ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿಎಂಗೆ ಅಭಿನಂದನೆ ಸಲ್ಲಿಸಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಮಾರ್ಚ್ 09: ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಸರ್ಕಾರಿ ನೌಕರರಿಗೆ ಪ್ರಮುಖ ಹಾಗೂ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ, ರಾಜ್ಯ ಸರ್ಕಾರದ ಎಲ್ಲಾ ಸಚಿವರಿಗೆ ಹಾಗೂ ಉನ್ನತ ಅಧಿಕಾರಿಗಳಿಗೆ ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅಭಿನಂದನೆ ತಿಳಿಸಿದರು.

ಶಿವಮೊಗ್ಗ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗದು ರಹಿತ ಚಿಕಿತ್ಸೆಗೆ, ಶಿಕ್ಷಕರಿಗೆ ಶಿಕ್ಷಕರ ಮಿತ್ರ ಆಪ್ ಅಭಿವೃದ್ದಿ, ಶಿಕ್ಷಣ ಇಲಾಖೆ, ಪೊಲೀಸ್ ಮತ್ತು ಆರೋಗ್ಯ ಇಲಾಖೆಯ ನೌಕರರಿಗೆ ಸಾಂದರ್ಭಿಕ ರಜೆ, ಶವ ಸಂಸ್ಕಾರ ವೆಚ್ಚ ಹೆಚ್ಚಳ, ಅನಾಮಧೇಯ ಪತ್ರಗಳಿಗೆ ಕಡಿವಾಣ, ಜಿಲ್ಲಾ ಮಟ್ಟದ ಜಂಟಿ ಸಮಾಲೋಚನ ಸಮಿತಿ ರಚನೆಯಂತಹ ನಿರ್ಧಾರಗಳಿಗೆ ಶ್ಲಾಘನೆ ವ್ಯಕ್ತಪಡಿಸಿದರು.

ಬೆಂಗಳೂರಿಗೆ ಶರಾವತಿ ನೀರು; ಮತ್ತೆ ಚರ್ಚೆ ಆರಂಭಬೆಂಗಳೂರಿಗೆ ಶರಾವತಿ ನೀರು; ಮತ್ತೆ ಚರ್ಚೆ ಆರಂಭ

ಜಿಲ್ಲಾ ಮತ್ತು ರಾಜ್ಯಮಟ್ಟದ ಕ್ರೀಡಾಕೂಟಗಳಿಗೆ ಸರ್ಕಾರದಿಂದ ನೀಡಲಾಗುತ್ತಿದ್ದ ಅನುದಾನವನ್ನು 50 ಲಕ್ಷದಿಂದ 1.50 ಕೋಟಿಗೆ ಹೆಚ್ಚಳ, ದೂರದ ಸ್ಥಳಗಳಿಂದ ಬರುವ ಸರ್ಕಾರಿ ನೌಕರರು ತಂಗಲು ಅನುಕೂಲವಾಗುವಂತೆ ಕೊಠಡಿ ಹಾಗೂ ಸಂಘದ ಕಚೇರಿಯನ್ನು ಸುಸಜ್ಜಿತಗೊಳಿಸಲು 86 ಕೋಟಿ ರುಪಾಯಿಗಳ ಅನುದಾನವನ್ನು ಮಂಜೂರು ಮಾಡಲಾಗಿದೆ ಎಂದರು.

CS Shadakshari Congratulate To CM For Fulfill Demands In State Budget

ಕೆಜಿಐಡಿ ಕಚೇರಿಗಳ ಗಣಕೀಕರಣ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಅವಧಿ ವಿಸ್ತರಣೆ, ಲೋಕಾಸೇವಾ ಆಯೋಗದ ಇಲಾಖಾ ಪರೀಕ್ಷೆ ಪುನರಾರಂಭ, ಶಿಕ್ಷಕರ ವರ್ಗಾವಣೆ ಕಾಯ್ದೆಗೆ ತಿದ್ದುಪಡಿ, ಎನ್ ಪಿಎಸ್ ರದ್ಧತಿಗೆ ಆಗ್ರಹ, ಲೋಕಾಯುಕ್ತರಿಂದ ಪ್ರಜಾಸ್ನೇಹಿ ಆಡಳಿತ ಕಾರ್ಯಗಾರ, ವಿಭಾಗೀಯ ಸಮ್ಮೇಳನ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ, ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕೊಟ್ಟಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ಬಜೆಟ್ 2020: ಶೈಕ್ಷಣಿಕ ಕ್ಷೇತ್ರಕ್ಕೆ ಬಿಎಸ್‌ವೈ ಕೊಡುಗೆ ಏನು?ಕರ್ನಾಟಕ ಬಜೆಟ್ 2020: ಶೈಕ್ಷಣಿಕ ಕ್ಷೇತ್ರಕ್ಕೆ ಬಿಎಸ್‌ವೈ ಕೊಡುಗೆ ಏನು?

371 ಜೆ ಅಡಿ ಖಾಲಿ ಇರುವ ಹುದ್ದೆಗಳಿಗೆ ಪದೋನ್ನತಿಗಾಗಿ ಸಭೆ, ಮೊದಲಾದ ಬೇಡಿಕೆಗಳನ್ನು ಸರ್ಕಾರ ಮೊನ್ನೆ ಮಾ.5 ರಂದು ಮಂಡಿಸಿದ ಬಜೆಟ್ ನಲ್ಲಿ ಅನುಮೋದನೆ ದೊರೆತಿರುವುದಕ್ಕೆ ರಾಜ್ಯ ನೌಕರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅಭಿನಂದಿಸಿದರು.

English summary
President of the State Employees Union CS Shadakshari congratulated to the Chief Minister BS Yediyurappa, all the ministers and top officials of the state government For Responding Demands.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X