ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ: ಈಶ್ವರಪ್ಪ
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ವಾಗ್ದಾಳಿ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ. ಮಂಗಳೂರು ಗಲಭೆಯಲ್ಲಿ ಕಾಂಗ್ರೆಸ್ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಈಶ್ವರಪ್ಪ.
ಶಿವಮೊಗ್ಗ, ಜುಲೈ 8: ಮಂಗಳೂರು ಗಲಾಟೆ ನಿಯಂತ್ರಿಸಲು ರಾಜ್ಯ ಸರ್ಕಾರ ವಿಫಲವಾಗಿದ್ದು, ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಮಂಗಳೂರಿನಲ್ಲಿ ಕೋಮು ಶಕ್ತಿಗಳಿಂದ ಹಲ್ಲೆಗೀಡಾಗಿ, ಶನಿವಾರ ಸಾವನ್ನಪ್ಪಿದ ಶರತ್ ಅವರ ಬಗ್ಗೆ ಸಂತಾಪ ವ್ಯಕ್ತಪಡಿಸಿದರು.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಎರಡು ಕೋಮುಗಳ ವಿಚಾರದಲ್ಲಿ ರಾಜಕಾರಣ ಮಾಡಲಾಗುತ್ತಿದೆ'' ಎಂದು ಆರೋಪಿಸಿದರು.
''ದೇಶ ಭಕ್ತರನ್ನು ಹಿಂಸಿಸಲಾಗುತ್ತಿದೆ. ದೇಶ ಭಕ್ತರನ್ನು ಹೆದರಿಸಲಾಗುತ್ತಿದೆ. ಬಿಜೆಪಿ, ಆರೆಸ್ಸೆಸ್ ಮುಖಂಡರ ಹತ್ಯೆಗಳು ನಡೆಯುತ್ತಿವೆ ಗಲಾಟೆಗಳಿಂದ ದೇಶಭಕ್ತರು ಲಾಭ ಮಾಡಿಕೊಳ್ಳುತ್ತಿದ್ದಾರೆ. ಅಂಥವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.












Click it and Unblock the Notifications