• search
 • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಮೊಗ್ಗ: ಕಾಂಗ್ರೆಸ್ ಮುಖಂಡ ಆರ್.ಪ್ರಸನ್ನ ಕುಮಾರ್ ಗೆ ಕೊರೊನಾ ಸೋಂಕು ದೃಢ!

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ಆಗಸ್ಟ್ 03: ದೇಶದಾದ್ಯಂತ ಕೊರೊನಾ ಸೋಂಕು ವ್ಯಾಪಿಸಿದ್ದು, ಇದೀಗ ರಾಜಕಾರಣಿಗಳು, ಜನಪ್ರತಿನಿಧಿಗಳನ್ನು ಕಾಡುತ್ತಿದೆ. ನಿನ್ನೆ ದೇಶದ ಗೃಹ ಮಂತ್ರಿ ಅಮಿತ್ ಷಾ ಹಾಗೂ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರಿಗೆ ಮತ್ತು ಅವರ ಪುತ್ರಿಯೊಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇಂದು ಶಿವಮೊಗ್ಗದ ಶಾಸಕರೊಬ್ಬರಲ್ಲಿ ಸೋಂಕು ಪತ್ತೆಯಾಗಿದೆ.

   SpaceX and NASA completes space mission successfully | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಶಿವಮೊಗ್ಗ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್ ನಲ್ಲಿರುವುದಾಗಿ ಸ್ವತಃ ಅವರೇ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

   ಯಡಿಯೂರಪ್ಪ ಆರಾಧ್ಯ ದೈವ ಹುಚ್ಚರಾಯಸ್ವಾಮಿಗೆ ಸಂಸದರಿಂದ ಪ್ರಾರ್ಥನೆ

   ಶಾಸಕ ಪ್ರಸನ್ನ ಕುಮಾರ್ ಅವರು ಬೆಂಗಳೂರಿಗೆ ಜು.27 ರಂದು ಹೋಗಿ ಬಂದ ಹಿನ್ನೆಲೆಯಲ್ಲಿ ಕೊರೊನಾ ಪರೀಕ್ಷೆ ಮಾಡಿಸಿದ್ದರು. ಇಂದು ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ.

   ನನಗೆ ಯಾವುದೇ ರೋಗ ಲಕ್ಷಣವಿಲ್ಲದಿದ್ದರು ಕೊರೊನಾ ವರದಿ ಪಾಸಿಟಿವ್ ಎಂದು ಬಂದಿದೆ. ಈ ಸಂಬಂಧ ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್ ಆಗಿದ್ದೇನೆ ಎಂದು ಆರ್.ಪ್ರಸನ್ನ ಕುಮಾರ್ ತಿಳಿಸಿದ್ದಾರೆ.

   ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಕೊರೊನಾವೈರಸ್ ಸೋಂಕು ದೃಢ

   ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಸಹ ಕ್ವಾರಂಟೈನ್ ನಲ್ಲಿದ್ದು, ಪರೀಕ್ಷೆಗೆ ಒಳಪಡುವಂತೆ ವಿಧಾನ ಪರಿಷತ್ ಸದಸ್ಯ ಆರ್.ಪ್ರಸನ್ನ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.

   English summary
   Shivamogga Congress Leader R. Prasanna Kumar said I had been diagnosed with coronavirus and was in a home quarantine on the advice of doctors.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X