ಶಿವಮೊಗ್ಗದಲ್ಲಿ ನೆಲಕಚ್ಚಿರುವ ಕಾಂಗ್ರೆಸ್ ಗೆ ಕಾಯಕಲ್ಪ ನೀಡಲು ಮುಂದಾದ ಜಿಲ್ಲಾ ಕಾಂಗ್ರೆಸ್

ಶಿವಮೊಗ್ಗ, ಮಾರ್ಚ್ 12: ಒಂದು ಕಾಲದಲ್ಲಿ ಶಿವಮೊಗ್ಗ ಜಿಲ್ಲೆ ಕಾಂಗ್ರೆಸ್ ನ ಭದ್ರಕೋಟೆಯಾಗಿತ್ತು. ಆದರೆ ಕಾಲಾನಂತರದಲ್ಲಿ ಯಡಿಯೂರಪ್ಪ ಹಾಗೂ ಬಿಜೆಪಿಯ ಭದ್ರಕೋಟೆಯಾಗಿ ಪರಿವರ್ತನೆಯಾಗಿದೆ.

ಇದೇ ವೇಳೆಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ನೆಲಕಚ್ಚಿಹೋಗಿದೆ. ವಿಧಾನಸಭಾ ಚುನಾವಣೆಯಲ್ಲಿ ಎಂಟು ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರವನ್ನು ಗೆಲ್ಲಲೂ ಹರಸಾಹಸಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇದನ್ನು ಮನಗಂಡಿರುವ ಜಿಲ್ಲಾ ಕಾಂಗ್ರೆಸ್ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಪುನಶ್ಚೇತನ ನೀಡಲು ಮುಂದಾಗಿದೆ.

ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ಒಬ್ಬೊಬ್ಬ ಉಸ್ತುವಾರಿಯನ್ನು ನೇಮಿಸಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಲು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ಮುಂದಾಗಿದ್ದಾರೆ.

Shivamogga District Congress Plan To Revive Congress Party

ಭದ್ರಾವತಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನ ಮಾಜಿ ಜಿಲ್ಲಾಧ್ಯಕ್ಷ ಇಸ್ಮಾಯಿಲ್ ಖಾನ್, ಸಾಗರ ಕ್ಷೇತ್ರಕ್ಕೆ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕಲಗೋಡು ರತ್ನಾಕರ್, ತೀರ್ಥಹಳ್ಳಿ ಕ್ಷೇತ್ರಕ್ಕೆ ವಿಧಾನಪರಿಷತ್ ಮಾಜಿಸದಸ್ಯೆ ಪ್ರಫುಲ್ಲಾ ಮಧುಕರ್, ಶಿವಮೊಗ್ಗ ನಗರ ಕ್ಷೇತ್ರಕ್ಕೆ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಬಲ್ಕಿಷ್ ಬಾನು, ಶಿಕಾರಿಪುರ ಕ್ಷೇತ್ರಕ್ಕೆ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ತೀ.ನಾ.ಶ್ರೀನಿವಾಸ್, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುಕ್ತಿಯಾರ್ ಅಹಮದ್, ಸೊರಬ ಕ್ಷೇತ್ರಕ್ಕೆ ವಿಧಾನಪರಿಷತ್ ಮಾಜಿ ಸದಸ್ಯ ಶಾಂತವೀರಪ್ಪ ಗೌಡ ಅವರನ್ನು ನೇಮಿಸಿದ್ದಾರೆ. ಇನ್ನಾದರೂ ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ತಲೆ ಎತ್ತುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+