ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿಕಾರಿಪುರದಲ್ಲಿ ಕಾಂಗ್ರೆಸ್, ಜೆಡಿಎಸ್ ದೋಸ್ತಿ?

|
Google Oneindia Kannada News

ಶಿವಮೊಗ್ಗ, ಆ.13 : ಶಿಕಾರಿಪುರದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ ಉಪ ಚುನಾವಣೆಯಲ್ಲಿ ಸೋಲಿನ ರುಚಿ ತೋರಿಸಲು ಕಾಂಗ್ರೆಸ್ ಜೆಡಿಎಸ್ ಸಹಕಾರ ಪಡೆಯಲು ಮುಂದಾಗಿದೆ. ಜೆಡಿಎಸ್ ನಾಯಕರರೊಂದಿಗೆ ಸಿಎಂ ಸಿದ್ದರಾಮಯ್ಯ ರಹಸ್ಯ ಚರ್ಚೆ ನಡೆಸಿದ್ದು, ಹಲವಾರು ಕುತೂಹಲಗಳಿಗೆ ಕಾರಣವಾಗಿದೆ.

ಮಂಗಳವಾರ ಶಿಕಾರಿಪುರದಲ್ಲಿ ಚುನಾವಣಾ ಪ್ರಚಾರ ನಡೆಸಿದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ಮಂಜುನಾಥ್ ಭಂಡಾರಿ ಅವರ ನಿವಾಸದಲ್ಲಿ ಶಿಕಾರಿಪುರ ಕ್ಷೇತ್ರದಲ್ಲಿ ಕಳೆದ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿದ್ದ ಎಚ್.ಟಿ.ಬಳಿಗಾರ್ ಜೊತೆ ರಹಸ್ಯ ಮಾತುಕತೆ ನಡೆಸಿದ್ದಾರೆ.

Shikaripura

ಮತ್ತೊಂದು ಕಡೆ ಮುಖ್ಯಮಂತ್ರಿಗಳೊಂದಿಗೆ ಶಿಕಾರಿಪುರಕ್ಕೆ ತೆರಳಿದ್ದ ಸಚಿವ ಎಚ್.ಸಿ.ಮಹದೇವಪ್ಪ ಅವರು ಸೊರಬ ಕ್ಷೇತ್ರದ ಜೆಡಿಎಸ್ ಶಾಸಕ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದು, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಲಬ ನೀಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. [ಡಿಕೆ ಶಿವಕುಮಾರ್, ಸೋಮಶೇಖರ ರೆಡ್ಡಿ ಭೇಟಿ!]

ಜೆಡಿಎಸ್ ಉಪ ಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲ್ಲ. ಕಳೆದ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಚ್.ಟಿ.ಬಳಿಗಾರ್ 15 ಸಾವಿರ ಮತಗಳನ್ನು ಪಡೆದಿದ್ದರು. ಈ ಹಿನ್ನಲೆಯಲ್ಲಿ ಅವರನ್ನು ಭೇಟಿ ಮಾಡಿರುವ ಸಿದ್ದರಾಮಯ್ಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಕೋರಿದ್ದಾರೆ.

ಬಿಜೆಪಿ-ಕಾಂಗ್ರೆಸ್ ಎದುರಾಳಿ : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತ್ತು ಕಾಂಗ್ರೆಸ್ ಅಭ್ಯರ್ಥಿ ಶಾಂತವೀರಪ್ಪ ಗೌಡ ನಡುವೆ ನೇರ ಸ್ಪರ್ಧೆ ಇದೆ. ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿದಿಲ್ಲ. ಆದರೆ, ಜೆಡಿಎಸ್ ನಾಯಕ ಗೂಳಿಹಟ್ಟಿ ಶೇಖರ್ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. ಆ.21ರಂದು ಮತದಾನ ನಡೆಯಲಿದೆ.

ಮಂಗಳವಾರ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಶಿಕಾರಿಪುರದಲ್ಲಿ ಪ್ರಚಾರ ನಡೆಸಿದ್ದು, ಬುಧವಾರ ಸಹ ತಮ್ಮ ಪ್ರಚಾರ ಕಾರ್ಯವನ್ನು ಮುಂದುವರೆಸಲಿದ್ದಾರೆ. ಶಿಕಾರಿಪುರದಲ್ಲಿ ಗೆಲುವು ಸಾಧಿಸಬೇಕು ಎಂದು ಹಟ ತೊಟ್ಟಿರುವ ಕಾಂಗ್ರೆಸ್ ನಾಯಕರು ಜೆಡಿಎಸ್ ಸಹಕಾರ ಕೋರಿದ್ದಾರೆ.

English summary
JDS and Congress wanted the alliance in Shikaripura constituency to win By election against BJP candidate B.Y.Raghavendra. CM Siddaramaiah meet JDS leaders in Shimoga on Tuesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X