ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿಯಿಂದ ಅನರ್ಹ ಶಾಸಕರಿಗೆ ಟಿಕೆಟ್ ಪಕ್ಕಾ; ಸಿಎಂ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಸೆಪ್ಟೆಂಬರ್ 30: ಮುಖ್ಯಮಂತ್ರಿಯಾದ ಬಳಿಕ ಎರಡನೇ ಬಾರಿ ಸ್ವಕ್ಷೇತ್ರಕ್ಕೆ ಆಗಮಿಸಿರುವ ಯಡಿಯೂರಪ್ಪ ಅವರು, ಬಿಜೆಪಿಯಿಂದ ಅನರ್ಹ ಶಾಸಕರಿಗೆ ಟಿಕೆಟ್ ನೀಡುವುದು ಖಚಿತ ಎಂದು ಘೋಷಣೆ ಮಾಡಿದ್ದಾರೆ.

"ರಾಜ್ಯದಲ್ಲಿ ಉಪಚುನಾವಣೆಗೆ ದಿನಾಂಕ ನಿಶ್ಚಯವಾಗಿದೆ. 15 ಶಾಸಕರು ರಾಜೀನಾಮೆ ನೀಡಿ ಹೊರಬಂದಿದ್ದರು. ಅವರಿಗೆ ಪಕ್ಷದ ಟಿಕೆಟ್ ನೀಡಲು ರಾಷ್ಟ್ರೀಯ ಅಧ್ಯಕ್ಷರು ನಿರ್ಧಾರ ಮಾಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷರು ಹಾಗೂ ನಾನು ಚರ್ಚಿಸಿ ಈಗಾಗಲೇ ನಿರ್ಧಾರ ಮಾಡಿದ್ದೇವೆ. ಎಲ್ಲರಿಗೂ ಪಕ್ಷದಿಂದಲೇ ಟಿಕೆಟ್ ನೀಡಲಾಗುತ್ತದೆ. ಅನರ್ಹ ಶಾಸಕರನ್ನು ನಿಲ್ಲಿಸಿ, ಗೆಲ್ಲಿಸುವ ಜವಾಬ್ದಾರಿಯು ನಮ್ಮ ಮೇಲಿದೆ" ಎಂದು ಅನರ್ಹರಿಗೆ ಭರವಸೆ ನೀಡಿದರು.

ಯಡಿಯೂರಪ್ಪರಿಂದ ವೀರಶೈವ ಸಮಾಜ ಉಳಿಯಿತು: ಶಾಮನೂರು ಶಿವಶಂಕರಪ್ಪಯಡಿಯೂರಪ್ಪರಿಂದ ವೀರಶೈವ ಸಮಾಜ ಉಳಿಯಿತು: ಶಾಮನೂರು ಶಿವಶಂಕರಪ್ಪ

"ನಮ್ಮ ಸರ್ಕಾರ ಬರಲು ಕಾರಣರಾದವರ ಗೆಲುವಿಗೆ ಎಲ್ಲರೂ ಕೆಲಸ ಮಾಡುತ್ತೇವೆ. ಯಾರೂ ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಯಾರ ಹೇಳಿಕೆ ಬಗ್ಗೆಯೂ ತಲೆಕಡೆಸಿಕೊಳ್ಳಬೇಡಿ. ಚುನಾವಣೆ ನಡೆಯುವ ಪ್ರತಿ ಕ್ಷೇತ್ರಕ್ಕೂ ಇಬ್ಬರು ಉಸ್ತುವಾರಿ ನೇಮಿಸಲಾಗುವುದು. ಕಳೆದ ಚುನಾವಣೆಯಲ್ಲಿ ಕಡಿಮೆ ಅಂತರದಲ್ಲಿ ಸೋತವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲಾಗುವುದು" ಎಂದು ತಿಳಿಸಿದರು. ಈ ಕುರಿತು ಮುಂದಿನ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ನಡೆಸುವುದಾಗಿ ಹೇಳಿದರು.

CM Yediyurappa Confirmed Ticket From BJP To Ineligible MLAs

"ತಂತಿ ಮೇಲಿನ ನಡಿಗೆ ಕುರಿತ ನನ್ನ ಹೇಳಿಕೆಗೆ ಅಪಾರ್ಥ ಕಲ್ಪಿಸುವ ಅಗತ್ಯವಿಲ್ಲ" ಎಂದೂ ತಿಳಿಸಿದರು.

ಹೊನ್ನಾಂಬಿಕೆಗೆ ನಮಿಸಿ ಹರಕೆ ತೀರಿಸಿದ ಬಿ. ಎಸ್. ಯಡಿಯೂರಪ್ಪಹೊನ್ನಾಂಬಿಕೆಗೆ ನಮಿಸಿ ಹರಕೆ ತೀರಿಸಿದ ಬಿ. ಎಸ್. ಯಡಿಯೂರಪ್ಪ

"ಸೀಮಿತ ಸಂಪನ್ಮೂಲವನ್ನು ಎಲ್ಲಾ ಸಮಾಜ ಮತ್ತು ರಾಜ್ಯದ ಅಭಿವೃದ್ಧಿಗೆ ಬಳಸಬೇಕಿದೆ. ಹೆಚ್ಚಿನ ಅನುದಾನವನ್ನು ನೀಡುವುದು ಕಷ್ಟಸಾಧ್ಯ. ಅದನ್ನೇ ಹೇಳಿದ್ದೇನೆ ಅಷ್ಟೇ" ಎಂದರು. ಶಿಕಾರಿಪುರ ತಾಲೂಕಿನ ಜನರ ಸಮಸ್ಯೆಯನ್ನು ಆಲಿಸಲೆಂದೇ ಇಂದು ಜನಸಂಪರ್ಕ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ಶಿವಮೊಗ್ಗ ನಗರದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.

English summary
CM Yeddyurappa has announced in Shikharipuram that the BJP is sure to issue a ticket to ineligible MLAs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X