಹಾಲ್ ಉದ್ಘಾಟಿಸುವರು.

ಮಧ್ಯಾಹ್ನ 12.30ಕ್ಕೆ ಸರ್ಕಾರಿ ನೌಕರರ ಭವನದಲ್ಲಿ ಪ್ರೆಸ್ ಟ್ರಸ್ಟ್ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಹಾಗೂ ಭಾನುವಾರ ಶಿವಮೊಗ್ಗದಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.
ಅ.26 ರಂದು ವಿವಿಧ ಸ್ಥಳೀಯ ಕಾರ್ಯಕ್ರಮ ಹಾಗೂ ಬೆಳಗ್ಗೆ 10ಕ್ಕೆ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪನವರ 87ನೇ ಜನ್ಮ ಸ್ಮರಣೆ ಕಾರ್ಯಕ್ರಮ ಹಾಗೂ ಸೊರಬ ಪಟ್ಟಣದ ಉದ್ಯಾನವನದ ಉದ್ಘಾಟನಾ ಸಮಾರಂಭದಲ್ಲಿ ಆನ್ಲೈನ್ ಮೂಲಕ ಪಾಲ್ಗೊಳ್ಳುವರು.
ಸೋಮವಾರ ಬೆಳಿಗ್ಗೆ 11.00ಕ್ಕೆ ಹೆಲಿಕಾಪ್ಟರ್ ಮೂಲಕ ಮೈಸೂರಿಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












Click it and Unblock the Notifications