Shivamogga: ದೇಶದಲ್ಲಿ ಕಾಂಗ್ರೆಸ್‌ನ ಸ್ಪರ್ಧೆಯ ಕ್ಷೇತ್ರ, ಟಾರ್ಗೆಟ್ ಕ್ಷೇತ್ರಗಳ ಲೆಕ್ಕ ಕೊಟ್ಟ ಮಾಜಿ ಸಿಎಂ

ಶಿವಮೊಗ್ಗ, ಏಪ್ರಿಲ್ 18: ಕಾಂಗ್ರೆಸ್ ನವರು ಹೊಸ ಗ್ಯಾರೆಂಟಿ ಗಳನ್ನು ಘೊಷಣೆ ಮಾಡಿದ್ದಾರೆ. ಪ್ರತಿ ಮನೆ ಮಹಿಳೆಯರಿಗೆ ಒಂದು ಲಕ್ಷ ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಲೋಕಸಭೆಯಲ್ಲಿ 543 ಸ್ಥಾನಗಳಿವೆ. ಕಾಂಗ್ರೆಸ್ ಯಾವ ಕಾರಣಕ್ಕೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಕಾಂಗ್ರೆಸ್ ನ ಸ್ಪರ್ಧೆಯ ಕ್ಷೇತ್ರಗಳು ಮತ್ತು ಟಾರ್ಗೆಟ್ ಕುರಿತು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ಬಿ.ವೈ ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ತಂದೆಗೆ ತಕ್ಕ ಮಗ, ಜಗ ಮೆಚ್ಚಿದ ಮಗ ಹೊಗಳಿದರು.

Congress is Defeated Party That don t Win in Lok Sabha Election 2024 Says Basavaraj bommai

ಲೋಕಸಭೆಗೆ ಸ್ಪರ್ಧೆ ಮಾಡಿದ್ದೆ 230 ಸ್ಥಾನದಲ್ಲಿ

ಕಾಂಗ್ರೆಸ್ ನವರು ಹೊಸ ಗ್ಯಾರೆಂಟಿ ಗಳನ್ನು ಘೊಷಣೆ ಮಾಡಿದ್ದಾರೆ. ಸಂಸತ್ತಿನಲ್ಲಿ ಸ್ಪಷ್ಟ ಬಹುಮತ ಪಡೆಯಲು 272 ಸ್ಥಾನಗಳು ಬೇಕು. ಆದರೆ ಕಾಂಗ್ರೆಸ್ ಲೋಕಸಭೆಗೆ ಸ್ಪರ್ಧೆ ಮಾಡಿರುವುದೇ 230 ಸ್ಥಾನಗಳು. ಅಂದ ಮೇಲೆ ಅವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ಪಕ್ಷ ಫೆಲ್ ಆಗುವ ಬೇಕಾಬಿಟ್ಟಿ ಪಕ್ಷ

ಪರೀಕ್ಷೆಯಲ್ಲಿ ಪಾಸ್ ಆಗಲು ಕನಿಷ್ಠ 35 ಅಂಕಗಳು ಬೇಕು. ಆದರೆ, ಇವರು ಪರೀಕ್ಷೆ ಬರೆದಿರುವುದೇ 20 ಅಂಕಗಳಿಗೆ ಇವರು ಪಾಸ್ ಆಗಲು ಹೇಗೆ ಸಾಧ್ಯ ? ಕಾಂಗ್ರೆಸ್ ಪಕ್ಷ ಫೆಲ್ ಆಗುವ ಬೇಕಾಬಿಟ್ಟಿ ಪಕ್ಷ ಎಂದು ಅವರು ವಾಗ್ದಾಳಿ ನಡೆಸಿದರು.

Congress is Defeated Party That don t Win in Lok Sabha Election 2024 Says Basavaraj bommai

ಪ್ರಧಾನಿ ನರೇಂದ್ರ ಮೋದಿಯವರು ಕೊವಿಡ್ ಸಂದರ್ಭದಲ್ಲಿ ದೇಶದ ನೂರಾ ಮೂವತ್ತು ಕೋಟಿ ಜನರಿಗೆ ಮೂರು ಬಾರಿ ಲಸಿಕೆ ‌ಕೊಡಿಸಿ ಎಲ್ಲರ ಜೀವ ಉಳಿಸಿದ್ದಾರೆ. ಕೊವಿಡ್ ಸಂದರ್ಭದಲ್ಲಿ 10 ಕೆಜಿ ಅಕ್ಕಿ ಕೊಟ್ಟಿದ್ದಾರೆ. ಈಗಲೂ ಐದು ಕೆಜಿ ಅಕ್ಕಿಯನ್ನು ಬಿಜೆಪಿ ಕೇಂದ್ರ ಸರ್ಕಾರ ಉಚಿತವಾಗಿ ನೀಡುತ್ತಿದೆ.

ಕೇಂದ್ರ ಸೇವೆ ಗಮನಿಸಿ ಮತ ಹಾಕಲು ಮನವಿ

ದೇಶದಲ್ಲಿ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಪ್ರತಿಯೊಬ್ಬರ ಮನೆಗಳಿಗೂ ಗಂಗೆ ರೂಪದಲ್ಲಿ ನಳದ ನೀರು ಕೊಡುತ್ತಿದ್ದಾರೆ. ಎಲ್ಲರಿಗೂ ಅನ್ನ, ನೀರು, ಲಸಿಕೆ ಕೊಟ್ಟು ಜೀವ ಉಳಿಸಿದ ನರೇಂದ್ರ ಮೋದಿಯವರ ಋಣ ತೀರಿಸಬೇಕು. ಎಲ್ಲರೂ ಕಮಲದ ಗುರುತಿಗೆ ಮತ ಹಾಕಿ, ಅವರ ಋಣ ತೀರಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾಲ್ಕೂವರೆ ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು. ಈ ಬಾರಿ ರಾಘವೇಂದ್ರ ಅವರನ್ನು ನಾಲ್ಕೂವರೆ ಲಕ್ಷಕ್ಕಿಂತಲೂ ಅಧಿಕ ಮತಗಳಿಂದ ಆರಿಸಿ ಕಳುಹಿಸಬೇಕು ಎಂದರು.

ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಎಚ್. ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಸಿ.ಟಿ.ರವಿ, ಬೈರತಿ ಬಸವರಾಜ, ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಶಾಸಕರಾದ ಶಾರದಾ ಪೂರ್ಯಾ ನಾಯಕ್ ಹಾಗೂ ಮತ್ತಿತರ ನಾಯಕರು ಪಾಲ್ಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+