• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸ್ವಕ್ಷೇತ್ರಕ್ಕೆ ಸಿಎಂ ಯಡಿಯೂರಪ್ಪ ಆಗಮನ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ಅಕ್ಟೋಬರ್ 16: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಇದೇ ಅಕ್ಟೋಬರ್ 18 ರಿಂದ ಮೂರು ದಿನಗಳ ಕಾಲ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಮುಖ್ಯಮಂತ್ರಿ ಆದ ಬಳಿಕ ನಾಲ್ಕನೇ ಬಾರಿಗೆ ಶಿವಮೊಗ್ಗ ಜಿಲ್ಲೆ ಹಾಗೂ ತಾವು ಪ್ರತಿನಿಧಿಸುವ ಶಿಕಾರಿಪುರ ವಿಧಾನ ಸಭಾ ಕ್ಷೇತ್ರಕ್ಕೆ ಆಗಮಿಸಲಿದ್ದಾರೆ.

ಶಿವಮೊಗ್ಗ ದಸರಾ; ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮ ರದ್ದು

ಅಕ್ಟೋಬರ್ 18 ರಂದು ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 3.55 ಶಿಕಾರಿಪುರಕ್ಕೆ ಆಗಮಿಸಲಿರುವ ಅವರು ಅಂದು ಅಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆ.

ಅಕ್ಟೋಬರ್ 19 ರಂದು ಬೆಳಗ್ಗೆ 11 ಗಂಟೆಗೆ ಕಸಬಾ ಏತ ನೀರಾವರಿ ಯೋಜನೆ ಶಂಕುಸ್ಥಾಪನೆ ಹಾಗೂ ಶಿವಶರಣೆ ಅಕ್ಕಮಹಾದೇವಿ ಜನ್ಮಸ್ಥಳವಾದ ಉಡುತಡಿಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳ ಶಂಕುಸ್ಥಾಪನೆಗಳ ಉದ್ಘಾಟನೆಯಲ್ಲಿ ಸಿಎಂ ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ.

ಎಲ್ಲ ಕಾರ್ಯಕ್ರಮಗಳಿಗೂ ಶಿಕಾರಿಪುರ ಸಾಂಸ್ಕೃತಿಕ ಭವನದಲ್ಲಿ ಚಾಲನೆ ನೀಡಲಿದ್ದು, ಅಂದು ಕೂಡಾ ಶಿಕಾರಿಪುರದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಅ.20 ರಂದು ಮುಂಜಾನೆ 10 ಗಂಟೆಗೆ ಸಾಂಸ್ಕೃತಿಕ ಭವನದಲ್ಲಿ ವಿವಿಧ ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಸಿಎಂ ಪಾಲ್ಗೊಳ್ಳಲಿದ್ದಾರೆ. ನಂತರ ಮಧ್ಯಾಹ್ನ 2.30ಕ್ಕೆ ಶಿಕಾರಿಪುರದಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

English summary
Chief Minister BS Yediyurappa will visit to Shivamogga district for three days from October 18.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X