ಜೋಗ ವೀಕ್ಷಣೆಗೆ ಷರತ್ತು; ಪ್ರವಾಸಿಗರ ಸಂಖ್ಯೆ ಭಾರಿ ಕುಸಿತ!
ಶಿವಮೊಗ್ಗ, ಆಗಸ್ಟ್ 18; ವಿಶ್ವವಿಖ್ಯಾತ ಜೋಗ ಜಲಪಾತ ಮೈದುಂಬಿ ಹರಿಯುತ್ತಿದ್ದರೂ, ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದೆ. ವಾರಾಂತ್ಯದಲ್ಲೂ ಸೀಮಿತ ಪ್ರವಾಸಿಗರಿಗೆ ಮಾತ್ರ ಜಲಧಾರೆ ಕಣ್ತುಂಬಿಕೊಳ್ಳುವ, ಅದರ ಮುಂದೆ ಫೋಟೊ ಕ್ಲಿಕ್ಕಿಸಿಕೊಳ್ಳುವ ಅವಕಾಶ ಸಿಗುತ್ತಿದೆ. ಈ ಬಾರಿಯೂ ಶಿವಮೊಗ್ಗದ ಪ್ರವಾಸೋದ್ಯಮಕ್ಕೆ ಕೋವಿಡ್ ಭಾರೀ ಪೆಟ್ಟು ಕೊಟ್ಟಿದೆ.
ಮಳೆಗಾಲ ಆರಂಭವಾಗುತ್ತಿದ್ದಂತೆ ಜೋಗ ಜಲಾಪಾತ ಮೈದುಂಬಿಕೊಂಡಿದೆ. ರಾಜ, ರಾಣಿ, ರೋರರ್, ರಾಕೆಟ್ ಜಲಪಾತಗಳು ಭೋರ್ಗರೆಯುತ್ತ ಧುಮ್ಮಿಕ್ಕುತ್ತಿವೆ. ಪ್ರತಿ ವರ್ಷ ಜೋಗವನ್ನು ಕಣ್ತುಂಬಿಕೊಳ್ಳಲು ದೂರದ ಊರುಗಳು, ಹೊರ ರಾಜ್ಯ, ವಿದೇಶದಿಂದಲೂ ಪ್ರವಾಸಿಗರು ಬರುತ್ತಾರೆ. ಕೋವಿಡ್ ಮೂರನೇ ಅಲೆಯ ಭೀತಿಯ ಹಿನ್ನೆಲೆ ಜೋಗಕ್ಕೆ ಬರುವವರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿದೆ. ಇದೆ ಕಾರಣಕ್ಕೆ ಬಹುತೇಕ ಪ್ರವಾಸಿಗರಿಗೆ ಜಲಪಾತದ ದರ್ಶನವಾಗದೆ ಹಿಂತಿರುಗುತ್ತಿದ್ದಾರೆ.
ಜೋಗ ಸೇರಿದಂತೆ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಲು ಪ್ರವಾಸಿಗರು ಹಾಗೂ ಸಾರ್ವಜನಿಕರಿಗೆ 72 ಗಂಟೆಗಳ ಒಳಗಾಗಿ ಮಾಡಿಸಿದ ಆರ್‌ಟಿಪಿಸಿಆರ್ ನೆಗೆಟಿವ್ ವರದಿ/ ಆರ್‍ಎಟಿ ನೆಗೆಟಿವ್ ವರದಿ/ ಕೋವಿಡ್ 2ನೇ ಲಸಿಕೆ ಪಡೆದ ಪ್ರಮಾಣ ಪತ್ರ ಹೊಂದಿರುವುದನ್ನು ಕಡ್ಡಾಯಗೊಳಿಸಲಾಗಿದೆ. ಇದರಿಂದಾಗಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ.
ಮಳೆ ಮತ್ತು ಚಳಿಗಾಲದಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭಾರಿ ಸಂಖ್ಯೆಯ ಪ್ರವಾಸಿಗರು ಬರುತ್ತಿದ್ದರು. ಇದರಿಂದ ಜಿಲ್ಲೆಯಲ್ಲಿ ವ್ಯಾಪಾರ, ವಾಹಿವಾಟಿಗೆ ಅನುಕೂಲವಾಗುತಿತ್ತು. ಆದರೆ ಕೋವಿಡ್ ಕಾರಣದಿಂದಾಗಿ ಇವೆಲ್ಲಕ್ಕೂ ಅಡ್ಡಿಯುಂಟಾಗಿದೆ. ಜೋಗ ಜಲಪಾತಕ್ಕೆ ಪ್ರವಾಸಿಗರ ಸಂಖ್ಯೆ ಕುಸಿದಿದ್ದು, ಈ ಭಾಗದ ಹೊಟೇಲ್, ರೆಸಾರ್ಟ್, ಲಾಡ್ಜ್‌ಗಳು ಬಣಗುಡುವಂತಾಗಿದೆ. ಅಲ್ಲದೆ ಸ್ಥಳೀಯರ ವ್ಯಾಪಾರ ವಹಿವಾಟಿಗೂ ಪೆಟ್ಟು ಬಿದ್ದಿದೆ.

