ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲಿ ಭಾರಿ ಗೋಲ್ಮಾಲ್; ರಸ್ತೆ ತಡೆ

ಶಿವಮೊಗ್ಗ, ಫೆಬ್ರವರಿ 2: ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಡೆಯುತ್ತಿರುವ ಕಳಪೆ ಕಾಮಗಾರಿ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು.

ಶಿವಮೊಗ್ಗ ನಗರದ ಲಕ್ಷ್ಮೀ ಟಾಕೀಸ್ ಮುಂಭಾಗ ವಿನೋಬ ನಗರದ ನೂರು ಅಡಿ ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಲಾಯಿತು. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ದೊಡ್ಡ ಪ್ರಮಾಣದ ಅವ್ಯವಹಾರ ನಡೆಯುತ್ತಿದೆ. ಕಳಪೆ ಕಾಮಗಾರಿಗಳು ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶಿವಮೊಗ್ಗ ನಗರದ ವಿವಿಧೆಡೆ, ಕಾಮಗಾರಿ ನಡೆಸಿದ ಕಡೆಯಲ್ಲೇ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ನಡೆಸಲಾಗುತ್ತಿದೆ. ನೂರಾರು ಕೋಟಿ ರೂ. ತೆರಿಗೆ ಹಣ ಪೋಲು ಮಾಡಲಾಗುತ್ತಿದೆ ಎಂದು ಕಾಂಗ್ರೆಸಿಗರು ಆರೋಪಿಸಿದರು.

Congress To Protest Against Golmal In Shivamogga Smart City Project

'ನೂರಾರು ಕೋಟಿ ರೂ. ಅವ್ಯವಹಾರದಲ್ಲಿ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದಾರೆ. ಉನ್ನತ ಮಟ್ಟದ ತನಿಖೆ ನಡೆಸಬೇಕು' ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಆಗ್ರಹಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+