ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ 2ನೇ ಅಲೆಗೆ ಶಿವಮೊಗ್ಗದಲ್ಲಿ ಮೊದಲ ಬಲಿ; ಸಕ್ರಿಯ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಏಪ್ರಿಲ್ 6: ಕೊರೊನಾ ಸೋಂಕಿನ 2ನೇ ಅಲೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಸಾವಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಕೋವಿಡ್ ಆತಂಕ ಮತ್ತೆ ಶುರುವಾಗಿದೆ.

ಶಿವಮೊಗ್ಗ ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ಕೊರೊನಾಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಕೋವಿಡ್-19ಗೆ ಮೃತಪಟ್ಟವರ ಒಟ್ಟು ಸಂಖ್ಯೆ 350ಕ್ಕೆ ಏರಿಕೆಯಾಗಿದೆ.

ಮೃತರು ಯಾರು? ಎಲ್ಲಿಯವರು?

ಕಡೂರು ಮೂಲದ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿತ್ತು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 62 ವರ್ಷದ ವ್ಯಕ್ತಿಗೆ ಶಿವಮೊಗ್ಗದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

Coronavirus Second Wave In Shivamogga; 1st Death Reported, Rise In Active Cases

ಎಷ್ಟು ಮಂದಿಗೆ ಪಾಸಿಟಿವ್ ಬಂದಿದೆ?

ಶಿವಮೊಗ್ಗ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದ್ದು, ಸೋಮವಾರ 2967 ಮಂದಿಯ ಸ್ಯಾಂಪಲ್ ಸಂಗ್ರಹ ಮಾಡಲಾಗಿದೆ. ಪರೀಕ್ಷೆಗೆ ಒಳಪಡಿಸಿದ ಸ್ಯಾಂಪಲ್‌ಗಳ ಪೈಕಿ 2688 ಮಂದಿಗೆ ನೆಗೆಟಿವ್ ಬಂದಿದೆ. 46 ಮಂದಿಗೆ ಸೋಂಕು ಪಾಸಿಟಿವ್ ಬಂದಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇದರಿಂದ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 297ಕ್ಕೆ ಹೆಚ್ಚಳವಾಗಿದೆ.

ಯಾವ್ಯಾವ ತಾಲೂಕಿನಲ್ಲಿ ಎಷ್ಟು ಸೋಂಕಿತರು?

Recommended Video

#Covid19Update: 24 ಗಂಟೆಗಳಲ್ಲಿ ದೇಶದಲ್ಲಿ 96,982 ಜನರಿಗೆ ಕೊರೊನಾ ಸೋಂಕು ದೃಢ | Oneindia Kannada

ಸೋಂಕಿತರ ಪೈಕಿ ಶಿವಮೊಗ್ಗ ತಾಲ್ಲೂಕಿನಲ್ಲಿ 24 ಮಂದಿ, ಭದ್ರಾವತಿಯಲ್ಲಿ ಮೂರು, ಶಿಕಾರಿಪುರದಲ್ಲಿ ಎರಡು, ತೀರ್ಥಹಳ್ಳಿಯಲ್ಲಿ ಮೂವರು, ಸೊರಬದ ಮೂವರು, ಹೊಸನಗರದ ಎರಡು, ಸಾಗರದಲ್ಲಿ ಎಂಟು, ಹೊರ ಜಿಲ್ಲೆಯ ಒಂದು ಪ್ರಕರಣ ಕಂಡುಬಂದಿದೆ.

English summary
In Shivamogga district was the first die of the 2nd wave of coronavirus infection, causing Covid-19 anxiety in the district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X