ಪ್ರಧಾನಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಶಿವಮೊಗ್ಗ ಕಾಂಗ್ರೆಸ್ ವಕ್ತಾರನ ಬಂಧನ

ಶಿವಮೊಗ್ಗ, ಆಗಸ್ಟ್ 29: ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ವಕ್ತಾರ ದೀಪಕ್ ಸಿಂಗ್ ಅವರನ್ನು ವಿನೋಬನಗರ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ.

ನಿನ್ನೆ ಈ ಕುರಿತು ದೀಪಕ್ ಸಿಂಗ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ನಗರ ಬಿಜೆಪಿ ಮುಖಂಡರು ಆಗ್ರಹಿಸಿ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದರು.

Shivamogga: Congress Spokesperson Deepak Singh Arrested

ಕೋವಿಡ್ 19ರ ವಿರುದ್ಧ ಹೋರಾಡುತ್ತಿರುವ ಪ್ರಧಾನಿಯವರ ವಿರುದ್ಧ ಕಾಂಗ್ರೆಸ್ ಜಿಲ್ಲಾ ವಕ್ತಾರ, ಮಾಜಿ ಕಾರ್ಪೊರೇಟರ್ ದೀಪಕ್ ಸಿಂಗ್ ಎನ್ನುವವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿ ನಿಂದಿಸಿದ್ದಾರೆ. ಪ್ರಧಾನಿವರಿಗೆ ಅವಮಾನ ಮಾಡುವ ಉದ್ದೇಶದಿಂದ ಈ ಪೋಸ್ಟ್‌ ಹಾಕಿದ್ದು, ಇಂತಹ ಪೋಸ್ಟ್‌ ನಿಂದ ಸಮಾಜದಲ್ಲಿ ಶಾಂತಿ ಕದಡುವ ಸಂಭವವಿದೆ. ಹೀಗಾಗಿ ದೀಪಕ್ ಸಿಂಗ್ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಇದರನ್ವಯ ದೀಪಕ್ ಸಿಂಗ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+