ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ; ಕೋವಿಡ್ ತಪಾಸಣಾ ಫಲಿತಾಂಶ ವೆಬ್ ಸೈಟ್ ನಲ್ಲಿ...

By Lekhaka
|
Google Oneindia Kannada News

ಶಿವಮೊಗ್ಗ, ನವೆಂಬರ್ 19: ಸರ್ಕಾರದ ಮಾರ್ಗಸೂಚಿಯ ಪ್ರಕಾರ ಜಿಲ್ಲೆಯಲ್ಲಿ ಕಾಲೇಜುಗಳನ್ನು ಆರಂಭಿಸಲಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಕೊರೊನಾ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಇದೀಗ ಇವರಿಗೆ ನಡೆಸಲಾದ ಕೊರೊನಾ ಪರೀಕ್ಷೆಯ ಫಲಿತಾಂಶವನ್ನು ನೇರವಾಗಿ ವೆಬ್ ಸೈಟ್ ನಲ್ಲಿ ನೋಡಿ ತಿಳಿಯಬಹುದಾಗಿದೆ.

ಕಾಲೇಜು ಅಥವಾ ಹಾಸ್ಟೆಲ್ ಪ್ರವೇಶಿಸಲು 72 ಗಂಟೆ ಮುನ್ನ ನಡೆಸಲಾದ ಆರ್‍ಟಿಪಿಸಿಆರ್ ತಪಾಸಣಾ ವರದಿಯನ್ನು ಕಡ್ಡಾಯವಾಗಿ ನೀಡಬೇಕಾಗಿದೆ. ಹೀಗಾಗಿ ತಪಾಸಣಾ ವರದಿಯನ್ನು ಐಸಿಎಂಆರ್ ಪೋರ್ಟಲ್ ‍ನಲ್ಲಿ ನೋಂದಣಿ ಮಾಡಲಾಗಿರುವ ಮೊಬೈಲ್ ಸಂಖ್ಯೆಗೆ ಎಸ್‍ಎಂಎಸ್ ಮೂಲಕ ಕಳುಹಿಸಲಾಗುತ್ತಿದೆ. ಇದೇ ರೀತಿ ವರದಿಯನ್ನು https://covidwar.karnataka.gov.in/service1 ಲಾಗ್‍ಇನ್ ಆಗುವ ಮೂಲಕ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

 ಹಾಸನ; ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗೆ ಸೂಚನೆ ಹಾಸನ; ವಿದ್ಯಾರ್ಥಿಗಳು, ಉಪನ್ಯಾಸಕರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗೆ ಸೂಚನೆ

ಕೊರೊನಾ ತಪಾಸಣಾ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಆದ್ಯತೆ ಮೇರೆಗೆ ಆರ್‍ಟಿಪಿಸಿಆರ್ ಸ್ಯಾಂಪಲ್ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಪರೀಕ್ಷೆ ಫಲಿತಾಂಶವನ್ನು ತಕ್ಷಣ ಐಸಿಎಂಆರ್ ವೆಬ್ ಸೈಟ್ ಗೆ ಅಪ್ ಲೋಡ್ ಮಾಡಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

Shivamogga: Corona Test Result Will Be Available In Websites

ಶಿವಮೊಗ್ಗದ ಕೊರೊನಾ ವೈರಸ್ ಪ್ರಕರಣ: ನವೆಂಬರ್ 18ರ ವರದಿಯಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ 21265 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 20637 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 281 ಸಕ್ರಿಯ ಪ್ರಕರಣಗಳಿದ್ದು, 347 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಮಾರ್ಗಸೂಚಿ ಪಾಲನೆ: ಎಲ್ಲಾ ಕಾಲೇಜುಗಳಲ್ಲಿ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಿ ತರಗತಿಗಳನ್ನು ನಡೆಸಲು ಸೂಚನೆ ನೀಡಲಾಗಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಮಾಸ್ಕ್, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಎಲ್ಲಾ ಕಾಲೇಜುಗಳಲ್ಲಿ ಒಂದು ಐಸೋಲೇಶನ್ ಕೊಠಡಿ ಸಜ್ಜುಗೊಳಿಸಲಾಗಿದೆ. ಕೋವಿಡ್ ಪರೀಕ್ಷೆ ನಡೆಸಿಕೊಂಡು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸಲು ಆರಂಭಿಸಿದ್ದಾರೆ. ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಯನ್ನು ಸಹ ಮುಂದುವರಿಸಲು ನಿರ್ದೇಶನ ನೀಡಲಾಗಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಪ್ರೊ.ಕೆ.ಸಿ.ವೀರಭದ್ರಯ್ಯ ತಿಳಿಸಿದ್ದಾರೆ.

Recommended Video

ಭಾರತಕ್ಕೇ ಗಡಿಪಾರು ಮಾಡ್ತಾರಾ!! | Oneindia Kannada

English summary
According to the government guidelines, colleges have been started in Shivamogga and corona test is mandatory for students, teachers and non-teaching staff. Now Corona test results will be available in websites informed DC Shivakumar,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X