• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಾಮ ಮಂದಿರ ವಿಚಾರದಲ್ಲಿ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಯಡಿಯೂರಪ್ಪ ಗರಂ

|

ಶಿವಮೊಗ್ಗ, ಫೆಬ್ರವರಿ 17: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ.

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದ ರಜತಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಯಾರೂ ಹಗುರವಾಗಿ ಮಾತನಾಡಬಾರದು ಎಂದು ಎಚ್ಚರಿಸಿದರು.

ರಾಮ ಮಂದಿರ ನಿರ್ಮಾಣಕ್ಕೆ ಸಿದ್ದರಾಮಯ್ಯ ದೇಣಿಗೆ ಕೊಟ್ಟರೇ? ಕುತೂಹಲಕ್ಕೆ ತೆರೆ

ರಾಮ ಮಂದಿರಕ್ಕಾಗಿ ಎಲ್ಲರೂ ದೇಣಿಗೆ ನೀಡುತ್ತಿದ್ದಾರೆ. ಹಿಂದೂ, ಮುಸ್ಲಿಂ, ಕ್ರೈಸ್ತ ಎಲ್ಲರೂ ದೇಣಿಗೆ ನೀಡುತ್ತಿದ್ದಾರೆ. ಈ ಸಂದರ್ಭದಲ್ಲಿ ಮಂದಿರದ ವಿಚಾರದಲ್ಲಿ ಯಾರೂ ಹಗುರವಾಗಿ ಮಾತನಾಡಬಾರದು ಎಂದರು.

ಇ‌ನ್ನು ಅಯೋಧ್ಯೆ ಬಿಟ್ಟು ಬೇರೆಡೆ ಮಂದಿರ ಕಟ್ಟುವುದಾದರೆ ಹಣ ಕೊಡುವುದಾಗಿ ಹೇಳಿಕೆ ನೀಡುತ್ತಿದ್ದಾರೆ. ಇದು ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧವಾದ ಹೇಳಿಕೆ. ಈ ರೀತಿ ಮಾತನಾಡಿದರೆ ಸುಪ್ರೀಂ ಕೋರ್ಟ್ ಕ್ರಮ ಕೈಗೊಳ್ಳಬೇಕಾಗುತ್ತದೆ. ವಿರೋಧ ಪಕ್ಷದ ನಾಯಕರು ಹಗುರವಾಗಿ ಮಾತಾಡುವುದು ಅವರಿಗೂ ಒಳ್ಳೆಯದಲ್ಲ, ರಾಜ್ಯಕ್ಕೂ ಒಳ್ಳೆಯದಲ್ಲ ಎಂದು ಸಿಎಂ ಯಡಿಯೂರಪ್ಪ ಎಚ್ಚರಿಸಿದರು.

ಇದೆ ವೇಳೆ ಮಾಚೇನಹಳ್ಳಿ ಕೈಗಾರಿಕಾ ವಸಾಹತು ವತಿಯಿಂದ ರಾಮ ಮಂದಿರ ನಿರ್ಮಾಣಕ್ಕೆ 70 ಲಕ್ಷ ರೂ. ಚೆಕ್ ಅನ್ನು ಸಿಎಂ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಲಾಯಿತು.

English summary
Former chief minister Siddaramaiah's statement that he will not donate for the construction of the Ram Mandir has been reacted by CM Yediyurappa in Shivamogga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X