ಶಿವಮೊಗ್ಗ ದಸರಾ; ಎಲ್ಲಾ ಸಾಂಸ್ಕೃತಿಕ ಕಾರ್ಯಕ್ರಮ ರದ್ದು

ಶಿವಮೊಗ್ಗ, ಅಕ್ಟೋಬರ್ 15: ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ದಸರಾ ನಾಡಹಬ್ಬವನ್ನು ಸರಳವಾಗಿ ಆಚರಣೆ ಮಾಡುತ್ತಿದೆ. ಶಿವಮೊಗ್ಗ ದಸರಾವನ್ನು ಸಹ ಸರಳವಾಗಿ ಆಚರಣೆ ಮಾಡಲು ತೀರ್ಮಾನಿಸಲಾಗಿದೆ.

ನಾಡ ಹಬ್ಬದ ಆಚರಣೆ ಸಂದರ್ಭದಲ್ಲಿ100ಕ್ಕಿಂತ ಹೆಚ್ಚು ಜನರು ಒಮ್ಮೆಲೇ ಸೇರುವಂತಿಲ್ಲ. ಮಾಸ್ಕ್ ಧರಿಸಬೇಕು ಹಾಗೂ ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಪಾಲಿಸುವಂತೆ ರಾಜ್ಯ ಸರ್ಕಾರ ಆದೇಶ ನೀಡಿದೆ.

ಅಕ್ಟೋಬರ್ 17 ರಿಂದ 29ರ ತನಕ 9 ದಿನಗಳ ಕಾಲ ನಡೆಯುವ ದಸರಾ ನಾಡ ಹಬ್ಬದ ಆಚರಣೆಯನ್ನು ಸರಳ ರೀತಿಯಲ್ಲಿ ಆಚರಿಸಲು ತೀರ್ಮಾನ ಮಾಡಲಾಗಿದೆ. ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ಇರುವುದಿಲ್ಲ.

Dasara 2020 No Cultural Programs Due To COVID 19

ಬನ್ನಿ ಮುಡಿಯುವ ಕಾರ್ಯಕ್ರಮವನ್ನು ವಿವಿಧ ಮಾಧ್ಯಮಗಳಲ್ಲಿ ನೇರ ಪ್ರಸಾರ ಮಾಡುತ್ತಿದ್ದು, ದಸರಾ ಹಬ್ಬವನ್ನು ಸಾರ್ವಜನಿಕರು ಮನೆಯಲ್ಲಿಯೇ ವೀಕ್ಷಿಸಬಹುದಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.

ಹಬ್ಬ ಹರಿದಿನಗಳು ಸಮಾಜದ ಶಾಂತಿ ಸೌಹಾರ್ದತೆ ಮತ್ತು ಸಾಮರಸ್ಯವನ್ನು ಕಾಪಾಡಲು ಪೂರಕವಾಗಿರುವುದರಿಂದ ದಸರಾ ನಾಡ ಹಬ್ಬವನ್ನು ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯೊಂದಿಗೆ ಜನರು ಸಹಕರಿಸಬೇಕಿದೆ.

ಬುಧವಾರದ ವರದಿಯಂತೆ ಶಿವಮೊಗ್ಗದಲ್ಲಿ 83 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 19,099 ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+