ರಿಪೋರ್ಟ್ ಇದ್ದರಷ್ಟೆ ಪ್ರವೇಶ
ಜೋಗಕ್ಕೆ ಬರುವ ಪ್ರವಾಸಿಗರು ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ತರಬೇಕು ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ. ಬಿ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಜಲಪಾತ ವೀಕ್ಷಣೆಗೆ ಬರುವ 72 ಗಂಟೆ ಮೊದಲು ಪರೀಕ್ಷೆ ಮಾಡಿಸಿ, ನೆಗೆಟಿವ್ ರಿಪೋರ್ಟ್ ಬಂದಿರಬೇಕು ಅಥವಾ ಎರಡು ಡೋಸ್ ಲಸಿಕೆ ಪಡೆದಿರಬೇಕು ಎಂಬ ನಿಯಮವಿದೆ. ಇವೆರಡು ಕಂಡೀಷನ್‌ಗಳ ಪೈಕಿ ಯಾವುದಾದರೂ ಒಂದು ಇದ್ದರೆ ಮಾತ್ರ ವಿವ್ ಪಾಯಿಂಟ್‌ನ ಗೇಟಿನೊಳಗೆ ಬಿಡಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಗೇಟ್ ಮುಂದೆ ಗಲಾಟೆ
ಶಿವಮೊಗ್ಗ ಜಿಲ್ಲಾಡಳಿತದ ಆದೇಶವನ್ನು ಕಡ್ಡಾಯವಾಗಿ ಪಾಲನೆ ಮಾಡಲು ಮುಂದಾಗಿರುವುದರಿಂದ, ಅಧಿಕಾರಿಗಳು ಮತ್ತು ಪ್ರವಾಸಿಗರ ನಡುವೆ ಪ್ರತಿದಿನ ಗಲಾಟೆಯಾಗುತ್ತಿದೆ. ಜಲಪಾತದ ವಿವ್ ಪಾಯಿಂಟ್ ಗೇಟ್‌ನ ಮುಂದೆ ನೂರಾರು ಪ್ರವಾಸಿಗರು, ವಾಹನಗಳನ್ನು ತಂದು ನಿಲ್ಲಿಸಿಕೊಂಡು ತಮ್ಮನ್ನು ಒಳಗೆ ಬಿಡುವಂತೆ ಮನವಿ ಮಾಡುತ್ತಿದ್ದಾರೆ. ಇದರಿಂದ ಪ್ರತಿದಿನ, ಅದರಲ್ಲೂ ವಾರಾಂತ್ಯದಲ್ಲಿ ಗಲಾಟೆ ಸಾಮಾನ್ಯವಾಗಿದೆ.

ವೀಕೆಂಡ್’ನಲ್ಲಿ ಪ್ರವಾಸಿಗರ ಸಂಖ್ಯೆ ಕುಸಿತ
ಶನಿವಾರ ಮತ್ತು ಭಾನುವಾರ ವೀಕೆಂಡ್ ಕಾರಣಕ್ಕೆ 10 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಬರುತ್ತಿದ್ದರು. ಆದರೆ ಈ ನಿಯಮ ಜಾರಿಗೆ ಬರುತ್ತಿದ್ದಂತೆ ಪ್ರವಾಸಿಗರ ಸಂಖ್ಯೆಯಲ್ಲಿ ಭಾರೀ ಕುಸಿತ ಕಂಡಿದೆ. ಕಳೆದ ಭಾನುವಾರ 1800 ಪ್ರವಾಸಿಗರು ಮಾತ್ರ ಜೋಗ ಜಲಪಾತ ವೀಕ್ಷಣೆ ಮಾಡಿದ್ದಾರೆ. ಜೋಗ ಅಭಿವೃದ್ಧಿ ಪ್ರಾಧಿಕಾರಕ್ಕೆ ಕೇವಲ 35 ಸಾವಿರ ರೂ. ಆದಾಯ ಬಂದಿದೆ. ಕೋವಿಡ್ ಭೀತಿ ಮತ್ತು ರಿಪೋರ್ಟ್ ಕಡ್ಡಾಯಗೊಳಿಸಿರುವುದರಿಂದ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಯಾಗಿದೆ.

ಪ್ರಭಾವ ಇದ್ದವರಿಗೆ ಪ್ರವೇಶ ಸುಲಭ
ಒಂದು ಕಡೆ ಕೋವಿಡ್ ನಿಯಂತ್ರಣಕ್ಕೆ ಜಿಲ್ಲಾಡಳಿತ ಬಿಗಿ ಕ್ರಮ ಕೈಗೊಂಡಿದೆ. ಆದರೆ ಜೋಗ ಜಲಪಾತದ ವಿವ್ ಪಾಯಿಂಟ್ ಗೇಟಿನ ಬಳಿ ಬೇರೆಯದ್ದೇ ನಡೆಯುತ್ತಿದೆ ಎಂಬ ಆಪಾದನೆಯಿದೆ. ಗೇಟಿನೊಳಗೆ ಪ್ರವೇಶಿಸುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಬೇಕು. ಆದರೆ ಗೇಟಿನೊಳಗೆ ಕಾಲಿಡುತ್ತಿದ್ದಂತೆ ಜನರು ಕೋವಿಡ್ ನಿಯಮಗಳನ್ನು ಮೀರಿ ಗುಂಪುಗೂಡುತ್ತಿದ್ದಾರೆ. ಫೋಟೊ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಇನ್ನು, ಪ್ರಭಾವ ಇದ್ದವರಿಗೆ ಕೋವಿಡ್ ರಿಪೋರ್ಟು, ಎರಡು ಡೋಸ್ ಲಸಿಕೆ ಎಂಬ ನಿಬಂಧನೆಯೇ ಇಲ್ಲ. ನೇರವಾಗಿ ಗೇಟಿನೊಳಗೆ ಬಿಡಲಾಗುತ್ತಿದೆ ಎಂಬ ಗಂಭೀರ ಆರೋಪವಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications