ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವರುಣನ ಆರ್ಭಟ: ಶಿವಮೊಗ್ಗ ಜಿಲ್ಲೆಯ ಜಲಾಶಯಗಳ ನೀರಿನ ಮಟ್ಟ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜುಲೈ 24: ಶಿವಮೊಗ್ಗ ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ನದಿಗಳೆಲ್ಲವೂ ಉಕ್ಕಿ ಹರಿಯುತ್ತಿವೆ.

Recommended Video

ಜೋಗ ಜಲಪಾತವನ್ನು ಈ ಸಮಯದಲ್ಲಿ ನೋಡಲು ಎರಡು ಕಣ್ಣು ಸಾಲದು | Oneindia Kannada

ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ ಡ್ಯಾಂ ನೀರಿನ ಮಟ್ಟ ಮತ್ತೆ ಮೂರೂವರೆ ಅಡಿ ಹೆಚ್ಚಳವಾಗಿದ್ದು, ತುಂಗಾ ಜಲಾಶಯದ ಹೊರಹರಿವು ಸ್ವಲ್ಪ ಕಡಿಮೆಯಾಗಿದೆ.

ಹಳೆ ಶಿವಮೊಗ್ಗಕ್ಕೆ ನುಗ್ಗಿತು ತುಂಗಾ ನದಿ ನೀರು, ಎಲ್ಲೆಲ್ಲಿ ಹಾನಿಯಾಗಿದೆ?ಹಳೆ ಶಿವಮೊಗ್ಗಕ್ಕೆ ನುಗ್ಗಿತು ತುಂಗಾ ನದಿ ನೀರು, ಎಲ್ಲೆಲ್ಲಿ ಹಾನಿಯಾಗಿದೆ?

ಜೋರು ಮಳೆಯಿಂದಾಗಿ ಶಿವಮೊಗ್ಗ ಜಿಲ್ಲೆಯ ಮೂರು ಪ್ರಮುಖ ಜಲಾಶಯಗಳ ಒಳ ಹರಿವು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಈಗಾಗಲೇ ಭರ್ತಿಯಾಗಿರುವುದರಿಂದ ತುಂಗಾ ಜಲಾಶಯದ ಒಳ ಹರಿವಿನ ಪ್ರಮಾಣದಷ್ಟೆ ನೀರನ್ನು ಹೊರಗೆ ಹರಿಸಲಾಗುತ್ತಿದೆ.

Dam Water Levels Increased In Shivamogga District During Heavy Rain

ಯಾವ "ಡ್ಯಾಂ'ಗೆ ಎಷ್ಟು ಒಳಹರಿವು?

ಶಿವಮೊಗ್ಗ ಜಿಲ್ಲೆಯ ಲಿಂಗನಮಕ್ಕಿ ಜಲಾಶಯಕ್ಕೆ 1,03,117 ಕ್ಯುಸೆಕ್ ಒಳ ಹರಿವು ಇದ್ದು, ಶುಕ್ರವಾರ ಭಾರೀ ಪ್ರಮಾಣದ ನೀರು ಹರಿದು ಬಂದಿರುವುದರಿಂದ ಜಲಾಶಯದ ನೀರಿನ ಮಟ್ಟ 1802.60 ಕ್ಯುಸೆಕ್‌ಗೆ ಏರಿಕೆಯಾಗಿದೆ. ಒಂದೇ ದಿನದಲ್ಲಿ 3.45 ಅಡಿಯಷ್ಟು ನೀರು ಬಂದಿದೆ.

ಭದ್ರಾ ಜಲಾಶಯಕ್ಕೂ ಒಳ ಹರಿವು ಹೆಚ್ಚಳವಾಗಿದ್ದು, 50,195 ಕ್ಯುಸೆಕ್ ಒಳ ಹರಿವು ಇದೆ. ಇದರಿಂದ ಭದ್ರಾ ಜಲಾಶಯದ ನೀರಿನ ಮಟ್ಟ 175 ಅಡಿಗೆ ಹೆಚ್ಚಳವಾಗಿದೆ.

Dam Water Levels Increased In Shivamogga District During Heavy Rain

ಇನ್ನು, ಗಾಜನೂರಿನ ತುಂಗಾ ಜಲಾಶಯದ ಒಳ ಹರಿವು ಪ್ರಮಾಣ ಸ್ವಲ್ಪ ತಗ್ಗಿದ್ದು, 78,832 ಕ್ಯುಸೆಕ್ ಒಳಹರಿವು ಇದೆ. ಅಷ್ಟೇ ಪ್ರಮಾಣದ ನೀರನ್ನು ಹೊರಗೆ ಹರಿಸಲಾಗುತ್ತಿದೆ. ಹಿನ್ನೀರು ಭಾಗದಲ್ಲಿ ಮಳೆ ಬೀಳುವ ಆಧಾರದ ಮೇಲೆ ಹೊರಹರಿವು ಏರಿಕೆ ಅಥವಾ ಇಳಿಕೆಯಾಗಲಿದೆ.

English summary
All the rivers are overflowing with heavy rainfall in the Malnad region, including Shivamogga district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X