ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ವಿದ್ಯಾರ್ಥಿ, ಸಿಬ್ಬಂದಿಗೆ ಕೋವಿಡ್, ಕುವೆಂಪು ವಿವಿಗೆ ರಜೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜನವರಿ 16; ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್ ಬಂದ್ ಮಾಡಲಾಗಿದೆ. ಐದು ದಿನ ತರಗತಿಗಳನ್ನು ನಡೆಸದಿರಲು ವಿಶ್ವವಿದ್ಯಾಲಯದ ಆಡಳಿತ ಮಂಡಳಿ ನಿರ್ಧರಿಸಿದೆ.

ಕುವೆಂಪು ವಿಶ್ವವಿದ್ಯಾಲಯದ ಐವರು ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿತ್ತು. ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ 70 ಮಂದಿಯ ಸ್ಯಾಂಪಲ್ ಸಂಗ್ರಹ ಮಾಡಲಾಗಿತ್ತು. ಈ ಪೈಕಿ 19 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ. ಎಲ್ಲರೂ ಹೋಮ್ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

 ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳಿಂದ ಕುವೆಂಪು ವಿವಿ ನಗರ ಕಚೇರಿ ಮುತ್ತಿಗೆ ಯತ್ನ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳಿಂದ ಕುವೆಂಪು ವಿವಿ ನಗರ ಕಚೇರಿ ಮುತ್ತಿಗೆ ಯತ್ನ

ಇನ್ನು, ಸೋಂಕು ವ್ಯಾಪಕವಾಗಿ ಹರಡದಂತೆ ತಡೆಯಲು ಕುವೆಂಪು ವಿವಿ ಜ್ಞಾನ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ತರಗತಿಗಳನ್ನು ನಡೆಸದಿರಲು ನಿರ್ಧರಿಸಲಾಗಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಶೈಕ್ಷಣಿಕ ವಿಭಾಗದ ಉಪ ಕುಲಸಚಿವರು, ಜನವರಿ 17 ರಿಂದ 21ರವರೆಗೆ ಸ್ನಾತಕೋತ್ತರ ತರಗತಿಗಳಿಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

ಬಳ್ಳಾರಿ; ಕೋವಿಡ್ ತಡೆಗೆ ಕಠಿಣ ನಿಯಮ, 8 ಗಂಟೆಯಿಂದ ರಾತ್ರಿ ಕರ್ಫ್ಯೂಬಳ್ಳಾರಿ; ಕೋವಿಡ್ ತಡೆಗೆ ಕಠಿಣ ನಿಯಮ, 8 ಗಂಟೆಯಿಂದ ರಾತ್ರಿ ಕರ್ಫ್ಯೂ

Covid For Students And Staff Holiday For Kuvempu University

ಐದು ದಿನ ತರಗತಿಗಳಿಗೆ ರಜೆ ಘೋಷಿಸಲಾಗಿದೆ. ಈ ಅವಧಿಯಲ್ಲಿ ಉಪನ್ಯಾಸಕರು ಆನ್ ಲೈನ್ ಮೂಲಕ ತರಗತಿಗಳನ್ನು ನಡೆಸಬಹುದಾಗಿದೆ ಎಂದು ಶೈಕ್ಷಣಿಕ ವಿಭಾಗದ ಉಪ ಕುಲಸಚಿವರ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಕೋವಿಡ್ 3ನೇ ಅಲೆ: ವಯಸ್ಕರಿಗೆ ಹೋಲಿಸಿದರೆ ಮಕ್ಕಳಲ್ಲಿ ಸೋಂಕು ಕಡಿಮೆ ಕೋವಿಡ್ 3ನೇ ಅಲೆ: ವಯಸ್ಕರಿಗೆ ಹೋಲಿಸಿದರೆ ಮಕ್ಕಳಲ್ಲಿ ಸೋಂಕು ಕಡಿಮೆ

Recommended Video

Virat Kohli ನಿರ್ಧಾರದಿಂದ ಆಘಾತಗೊಂಡ Rohit Sharma ಹೇಳಿದ್ದೇನು? | Oneindia Kannada

ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡ ಹಿನ್ನೆಲೆ, ಕುವೆಂಪು ವಿವಿ ಕ್ಯಾಂಪಸ್‌ ಅನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಆಡಳಿತ ಭವನ, ತರಗತಿಗಳು, ಹಾಸ್ಟೆಲ್ ಸೇರಿದಂತೆ ಎಲ್ಲೆಡೆ ಸ್ಯಾನಿಟೈಸ್ ಮಾಡಲಾಗುತ್ತಿದೆ.

English summary
Holiday announced for Kuvempu university after students and staff tested positive for Covid 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X